ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್; ಗುಜರಾತ್‌ ಸರ್ಕಾರಕ್ಕೆ ನೋಟಿಸ್

Date:

Advertisements

2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರಿಗೆ ಸುಪ್ರೀಂ ಕೋರ್ಟ್‌ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ಜುಲೈ 19ರವರೆಗೆ ವಿಸ್ತರಿಸಿದೆ.

ನಿಯಮಿತ ಜಾಮೀನು ಅರ್ಜಿಯನ್ನು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶದ ವಿರುದ್ಧ ತೀಸ್ತಾ ಸೆಟಲ್ವಾಡ್‌ ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಜುಲೈ 19ರಂದು ನಿಗದಿಪಡಿಸಲಾಗಿದೆ.

ಜುಲೈ 1ರಂದು ನ್ಯಾಯಾಲಯಕ್ಕೆ ಕೂಡಲೇ ಶರಣಾಗುವಂತೆ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಗುಜರಾತ್ ಹೈಕೋರ್ಟ್ ಶನಿವಾರ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಒಂದು ವಾರದವರೆಗೆ ತಡೆಯಾಜ್ಞೆ ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ? ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಸಾಕ್ಷ್ಯಗಳಾಗಿ ಮಾಡಿದ ಆರೋಪದ ಮೇಲೆ ತೀಸ್ತಾ, ನಿವೃತ್ತ ಪೊಲೀಸ್ ಅಧಿಕಾರಿ ಆರ್ ಬಿ ಶ್ರೀಕುಮಾರ್ ಸೇರಿದಂತೆ ಇತರರ ವಿರುದ್ಧ ಗುಜರಾತ್ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ತೀಸ್ತಾ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇದರ ಅವಧಿ ಪೂರ್ಣಗೊಂಡ ಕಾರಣ ಕೋರ್ಟ್‌ಗೆ ಶರಣಾಗುವಂತೆ ಹೈಕೋರ್ಟ್ ಸೂಚಿಸಿತ್ತು.

ಹಾಗಾಗಿ, ತ್ವರಿತವಾಗಿ ಜಾಮೀನಿನ ವಿಚಾರಣೆ ನಡೆಸುವಂತೆ ತೀಸ್ತಾ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಅವರ ಸೂಚನೆ ಮೇರೆಗೆ ನ್ಯಾಯಾಲಯದ ಕಲಾಪ ಮುಗಿದ ಬಳಿಕ ಸಂಜೆ 6.30ಕ್ಕೆ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಈ ಬಗ್ಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿ ವಿಸ್ತೃತ ಪೀಠಕ್ಕೆ ಜಾಮೀನು ಅರ್ಜಿಯನ್ನು ವರ್ಗಾಯಿಸಿತ್ತು.

ಹಿರಿಯ ವಕೀಲ ಚಂದರ್ ಉದಯ್ ಸಿಂಗ್ ಮತ್ತು ವಕೀಲರಾದ ಅರ್ಪಣಾ ಭಟ್ ಅವರು, ತೀಸ್ತಾ ಪರ ವಾದ ಮಂಡಿಸಿದರು.

ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಕಳಂಕ ತರುವ ಉದ್ದೇಶದಿಂದ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ವಿರುದ್ಧ 2022ರ ಜೂನ್ 24ರಂದು ಎಫ್ಐಆರ್ ದಾಖಲಿಸಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಅವರಿಗೆ ಸೆಪ್ಟೆಂಬರ್ 2ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X