ಭಾರತದಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಬಳೆಯನ್ನು ಜಾರಿಗೆ ತರಬೇಕು. ಇವಿಎಂ ಬಳಕೆಯನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿ.ಬಿ. ವರಾಳೆ ಅವರಿದ್ದ ಪೀಠವು, “ನೀವು ಚುನಾವಣೆಯಲ್ಲಿ ಗೆದ್ದಾಗ ಇವಿಎಂಗಳನ್ನು ಟ್ಯಾಂಪರ್ ಮಾಡಿರುವುದಿಲ್ಲ. ನೀವು ಚುನಾವಣೆಯಲ್ಲಿ ಸೋತಾಗ, ಇವಿಎಂಗಳನ್ನು ಟ್ಯಾಂಪರ್ ಮಾಡಲಾಗುತ್ತದೆಯೇ” ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿ ಸಲ್ಲಸಿದ್ದ ಅರ್ಜಿದಾರ ಕೆ.ಎ ಪೌಲ್ ಅವರನ್ನು ಪ್ರಶ್ನಿಸಿದ ಪೀಠವು, “ನಿಮ್ಮ ಬಳಿ ಆಸಕ್ತಿದಾಯಕ ಪಿಐಎಲ್‌ಗಳಿವೆ. ಈ ಅದ್ಭುತ ವಿಚಾರಗಳನ್ನು ನೀವು ಹೇಗೆ ಪಡೆಯುತ್ತೀರಿ? ನೀವು ಈ ರಾಜಕೀಯ ಕ್ಷೇತ್ರಕ್ಕೆ ಏಕೆ ಬರುತ್ತಿದ್ದೀರಿ? ನಿಮ್ಮ ಕೆಲಸದ ಕ್ಷೇತ್ರವು ತುಂಬಾ ವಿಭಿನ್ನವಾಗಿದೆ” ಎಂದು ಕೇಳಿದೆ.
ಅರ್ಜಿದಾರ ಪೌಲ್ ಅವರು 3 ಲಕ್ಷಕ್ಕೂ ಹೆಚ್ಚು ಅನಾಥರು ಮತ್ತು 40 ಲಕ್ಷ ವಿಧವೆಯರನ್ನು ರಕ್ಷಿಸಿದ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಅವರು 150ಕ್ಕೂ ಹೆಚ್ಚು ದೇಶಗಳಿಗೆ ಹೋಗಿದ್ದಾರೆ. ಬಹುತೇಕ ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮತದಾನವನ್ನು ಅಳವಡಿಸಿಕೊಂಡಿವೆ. ಭಾರತವೂ ಇದನ್ನು ಅನುಸರಿಸಬೇಕು ಎಂದು ವಾದಿಸಿದ್ದಾರೆ.
ಅವರ ವಾದಕ್ಕೆ ಪ್ರತಿಕ್ರಿಯಿಸಿದ ಪೀಠವು, “ನೀವು ಪ್ರಪಂಚದ ಇತರ ಭಾಗಗಳಿಗಿಂತ ಭಿನ್ನವಾಗಿರಲು ಏಕೆ ಬಯಸುವುದಿಲ್ಲ?” ಎಂದು ಪೀಠ ಕೇಳಿತು. ಉತ್ತರಿಸಿದ ಪೌಲ್, “ಚುನಾವನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ವರ್ಷ (2024) ಜೂನ್‌ನಲ್ಲಿ ಚುನಾವಣಾ ಆಯೋಗವು 9,000 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿರುವುದಾಗಿ ಘೋಷಿಸಿದೆ” ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಆದರೆ ನೀವು ಇಲ್ಲಿ ಹೇಳುತ್ತಿರುವ ನಿಮ್ಮ ಪರಿಹಾರವನ್ನು ಅದು ಹೇಗೆ ಪ್ರಸ್ತುತವಾಗಿಸುತ್ತದೆ? ನೀವು ಬ್ಯಾಲೆಟ್ ಪೇಪರ್ ಮತದಾನ ನಡೆದರೆ ಭ್ರಷ್ಟಾಚಾರ ನಡೆಯುವುದಿಲ್ಲವೇ” ಎಂದು ಪೀಠ ಪ್ರಶ್ನಿಸಿತು.
“ಟೆಸ್ಲಾದ ಸಿಇಒ ಮತ್ತು ಸಹ-ಸಂಸ್ಥಾಪಕ ಎಲೋನ್ ಮಸ್ಕ್ ಅವರು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಪ್ರಸ್ತುತ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಇವಿಎಂಗಳನ್ನು ಟ್ಯಾಂಪರ್ ಮಾಡಬಹುದು ಎಂದು ಹೇಳಿದ್ದರು” ಎಂದು ಪೌಲ್ ಕೋರ್ಟ್‌ಗೆ ಹೇಳಿದ್ದಾರೆ.
ಈ ವರದಿ ಓದಿದ್ದೀರಾ?: ಏನಿದು ಅದಾನಿ ಲಂಚದ ಹಗರಣ: ಇಲ್ಲಿದೆ ಸಂಪೂರ್ಣ ಮಾಹಿತಿ
“ಚಂದ್ರಬಾಬು ನಾಯ್ಡು ಸೋತಾಗ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದರು. ಈಗ ಈ ಬಾರಿ ಜಗನ್ ಮೋಹನ್ ರೆಡ್ಡಿ ಸೋತರು. ಹಾಗಾಗಿ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ” ಎಂದು ಪೀಠ ಹೇಳಿತು.
ಚುನಾವಣೆಯಲ್ಲಿ ಹಣ ಹಂಚುವುದು ಎಲ್ಲರಿಗೂ ತಿಳಿದಿದೆ ಎಂದು ಅರ್ಜಿದಾರರು ಹೇಳಿದಾಗ, ಪೀಠವು, “ನಾವು ಯಾವುದೇ ಚುನಾವಣೆಗೆ ಹಣವನ್ನು ಪಡೆದಿಲ್ಲ” ಎಂದು ಹೇಳಿದೆ.
ಚುನಾವಣಾ ಪ್ರಚಾರದ ಸಮಯದಲ್ಲಿ ಹಣ ಮತ್ತು ಮದ್ಯದ ಬಳಕೆಯನ್ನು ನಿಯಂತ್ರಿಸಲು ಮತ್ತು ಅಂತಹ ಅಭ್ಯಾಸಗಳನ್ನು ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ ಮತ್ತು ಶಿಕ್ಷಾರ್ಹವಾಗಿದೆ. ಇದನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಚೌಕಟ್ಟನ್ನು ರೂಪಿಸುವುದು ತನ್ನ ಮನವಿಯ ಮತ್ತೊಂದು ಆಗ್ರಹವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.