ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ಯಾವಾಗ ಮರುಸ್ಥಾಪಿಸುತ್ತೀರಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

Date:

ಪ್ರಜಾಪ್ರಭುತ್ವ ಮರುಸ್ಥಾಪನೆ ಮುಖ್ಯವಾಗಿದ್ದು, ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಯಾವಾಗ ಮರು ಸ್ಥಾಪಿಸುತ್ತೀರಿ ಎಂಬುದರ ಬಗ್ಗೆ ನಿರ್ದಿಷ್ಟ ಕಾಲಮಿತಿಯನ್ನು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

- Advertisement -

ಜಮ್ಮು ಮತ್ತು ಕಾಶ್ಮೀರದ 370 ವಿಧಿಯ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರನ್ನು ರಾಜ್ಯ ಮರು ಸ್ಥಾಪನೆಯ ಕಾಲಮಿತಿಯ ಬಗ್ಗೆ ಪ್ರಶ್ನಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

2020ರಲ್ಲಿ ಕೊನೆಯ ಬಾರಿಗೆ ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳು ನಡೆದಿದ್ದವು. ಸರ್ಕಾರವು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಆರಂಭಿಸಿದೆ. ನಿಮ್ಮ ಸೂಚನೆಗಳನ್ನು ಕೇಂದ್ರ ಸರ್ಕಾರದ ಮುಂದಿಡುತ್ತೇನೆ ಎಂದು ಸಾಲಿಸಿಟರ್‌ ಜನರಲ್‌ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚೀನಾದ ಹೊಸ ನಕ್ಷೆಯಲ್ಲಿ ಅರುಣಾಚಲ ಪ್ರದೇಶ ಸೇರ್ಪಡೆ: ಭಾರತ ಆಕ್ರೋಶ

ಇವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳು ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ರಾಷ್ಟ್ರದ ಸಂರಕ್ಷಣೆಯೇ ಮುಖ್ಯವಾದ ಕಾಳಜಿಯಾಗಿದೆ. ಪ್ರಜಾಪ್ರಭುತ್ವ ಪ್ರಕ್ರಿಯೆ ಆರಂಭವಾಗಿದೆ ಎಂಬ ನಿಮ್ಮ ಅಭಿಪ್ರಾಯವನ್ನು ನಾವು ಸ್ವೀಕರಿಸುತ್ತೇವೆ. ಪ್ರಕ್ರಿಯೆಯ ಮಾರ್ಗಸೂಚಿ ಬಗ್ಗೆ ಸರ್ಕಾರವೂ ನಮ್ಮ ಮುಂದೆ ಹೇಳಿಕೆ ನೀಡಬೇಕು. ಜಮ್ಮು ಮತ್ತು ಕಾಶ್ಮೀರವು ಶಾಶ್ವತವಾಗಿ ಕೇಂದ್ರಾಡಳಿತ ಪ್ರದೇಶವಾಗಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸಾಲಿಸಿಟರ್‌ ಜನರಲ್‌ ಅವರಿಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...