ಉತ್ತರ ಪ್ರದೇಶದಲ್ಲಿ ಅಚ್ಚರಿ; ಬಿಜೆಪಿಗಿಂತ ‘ಇಂಡಿಯಾ’ ಕೂಟ ಭಾರೀ ಮುನ್ನಡೆ

Date:

ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಯಾರೂ ನಿರೀಕ್ಷಿಸದ ರೀತಿಯಲ್ಲಿ ಅಚ್ಚರಿಯೆಂಬಂತೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಬಿಜೆಪಿ ನೇತೃತ್ವದ ‘ಎನ್‌ಡಿಎ’ಗಿಂತ ಮುನ್ನಡೆ ಸಾಧಿಸಿದೆ.

- Advertisement -

ಉತ್ತರ ಪ್ರದೇಶದ ಒಟ್ಟು 80 ಲೋಕಸಭಾ ಸ್ಥಾನಗಳ ಪೈಕಿ 41 ಸ್ಥಾನಗಳಲ್ಲಿ ‘ಇಂಡಿಯಾ’ ಒಕ್ಕೂಟ ಮುನ್ನಡೆಯಲ್ಲಿದ್ದರೆ, ಎನ್‌ಡಿಎ 37 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆಯಲ್ಲಿದೆ. ಎನ್‌ಡಿಎಗಿಂತ ‘ಇಂಡಿಯಾ’ ಕೂಟ ಮೂರು ಸ್ಥಾನಗಳಲ್ಲಿ ಮುನ್ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇಂಡಿಯಾ ಕೂಟದ ಭಾಗವಾಗಿರುವ ಸಮಾಜವಾದಿ ಪಕ್ಷ 33 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್‌ 8 ಸ್ಥಾನಗಳಲ್ಲಿ ಮುಂದಿದೆ. ಎನ್‌ಡಿಎ ಭಾಗವಾಗಿರುವ ಬಿಜೆಪಿ 35 ಮತ್ತು ಆರ್‌ಎಲ್‌ಡಿ 2 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

2019ರ ಲೋಕಸಭೆ ಚುನಾವಣೆಯಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯದ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷದ ಮೈತ್ರಿಯು 15 ಸ್ಥಾನಗಳನ್ನು ಗೆದ್ದಿದ್ದವು.

ಈ ಬಾರಿ, ಬಿಎಸ್‌ಪಿ ಏಕಾಂಗಿ ಸ್ಪರ್ಧೆ ಮಾಡಿದ್ದು, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ಜೊತೆಗೂಡಿವೆ. ಸಮಾಜವಾದಿ ಪಕ್ಷ 62 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಿದೆ.

ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಅಮೇಥಿ ಮತ್ತು ರಾಯ್ ಬರೇಲಿ ಗಾಂಧಿ ಕುಟುಂಬಕ್ಕೆ ಪ್ರತಿಷ್ಠೆಯ ಕದನವಾಗಿದೆ. ಕಳೆದ ಬಾರಿ, ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರು. ಈ ಬಾರಿ, ಕ್ಷೇತ್ರದಲ್ಲಿ ಇರಾನಿ ವಿರುದ್ಧ ಗಾಂಧಿ ಕುಟುಂಬದ ನಿಷ್ಠಾವಂತ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಶರ್ಮಾ ಅವರು ಇರಾನಿಗಿಂತ 60,000 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ರಾಯ್‌ಬರೇಲಿಯಲ್ಲಿ ಸ್ಪರ್ಧಿಸಿರುವ ರಾಹುಲ್‌ಗಾಂಧಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕನೌಜ್ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮುನ್ನಡೆ ಸಾಧಿಸಿದ್ದಾರೆ.

ಇನ್ನು, ವಾರಣಾಸಿಯಲ್ಲಿ ಕಣದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಅಜಯ್ ರಾವ್ ಅವರಿಂದ ಭಾರೀ ಪೈಪೋಟಿ ಎದುರಿಸುತ್ತಿದ್ದಾರೆ. ಈಗಾಗಲೇ ಮೋದಿ ಅವರು ಒಮ್ಮೆ 1,600 ಮತಗಳಿಂದ ಹಿನ್ನಡೆ ಅನುಭವಿಸಿ, ಮತ್ತೆ ಮುನ್ನಡೆ ಸಾಧಿಸಿದ್ದಾರೆ.

ಲಕ್ನೋದಲ್ಲಿ ಮೂರನೇ ಅವಧಿಗೆ ಆಯ್ಕೆಗೆ ಹೋರಾಟ ನಡೆಸುತ್ತಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುನ್ನಡೆಯಲ್ಲಿದ್ದಾರೆ. ಮಥುರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮುಖೇಶ್ ಧಂಗರ್ ವಿರುದ್ಧ ಬಿಜೆಪಿಯ ನಟಿ-ರಾಜಕಾರಣಿ ಹೇಮಾ ಮಾಲಿನಿ ಮುಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...