ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಲು ಡಿ ಕೆ ಶಿವಕುಮಾರ್ ಕೋರಿದ್ದ ಅರ್ಜಿ ಸುಪ್ರೀಂನಿಂದ ವಜಾ

Date:

Advertisements

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಮ್ಮ ವಿರುದ್ಧ ದಾಖಲಿಸಿದ್ದ ಎಫ್‌ಐಆರ್‌ ವಜಾಗೊಳಿಸುವಂತೆ ಕರ್ನಾಟಕ ಡಿಸಿಎಂ ಡಿ ಕೆ ಶಿವಕುಮಾರ್ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಪ್ರಕರಣವನ್ನು ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಬಾರಿಯ ಅಧಿವೇಶನದಲ್ಲಾದರೂ ಜನಪರ ಚರ್ಚೆ-ವಾಗ್ವಾದ ನಡೆಯಬಹುದೇ?

Advertisements

ಭ್ರಷ್ಟಾಚಾರ ತಡೆ ಕಾಯ್ದೆಯಡಿ(ಪಿಸಿಎ) ಡಿ ಕೆ ಶಿವಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳ ಪ್ರಕರಣ 2020ರಲ್ಲಿ ಪ್ರಕರಣ ದಾಖಲಿಸಿತ್ತು.

2019ರಲ್ಲಿ ಆದಾಯ ತೆರಿಗೆ ಇಲಾಖೆ ಶಿವಕುಮಾರ್ ನಿವಾಸ ಹಾಗೂ ಅವರ ಸ್ವತ್ತುಗಳ ಹಲವು ಕಡೆ ದಾಳಿ ನಡೆಸಿದಾಗ ದಾಖಲೆಯಿಲ್ಲದ 41 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.

2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X