ಭಿನ್ನಾಭಿಪ್ರಾಯ ಹತ್ತಿಕ್ಕಲು ಸೋನಮ್ ವಾಂಗ್‌ಚುಕ್ ಬಂಧನ ಎಂದ ಪತ್ನಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

Date:

ಭಿನ್ನಾಭಿಪ್ರಾಯ ಹತ್ತಿಕ್ಕಲು ಲಡಾಖ್ ಹೋರಾಟಗಾರರ ಸೋನಮ್ ವಾಂಗ್‌ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅವರ ಪತ್ನಿ ಗೀತಾಂಜಲಿ ಜೆ ಅಂಗ್ಮೋ ಆರೋಪಿಸಿದ್ದಾರೆ.

- Advertisement -

ತಮ್ಮ ಪತಿ ಸೋನಮ್ ಬಂಧನವನ್ನು ಪ್ರಶ್ನಿಸಿ ಗೀತಾಂಜಲಿ ಅವರು ಸಲ್ಲಿಸಿದ್ದ ತಿದ್ದುಪಡಿ ಮಾಡಿದ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಂಡಿದೆ. ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್‌ವಿ ಅಂಜಾರಿಯಾ ಅವರ ಪೀಠದ ಮುಂದೆ ವಾದ ಮಂಡಿಸಿದ ಗೀತಾಂಜಲಿ ಅವರು, “ಬಂಧನ ಆದೇಶ ಸಂಪೂರ್ಣವಾಗಿ ಅಕ್ರಮವಾಗಿದೆ. ಹಳೆಯ, ಅಪ್ರಸ್ತುತ ಎಫ್‌ಐಆರ್‌ಗಳನ್ನು ಈ ಬಂಧನ ಆದೇಶದಲ್ಲಿ ಉಲ್ಲೇಖಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಲಡಾಖ್ ಹಿಂಸಾಚಾರಕ್ಕೆ ಸೋನಮ್ ವಾಂಗ್‌ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ

“ಎಫ್‌ಐಆರ್‌ಗಳಲ್ಲಿ ಮೂರು 2024ಕ್ಕೆ ಸಂಬಂಧಿಸಿದೆ. 2025ರ ಸೆಪ್ಟೆಂಬರ್‌ನಲ್ಲಿ ವಾಂಗ್‌ಚುಕ್ ಬಂಧನಕ್ಕೆ ಯಾವುದೇ ನಿಕಟ, ತಾರ್ಕಿಕ ಸಂಬಂಧವಿಲ್ಲ. ಇದಲ್ಲದೆ ಒಟ್ಟು ಐದು ಎಫ್‌ಐಆರ್‌ಗಳಲ್ಲಿ ನಾಲ್ಕು ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿರುವಂತದ್ದು. ವಾಂಗ್‌ಚುಕ್ ಹೆಸರು ಆ ಎಫ್‌ಐಆರ್‌ಗಳಲ್ಲಿ ಇಲ್ಲ” ಎಂದು ತಿಳಿಸಿದ್ದಾರೆ.

ಇನ್ನು ವಾದ ಆಲಿಸಿದ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶಿಸಿದೆ. ಅಗತ್ಯವಿದ್ದರೆ ಸೋನಮ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮರುಪ್ರತ್ಯಾರೋಪ ಸಲ್ಲಿಸಲು ನ್ಯಾಯಾಲಯವು ಅವಕಾಶ ನೀಡಿದೆ.

ವಾಂಗ್‌ಚುಕ್ ಅವರ ಬಂಧನವನ್ನು ಪ್ರಶ್ನಿಸಿ ಹೆಚ್ಚುವರಿ ಆಧಾರಗಳೊಂದಿಗೆ ತಿದ್ದುಪಡಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡುವಂತೆ ಆಂಗ್ಮೋ ಅಕ್ಟೋಬರ್ 15ರಂದು ಕೋರಿದ್ದರು. ಇದಾದ ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಿತ್ತು. ಸದ್ಯ ಸೋನಮ್ ಅವರು ರಾಜಸ್ಥಾನದ ಜೋಧ್‌ಪುರ ಕೇಂದ್ರ ಜೈಲಿನಲ್ಲಿದ್ದಾರೆ.

ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ 6ನೇ ಪರಿಚ್ಚೇದಕ್ಕೆ ಸೇರಿಸುವಂತೆ ಆಗ್ರಹಿಸಿ ವಾಂಗ್‌ಚುಕ್ ಹಲವು ಬಾರಿ ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಸಿದ್ದಾರೆ. ಸೆಪ್ಟೆಂಬರ್ 24ರಂದು ಲೇಹ್‌ನಲ್ಲಿ ಪ್ರತಿಭಟನಾ ಸ್ಥಳದ ಹೊರಭಾಗದಲ್ಲಿ ಹಿಂಸಾಚಾರ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಸೆ.26ರಂದು ಸೋನಮ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...