ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪಂಚಮಸಾಲಿ ಶ್ರೀಗೆ ಬಿಜೆಪಿ ಸುಪಾರಿ: ಕೆ ಎಸ್ ಶಿವರಾಮು ಆರೋಪ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುಲಿಂಗಾಯತ ವಿರೋಧಿ ಎಂದು ಕರೆದಿರುವ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ಖಂಡಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನಲ್ಲಿ ಸಭೆ ನಡೆಸಿ ನಡೆಸಿ ಸ್ವಾಮೀಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಬಿಜೆಪಿಯವರು ಸುಪಾರಿ ನೀಡಿದ್ದಾರೆ” ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ ಎಸ್ ಶಿವರಾಮು ದೂರಿದ್ದಾರೆ.

ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಕೆಲವು ವರ್ಷಗಳ ಹಿಂದೆಯಷ್ಟೆ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಸ್ವಾಮೀಜಿ ಈಗ ದ್ವೇಷ ಕಾರುತ್ತಿದ್ದಾರೆ” ಎಂದರು.

Advertisements

“ಒಂದು ಸಮುದಾಯವನ್ನು ಸಿದ್ದರಾಮಯ್ಯ ವಿರುದ್ಧ ಎತ್ತಿಕಟ್ಟುವ ಷಡ್ಯಂತ್ರ ಸ್ವಾಮೀಜಿ ಅವರದ್ದಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ. ಹಿಂದೂಳಿದ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸದ ಮೂಲಕ ಅಪನಂಬಿಕೆ ಸೃಷ್ಟಿಸುತ್ತಿದ್ದಾರೆ. ಸೌಹಾರ್ದ ಹಾಳಾಗಲೆಂದು ಕುಮ್ಮಕ್ಕು ಕೊಡುತ್ತಿದ್ದಾರೆ. ರಾಜಕೀಯ ಪುಢಾರಿ ರೀತಿ ಅವರು ಮಾತನಾಡುತ್ತಿದ್ದಾರೆ” ಎಂದು ಹರಿಹಾಯ್ದರು.

“ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಸಾಧ್ಯವೇ? ಕೋರ್ಟು-ಕಾನೂನು ಏನು ಹೇಳುತ್ತದೆ?

“ಸ್ವಾಮೀಜಿ ಅವರಂತೆ ಮಾತನಾಡಲು ನಮಗೂ ಬರುತ್ತದೆ. ಆದರೆ, ಅದಕ್ಕೆ ಅವಕಾಶ ಕೊಡುವ ಕೆಲಸವನ್ನು ಅವರು ಮಾಡಬಾರದು. ಲಿಂಗಾಯತ ಪಂಚಮಸಾಲಿ ಸಮಾಜ ಎಲ್ಲ ರೀತಿಯಲ್ಲೂ ಮುಂದುವರಿದಿದೆ. ಅವರನ್ನು ಹಿಂದುಳಿದ ವರ್ಗ-2ಎಗೆ ಸೇರಿಸಲು ನಮ್ಮ ಪ್ರಬಲ ವಿರೋಧವಿದೆ. ಒಂದು ಜಾತಿಯ ಪರವಾಗಿ ಗುರುತಿಸಿಕೊಂಡರೆ ಅಂಥವರು ಸನ್ಯಾಸಿಯಾಗಲು ಯೋಗ್ಯರಲ್ಲ; ಹಗಲುವೇಷ ಹಾಕಿದವರು ಎನ್ನಬೇಕಾಗುತ್ತದೆ” ಎಂದು ಕೆ ಎಸ್ ಶಿವರಾಮು ಟೀಕಿಸಿದರು.

“ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬ ಜಾತಿವಾದಿಗಳ ಹುನ್ನಾರದ ಭಾಗವಾಗಿ ಷಡ್ಯಂತ್ರ ಮಾಡುತ್ತಿದ್ದಾರೆ. ಸಂಚು ರೂಪಿಸುತ್ತಿದ್ದಾರೆ. ಜಾತಿ ಮುಂದಿಟ್ಟುಕೊಂಡು ಅಶಾಂತಿ ಸೃಷ್ಟಿಸುತ್ತಿದ್ದಾರೆ” ಎಂದು ಅಹಿಂದ ಮುಖಂಡ ಶಿವಣ್ಣ ಹೇಳಿದರು.

ಕಾಂಗ್ರೆಸ್‌ ನಗರ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಕಾಂಗ್ರೆಸ್‌ ನಗರ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ವಿವಿಧ ಸಮಾಜಗಳ ಮುಖಂಡರಾದ ಯೋಗೇಶ್ ಉಪ್ಪಾರ್, ಎಸ್.ರವಿನಂದನ್, ರಾಜೇಶ್, ಹರೀಶ್ ಮೊಗಣ್ಣ, ಖಲೀಂ, ಕೆಂಪಶೆಟ್ಟಿ, ಸುನೀಲ್, ಮಲ್ಲೇಶ್, ಲಿಂಗರಾಜು, ದೇವಣ್ಣ, ಪಾಪಣ್ಣ, ಕೃಷ್ಣಪ್ಪ, ಹುಚ್ಚೇಗೌಡ, ಕೋಟೆ ಶಿವಣ್ಣ, ಸೋಮಣ್ಣ, ಕಾಂತರಾಜು, ರಾಜಶೇಖರ್, ಚಂದ್ರಪ್ಪ, ವಿಶ್ವನಾಥ್‌, ನಂಜುಂಡ ಹಾಗೂ ಲಕ್ಷ್ಮಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X