ವಿಧಾನ ಪರಿಷತ್ ಸದಸ್ಯ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣಗೆ ಗಂಭೀರ ಪ್ರಕರಣದಲ್ಲಿ ‘ರಿಲೀಫ್’ ಸಿಕ್ಕಂತಾಗಿದೆ. ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸಿಐಡಿ ಬಿ-ರಿಪೋರ್ಟ್ ಸಲ್ಲಿಸಿದೆ.
ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿರುವ ಸಿಐಡಿ, ಮತ್ತೊಂದು ಪ್ರಕರಣದಲ್ಲಿ ಬಿ-ರಿಪೋರ್ಟ್ ಸಲ್ಲಿಸಿದೆ.
ತಮ್ಮ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ, ಬ್ರಿಗೇಡ್ ಖಜಾಂಚಿ ಕಳೆದ ವರ್ಷ ಜೂನ್ 22ರಂದು ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಾರನೆಯ ದಿನವೇ (ಜೂನ್) ಸೂರಜ್‌ನನ್ನು ಬಂಧಿಸಿದ್ದರು.
ಈ ಲೇಖನ ಓದಿದ್ದೀರಾ?: ದೇವರಾಜ ಅರಸು ಮತ್ತು ತುರ್ತುಪರಿಸ್ಥಿತಿ: ಒಡನಾಡಿಗಳು ಕಂಡಂತೆ
ಬಳಿಕ, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿರುವ ಸಿಐಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಅಲ್ಲಿ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದೆ. ಒಂದು ಪ್ರಕರಣದಲ್ಲಿ ಸೂರಜ್ ರೇವಣ್ಣಗೆ ರಿಲೀಫ್ ಸಿಕ್ಕಿದೆ. ಆದಾಗ್ಯೂ, ಮತ್ತೊಂದು ಪ್ರಕರಣದಲ್ಲಿ ಅವರು ತನಿಖೆಯನ್ನು ಎದುರಿಸಲಿದ್ದಾರೆ.