ಹೊಸ ಪಕ್ಷ ಸ್ಥಾಪಿಸಿದ ಟಿಎಂಸಿ ಉಚ್ಚಾಟಿತ ಶಾಸಕ ಹುಮಾಯೂನ್ ಕಬೀರ್

Date:

ಮುಂದಿನ ವರ್ಷವೇ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಶಾಸಕ ಹುಮಾಯೂನ್ ಕಬೀರ್ ತಮ್ಮದೇ ಆದ ಪಕ್ಷವನ್ನು ಕಟ್ಟಿಕೊಂಡಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯಲ್ಲಿ ‘ಬಾಬರಿ ಮಸೀದಿ ಶೈಲಿಯ’ ಮಸೀದಿ ನಿರ್ಮಾಣ ಕಾರ್ಯ ಆರಂಭಿಸಿದ್ದ ಕಬೀರ್ ಇದೀಗ ಜನತಾ ಉನ್ನಾಯನ್ ಪಕ್ಷವನ್ನು ಪ್ರಾರಂಭಿಸಿದ್ದಾರೆ. ಜೆಯುಪಿ ಭಾವುಟ ಶೀಘ್ರದಲ್ಲೇ “ಬಂಗಾಳದಾದ್ಯಂತ ಹಾರುತ್ತದೆ” ಎಂದೂ ಹೇಳಿಕೊಂಡಿದ್ದಾರೆ.

- Advertisement -

ಜೆಯುಪಿಯ ಚಿಹ್ನೆ ಮೇಜು ಮತ್ತು ಅವಳಿ ಗುಲಾಬಿಗಳು ಆಗಿರಲಿವೆ ಎಂದೂ ಹೇಳಿದ್ದಾರೆ. ಇನ್ನು 2026ರ ಚುನಾವಣೆಗೆ ಅಸಾದುದ್ದೀನ್ ಓವೈಸಿ ಜತೆ ಕಬೀರ್ ಮೈತ್ರಿ ಮಾಡಿಕೊಳ್ಳುವ ನಿರೀಕ್ಷೆಯಿದೆ. ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸುತ್ತಾ ಶೀಘ್ರದಲ್ಲೇ ಆರು ಅಭ್ಯರ್ಥಿಗಳನ್ನು ಘೋಷಿಸುವುದಾಗಿಯೂ ಹೇಳಿಕೊಂಡಿದ್ದಾರೆ. ಜೆಯುಪಿ ಒಟ್ಟು 135 (ರಾಜ್ಯದ 249) ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಮುಸ್ಲಿಮರು ಸೇರಿದಂತೆ ಜನ ಸಾಮಾನ್ಯರಿಗಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಕೋಮು ವಿಭಜನೆ; ಚುನಾವಣೆಗೂ ಮುನ್ನ ಹಿಂದೂ-ಮುಸ್ಲಿಂ ಮತಾಂಧ ರಾಜಕಾರಣ!

ಈ ಸಂದರ್ಭದಲ್ಲೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ “ರಾಜಕೀಯ ಪಿತೂರಿ” ಎಂಬ ಹೇಳಿಕೆಗೂ ಕಬೀರ್ ವ್ಯಂಗ್ಯವಾಡಿದ್ದಾರೆ. “ಮೋಹನ್ ಭಾಗವತ್ ನನ್ನ ಬಗ್ಗೆ ಮಾತನಾಡಿದ್ದಾರೆಂದು ನನಗೆ ಹೆಮ್ಮೆ ಅನಿಸುತ್ತದೆ. ಭಾಗವತ್ ಅವರು ಮಂದಿರವನ್ನು (ರಾಮ ಮಂದಿರ) ನಿರ್ಮಿಸಿದರೆ ಅದು ಸಾಂವಿಧಾನಿಕವಾಗಿದೆ. ನಾನು ಬಾಬರಿ ಮಸೀದಿ ನಿರ್ಮಿಸಿದರೆ ಅದು ಸಾಂವಿಧಾನಿಕವಲ್ಲವೇ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಕೋಮು ವಿಭಜನೆ; ಚುನಾವಣೆಗೂ ಮುನ್ನ ಹಿಂದೂ-ಮುಸ್ಲಿಂ ಮತಾಂಧ ರಾಜಕಾರಣ!

ಟಿಎಂಸಿಯಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್ ನೇತೃತ್ವದಲ್ಲಿ ಪಶ್ಚಿಮ ಬಂಗಾಳದ ರೆಜಿನಗರದಲ್ಲಿ ಬಾಬರಿ ಮಸೀದಿ ಶೈಲಿಯ ಹೊಸ ಮಸೀದಿಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದೆ. 2024ರ ಡಿಸೆಂಬರ್ 12ರಂದು ಕಬೀರ್ ಮಾಡಿದ ಘೋಷಣೆಯಂತೆಯೇ 2025ರ ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸದ ದಿನದಂದೇ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಅಯೋಧ್ಯೆಯಲ್ಲಿದ್ದ ಮೂಲ ಬಾಬರಿ ಮಸೀದಿಯ ವಿನ್ಯಾಸವನ್ನೇ ಹೋಲುವಂತೆ ಈ ಮಸೀದಿಯನ್ನು ನಿರ್ಮಿಸಲಾಗುತ್ತಿದೆ. ಪದೇ ಪದೇ ಬಾಬರಿ ಮಸೀದಿ ನಿರ್ಮಾಣದ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಕಾರಣಕ್ಕೆ ಕಬೀರ್ ಅನ್ನು ಟಿಎಂಸಿ ಉಚ್ಚಾಟಿಸಿದ್ದು, ಹೊಸ ಪಕ್ಷ ಕಟ್ಟುವುದಾಗಿ ಘೋಷಿಸಿದ್ದರು. ಇದೀಗ ಪಕ್ಷ ಸ್ಥಾಪಿಸಿದ್ದಾರೆ.

ಇವೆಲ್ಲವೂ ಚುನಾವಣೆ ಸಮೀಪಿಸುತ್ತಿರುವಾಗ ನಡೆಯುತ್ತಿರುವುದು ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ರಾಜಕೀಯ ಲಾಭ ಪಡೆಯುವ ಅಪಾಯ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಮುಸ್ಲಿಮರು ಟಿಎಂಸಿ ಮತಬ್ಯಾಂಕ್ ಆಗಿರುವಾಗ ಕಬೀರ್ ಬಾಬರಿ ಹೆಸರಲ್ಲಿ ಮತಗಳನ್ನು ಸೆಳೆಯುವ ಸಾಧ್ಯತೆಯೂ ಇದೆ. ಇವೆಲ್ಲವುದರ ಲಾಭವನ್ನು ಬಿಜೆಪಿ ಪಡೆಯಬಹುದು ಎಂಬುದು ತಜ್ಞರ ಅಭಿಪ್ರಾಯ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...