ಖರ್ಗೆ ಅವರನ್ನು ‘ಅಯೋಗ್ಯ’ ಎಂದ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Date:

Advertisements

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಾರ್ವಜನಿಕವಾಗಿ ‘ಅಯೋಗ್ಯ’ ಎಂದು ಕರೆದಿದ್ದ ಬಲಪಂಥೀಯ ನಾಯಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ರದ್ದುಗೊಳಿಸಿದೆ.

2024ರ ಜನವರಿಯಲ್ಲಿ ಚಕ್ರವರ್ತಿ ಸೂಲಿಬೆಲೆ ರಾಯಚೂರಿನಲ್ಲಿ ಸಾರ್ವಜನಿಕ ಭಾಷಣ ಮಾಡಿದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಅಯೋಗ್ಯ’ ಎಂದು ಹೇಳಿದ್ದರು. ಈ ಸಂಬಂಧ ಕಾಂಗ್ರೆಸ್ ಕಲಬುರಗಿ ಘಟಕದ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ದೂರು ನೀಡಿದ್ದು, ಖರ್ಗೆ ಅವರ ಜಾತಿ ನಿಂದನೆ ಮತ್ತು ಹಿಂಸಾಚಾರ ಪ್ರಚೋದಿಸುವ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಮೇಲೇಕೆ ಆರೆಸ್ಸೆಸ್‌ನಿಂದ ವ್ಯವಸ್ಥಿತ ದಾಳಿ?

Advertisements

ತಮ್ಮ ವಿರುದ್ಧ ದಾಖಲಾಗಿರುವ ದೂರನ್ನು ಸೂಲಿಬೆಲೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, 2024ರಲ್ಲಿ ಕೋರ್ಟ್ ಎಸ್‌ಸಿ/ಎಸ್‌ಟಿ ಕಾಯ್ದೆಯ ಆರೋಪಗಳನ್ನು ರದ್ದುಗೊಳಿಸಿತ್ತು. ಆದರೆ ಇತರೆ ಅಪರಾಧಗಳಡಿ ತನಿಖೆ ಮುಂದುವರಿಸಲು ಕೋರ್ಟ್ ಅವಕಾಶ ನೀಡಿತ್ತು. ಅದಾದ ಬಳಿಕ ಸೂಲಿಬೆಲೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ‘ಅಯೋಗ್ಯ’ ಪದವನ್ನು ‘ರಾಸ್ಕಲ್’ ಎಂದು ತಪ್ಪಾಗಿ ಅರ್ಥೈಸಿದೆ ಎಂದು ವಾದಿಸಿದರು.

‘ಅಯೋಗ್ಯ’ ಎಂಬ ಪದವು ಹಲವು ಸಮಾನಾರ್ಥಕ ಪದಗಳನ್ನು ಹೊಂದಿದ್ದು, ಅದರ ಅತ್ಯಂತ ಹತ್ತಿರದ ಪದ ‘ನಿಷ್ಪ್ರಯೋಜಕ’ ಎಂದು ಸೂಲಿಬೆಲೆ ವಾದಿಸಿದರು. ಹೈಕೋರ್ಟ್ ಈ ಪದವನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂದೂ ಹೇಳಿದರು. ವಾದ ಆಲಿಸಿದ ಸುಪ್ರೀಂ ಕೋರ್ಟ್ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದೆ. ಹಿರಿಯ ವಕೀಲ ಅರುಣಾ ಶ್ಯಾಮ್ ಸೂಲಿಬೆಲೆ ಪರ ವಾದ ಮಂಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X