ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ‘ಸುಪ್ರೀಂ’ ತಾತ್ಕಾಲಿಕ ತಡೆ

Date:

  • ಮುಂದಿನ ವಿಚಾರಣೆ ಮೇ 9ಕ್ಕೆ ಮುಂದೂಡಿಕೆ
  • ಕೆ ಎಂ ಜೋಸೆಫ್‌ ನೇತೃತ್ವದ ಪೀಠದಿಂದ ಆದೇಶ

ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದು ಆದೇಶವನ್ನು ಮುಂದಿನ ವಿಚಾರಣೆವರೆಗೆ ಜಾರಿಗೊಳಿಸದಂತೆ ಸುಪ್ರೀಂಕೋರ್ಟ್ ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

- Advertisement -

ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಏಪ್ರಿಲ್ 13ರಂದು ನಡೆಸಿತ್ತು. ಆಗ, “ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷ ಪೂರಿತ ಮತ್ತು ಪ್ರಮಾದದಿಂದ ಕೂಡಿದೆ” ಎಂದು ಹೇಳಿತ್ತು.

ಮಂಗಳವಾರದ ವಿಚಾರಣೆ ಮುಂದುವರಿಸಿದ ಸುಪ್ರೀಂ ಕೋರ್ಟ್‌ ಮೇ 9ಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿಯವರೆಗೆ ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಅಭ್ಯರ್ಥಿ ನಾಮಪತ್ರ ರಕ್ಷಣೆಗೆ ನಿಯಮ ಉಲ್ಲಂಘಿಸಿದ ಆಯೋಗ; ರಮೇಶ್‌ ಬಾಬು ಆರೋಪ

ಮೀಸಲಾತಿ ಪರಿಷ್ಕರಣೆ ವೇಳೆ ಮುಸ್ಲಿಮರಿಗೆ ರಾಜ್ಯ ಸರ್ಕಾರ ಶೇ. 4ರ ಮೀಸಲಾತಿ ರದ್ದು ಮಾಡಿತ್ತು. ಸರ್ಕಾರದ ಈ ಆದೇಶ ಸಾಮಾಜಿಕ ವಲಯದಲ್ಲಿ ಹೆಚ್ಚು ಚರ್ಚೆಗೀಡಾಗಿತ್ತು. ಸುಪ್ರೀಂಕೋರ್ಟ್‌ ಆದೇಶದಿಂದಾಗಿ ಈಗ ಒಕ್ಕಲಿಗ ಮತ್ತು ಲಿಂಗಾಯತ ಮೀಸಲಾತಿ ಹೆಚ್ಚಳದ ಮೇಲೆ ಪರಿಣಾಮ ಬೀಳಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...