ಮಣಿಪುರ ಹಿಂಸಾಚಾರ : 6 ಪ್ರಮುಖ ಪ್ರಶ್ನೆಗಳನ್ನು ಕೇಂದ್ರದ ಮುಂದಿಟ್ಟ ಸುಪ್ರೀಂ

Date:

ಮಣಿಪುರದಂತಹ ಪ್ರಕರಣಗಳು ಬೇರೆಡೆ ಕೂಡ ನಡೆದಿದೆ ಎಂದು ಹೇಳುವ ಮೂಲಕ ಅಮಾನುಷ ಕೃತ್ಯಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮೂವರು ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಪ್ರಕರಣದ ಅರ್ಜಿ ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಮಾತನಾಡಿದ ವಕೀಲರಿಗೆ ಪ್ರತಿಕ್ರಿಯೆ ನೀಡಿತು.

“ದೇಶದ ಎಲ್ಲ ಭಾಗಗಳಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ನಡೆಯುತ್ತಿವೆ ಎಂಬ ಸತ್ಯ ಹೇಳುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಒಂದು ಭಾಗದಲ್ಲಿ ನಡೆಯುತ್ತಿರುವ ಇಂತಹ ಅಪರಾಧಗಳು ಇನ್ನೊಂದು ಕಡೆ ನಡೆಯುತ್ತಿದೆ ಎಂಬ ಕಾರಣಕ್ಕೆ ನಿಮ್ಮನ್ನು ಕ್ಷಮಿಸಲು ಸಾಧ್ಯವಿಲ್ಲ” ಎಂದು ಡಿ ವೈ ಚಂದ್ರಚೂಡ್ ಅವರು ಕೇಂದ್ರವನ್ನು ಪ್ರತಿನಿಧಿಸಿದ್ದ ಸಾಲಿಟರ್‌ ಜನರಲ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಿಂಸಾಚಾರದ ಸುಮಾರು 6,000 ಎಫ್ಐಆರ್‌ಗಳಲ್ಲಿ ಎಷ್ಟು ಮಹಿಳೆಯರ ವಿರುದ್ಧದ ಅಪರಾಧಗಳಾಗಿವೆ ಎಂದು ನ್ಯಾಯಾಲಯವು ಕೇಂದ್ರ ಸರಕಾರವನ್ನು ಪ್ರಶ್ನಿಸಿತು. ಸದ್ಯಕ್ಕೆ ಅಂತಹ ಪ್ರಕರಣಗಳ ವಿವರ ಇಲ್ಲ ಎಂದು ಸಾಲಿಟರ್‌ ಜನರಲ್‌ ಹೇಳಿದರು.

ಈ ಸಂದರ್ಭದಲ್ಲಿ ಪ್ರಕರಣಗಳನ್ನು ಪೊಲೀಸ್‌ ಠಾಣೆಗೆ ಎಷ್ಟು ವರ್ಗಾಯಿಸಲಾಗಿದೆ? ಪ್ರಕರಣದ ವಿಭಜನೆಗಳೆಷ್ಟು? ಎಷ್ಟು ಶೂನ್ಯ ಎಫ್‌ಐಆರ್‌ಗಳಿವೆ? ಇಲ್ಲಿಯವರೆಗೆ ಎಷ್ಟು ಮಂದಿಯನ್ನು ಬಂಧಿಸಲಾಗಿದೆ? ಬಂಧಿತ ಆರೋಪಿಗಳಿಗೆ ಕಾನೂನು ಸಹಾಯದ ಸ್ಥಿತಿ? ಇಲ್ಲಿಯವರೆಗೆ ಎಷ್ಟು ಸೆಕ್ಷನ್ 164 ಹೇಳಿಕೆಗಳನ್ನು ದಾಖಲಿಸಲಾಗಿದೆ? ಎಂಬ ಆರು ಅಂಶಗಳ ಮಾಹಿತಿಯೊಂದಿಗೆ ನಾಳೆ ಹಿಂತಿರುಗುವಂತೆ ನ್ಯಾಯಾಲಯವು ಕೇಂದ್ರ ಮತ್ತು ಮಣಿಪುರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಾಮ ಮಂದಿರದ ಮೇಲೆ ದಾಳಿ: ಸತ್ಯಪಾಲ್ ಮಲಿಕ್ ಆರೋಪ

ಮಹಿಳೆಯರಿಬ್ಬರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ವೈರಲ್ ವಿಡಿಯೋ ಪ್ರಕರಣದಲ್ಲಿ ಮೀತೀ ಸಮುದಾಯದ ಪರ ವಾದ ಮಂಡಿಸಿದ ವಕೀಲರು, ವೈರಲ್ ಆಗಿರುವುದು ಕೇವಲ ಒಂದು ವಿಡಿಯೋ ಅಲ್ಲ, ಇಂತಹ ಹಲವು ವಿಡಿಯೋಗಳು ವೈರಲ್‌ ಆಗಿ ಸಾರ್ವಜನಿಕರ ವೀಕ್ಷಣೆಗೆ ಒಳಗಾಗಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಸಿಜೆಐ ಚಂದ್ರಚೂಡ್ ಅವರು ಮೀತೀ ಸಮುದಾಯದ ಪರವಾಗಿ ಹಾಜರಾಗುವ ವಕೀಲರಿಗೆ ನಾವು ಪ್ರಕರಣದ ಅರ್ಜಿಗಳನ್ನು ಮಾತ್ರ ಓದಿಲ್ಲ. ವಿಡಿಯೋ ಕೂಡ ನೋಡಿದ್ದೇವೆ. ವಿಡಿಯೋ ದೇಶದ ಆಕ್ರೋಶಕ್ಕೆ ಕಾರಣವಾಗಿತ್ತು ಮತ್ತು ನಾವು ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದ್ದೇವೆ ಎಂದು ಹೇಳಿದರು.

ಪ್ರಕರಣವನ್ನು ಸಿಬಿಐಗೆ ವಹಿಸಿರುವ ಕೇಂದ್ರದ ಕ್ರಮಕ್ಕೆ ಮಹಿಳೆಯರನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಪಿಲ್ ಸಿಬಲ್ ಆಕ್ಷೇಪ ವ್ಯಕ್ತಪಡಿಸಿದರು.

ಸಂತ್ರಸ್ತರು ತಮ್ಮ ಗುರುತನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ. ನ್ಯಾಯಾಲಯದ ದಾಖಲೆಗಳಲ್ಲಿ ಇಬ್ಬರು ಮಹಿಳೆಯರನ್ನು “X” ಮತ್ತು “Y” ಎಂದು ಉಲ್ಲೇಖಿಸಲಾಗಿದೆ. ಐಜಿ ಶ್ರೇಣಿಯ ಪೊಲೀಸ್ ಅಧಿಕಾರಿಯ ನೇತೃತ್ವದ ಸ್ವತಂತ್ರ ಎಸ್‌ಐಟಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಮತ್ತು ವಿಚಾರಣೆಯನ್ನು ರಾಜ್ಯದ ಹೊರಗೆ ವರ್ಗಾಯಿಸಬೇಕು ಎಂದು ಅವರು ಕೋರಿದ್ದಾರೆ.

ರಾಜ್ಯ ಪೊಲೀಸರ ಮೇಲೆ ತಮಗೆ ನಂಬಿಕೆ ಇಲ್ಲ ಎಂದು ತಿಳಿಸಿದ ಅವರು, ತಮಗೆ ಭದ್ರತೆ ಮತ್ತು ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಹತ್ತಿರದ ಮ್ಯಾಜಿಸ್ಟ್ರೇಟ್‌ ಅವರಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ | ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: ಬಾಲಕ ಸಾವು

ನಕಲಿ ವೈದ್ಯನೊಬ್ಬ ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿ ಸರ್ಜರಿ ಮಾಡಿದ ಪರಿಣಾಮ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್...

ರಾಹುಲ್ ಗಾಂಧಿ ಮೂರು ದಿನಗಳ ಅಮೆರಿಕ ಪ್ರವಾಸ

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

ಐಎಎಸ್ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ವಜಾಗೊಳಿಸಿ ಆದೇಶಿಸಿದ ಕೇಂದ್ರ ಸರ್ಕಾರ

ಅಧಿಕಾರ ದುರ್ಬಳಕೆ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಉದ್ಯೋಗ ಗಿಟ್ಟಿಸಿಕೊಂಡು ವಂಚನೆ...