ಮುಸ್ಲಿಮರ ಮೀಸಲಾತಿ ರದ್ದು; ಏಪ್ರಿಲ್ 25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Date:

  • ಕೆ ಎಂ ಜೋಸೆಫ್ ಹಾಗೂ ಕೆ ಎಸ್ ನಾಗರತ್ನ ನೇತೃತ್ವದ ದ್ವಿಸದಸ್ಯ ಪೀಠದ ವಿಚಾರಣೆ
  • ಮೀಸಲಾತಿ ನಿರ್ಧಾರ ತೀರ ಕಳಪೆ ಹಾಗೂ ದೋಷಪೂರಿತ ಎಂದು ಹೇಳಿದ್ದ ಪೀಠ

ಮುಸ್ಲಿಮರಿಗೆ ನೀಡಲಾಗಿರುವ ಶೇ. 4ರಷ್ಟು ಮೀಸಲಾತಿ ರದ್ದುಗೊಳಿಸಿರುವ ಪ್ರಕರಣ ಸಂಬಂಧ ಪ್ರತಿಕ್ರಿಯಿಸಲು ಕರ್ನಾಟಕ ಸರ್ಕಾರವು ಸಮಯಾವಕಾಶ ಕೇಳಿದ್ದು, ಹೀಗಾಗಿ ಸುಪ್ರೀಂ ಕೋರ್ಟ್‌ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರವು ಉತ್ತರ ಸಲ್ಲಿಸಲು ಸಮಯ ಕೋರಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶೇ. 4ರಷ್ಟು ಮುಸ್ಲಿಂ ಮೀಸಲಾತಿ ರದ್ದುಗೊಳಿಸುವುದರ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 25ರವರೆಗೆ ಮುಂದೂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಎಲ್ ಗುಲಾಮ್‌ರಸೂಲ್ ಮತ್ತು ಅಂಜುಮನ್-ಇ-ಇಸ್ಲಾಂ ಸರಕಾರಿ ಆದೇಶವನ್ನು ಪ್ರಶ್ನಿಸುವ ರಿಟ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ಎಂ ಜೋಸೆಫ್ ಹಾಗೂ ಕೆ ಎಸ್ ನಾಗರತ್ನ ನೇತೃತ್ವದ ದ್ವಿಸದಸ್ಯ ಪೀಠವು ಮಂಗಳವಾರ ಕೈಗೆತ್ತಿಕೊಂಡಿತು. ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿ ಅನುಮತಿಸುವುದಿಲ್ಲ ಎಂದು ರಾಜ್ಯವು ಪ್ರತಿಪಾದಿಸಿದೆ.

ಪೀಠದಲ್ಲಿದ್ದ ಮತ್ತೊಬ್ಬರು ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು, ಮಧ್ಯಂತರ ವರದಿಯ ಆಧಾರದ ಮೇಲೆ ಸರಕಾರಿ ಆದೇಶ ನೀಡುವ ಬದಲು ರಾಜ್ಯವು ಅಂತಿಮ ವರದಿಗಾಗಿ ಕಾಯಬಹುದಿತ್ತು ಹಾಗೂ “ಮಹಾತುರ್ತು” ತಿಳಿಯಲು ಪ್ರಯತ್ನಿಸಬಹುದಿತ್ತು ಎಂದರು.

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ಮೀಸಲಾತಿ ರದ್ದು ತೀರ್ಮಾನ ತೀರ ಕಳಪೆ, ದೋಷಪೂರಿತ ನಿರ್ಧಾರ ಎಂದ ಸುಪ್ರೀಂ ಕೋರ್ಟ್

ಆದರೆ, ರಾಜ್ಯ ಸರಕಾರ ಹಾಗೂ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಕೆಲವು ಮುಖಂಡರ ಪರ ವಾದ ಮಂಡಿಸಿದ ವಕೀಲರು ಯಾವುದೇ ತಡೆಯಾಜ್ಞೆ ವಿರೋಧಿಸಿದರು ಮತ್ತು ಉತ್ತರಿಸಲು ಕೆಲವು ದಿನಗಳ ಕಾಲಾವಕಾಶ ಕೋರಿದರು. ಅರ್ಜಿದಾರರು ಕೋರಿದ ಯಾವುದೇ ಮಧ್ಯಂತರ ಪರಿಹಾರವನ್ನು ನೀಡಲು ಪೀಠವು ನಿರಾಕರಿಸಿತು.

ಮೀಸಲಾತಿ ರದ್ದು ಸಂಬಂಧ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಏಪ್ರಿಲ್ 13ರಂದು ನಡೆಸಿದ್ದ ಸುಪ್ರೀಂ ಕೋರ್ಟ್‌ನ ಇದೇ ಪೀಠ, ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ‘ತೀರ ಕಳಪೆ ಹಾಗೂ ದೋಷಪೂರಿತದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಹೇಳಿತ್ತು.  

ಈ ಮೊದಲು ಒಕ್ಕಲಿಗರು ಶೇ. 4 ಮತ್ತು ಲಿಂಗಾಯತರು ಶೇ. 5 ಮೀಸಲಾತಿ ಹೊಂದಿದ್ದರು. ರಾಜ್ಯ ಸಚಿವ ಸಂಪುಟದ ನಿರ್ಧಾರದ ನಂತರ, ಒಕ್ಕಲಿಗರು ಶೇ. 6ರಷ್ಟು ಮತ್ತು ಲಿಂಗಾಯತರು ಶೇ. 7ರಷ್ಟು ಮೀಸಲಾತಿ ಪಡೆಯುತ್ತಾರೆ.

ಒಬಿಸಿ ವರ್ಗದಿಂದ ಮುಸ್ಲಿಮರನ್ನು ತೆಗೆದುಹಾಕಿ ಶೇ. 10ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ದುರ್ಬಲ ವಿಭಾಗದಡಿಯಲ್ಲಿ ಅವರಿಗೆ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಮೀಸಲಾತಿ ಮಿತಿ ಸುಪ್ರೀಂಕೋರ್ಟ್ ನಿಗದಿ ಮಾಡಿದ ಶೇ. 57ನ್ನು ಮೀರುತ್ತದೆ.       

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...