18 ಬಿಜೆಪಿ ಶಾಸಕರ ಅಮಾನತು | ನಿರ್ಣಯ ಆದೇಶ ಹಿಂಪಡೆಯಲು ಸಭಾಧ್ಯಕ್ಷರಿಗೆ ಆರ್‌ ಅಶೋಕ್‌ ಪತ್ರ

Date:

Advertisements

ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಪತ್ರ ಬರೆದು ಮನವಿ ಮಾಡಿದ್ದಾರೆ.

ಜನಸಾಮಾನ್ಯರ ಹಿತದೃಷ್ಟಿಯಿಂದ ಸಭಾಧ್ಯಕ್ಷರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಮತ್ತು ಆ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುತ್ತಾರೆ” ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿ ಈ ಬಗ್ಗೆ ಎಕ್ಸ್‌ ತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆರ್‌ ಅಶೋಕ್‌ ಪತ್ರದಲ್ಲಿ ಏನಿದೆ?

Advertisements

ದಿನಾಂಕ: 21.03.2025ರ ರಾಜ್ಯ ವಿಧಾನಸಭೆಯ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ 4% ಮೀಸಲಾತಿ ವಿಚಾರದ ಚರ್ಚೆಯು ವಿಕೋಪಕ್ಕೆ ತಿರುಗಿದಾಗ ವಿರೋಧ ಪಕ್ಷದವರಾದ ನಾವೆಲ್ಲ ಸಭಾಧ್ಯಕ್ಷರ ಪೀಠದ ಸುತ್ತ ನಿಂತುಕೊಂಡು ಪ್ರತಿಭಟನೆ ಮಾಡಿರುತ್ತೇವೆ. ಈ ಸಂದರ್ಭದಲ್ಲಿ ತಾವು, ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡಿರುತ್ತೀರೆಂದು, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿರುತ್ತೀರೆಂದು ವಿಧಾನಸಭೆಯ 18 ಸದಸ್ಯರನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಾಮಾವಳಿಗಳ ನಿಯಮ 348ರ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಲಾಗಿರುತ್ತದೆ ಹಾಗೂ ಅದರ ಜೊತೆಗೆ ಇತರೆ ನಿರ್ಬಂಧಗಳನ್ನೂ ವಿಧಿಸಲಾಗಿರುತ್ತದೆ.

ರಾಜ್ಯದ ವಿಧಾನಮಂಡಲದ ಉಭಯ ಸದನಗಳು ಪ್ರಜಾಪ್ರಭುತ್ವದ ಅತ್ಯುನ್ನತ ಸ್ಥಳಗಳು ಈ ಸ್ಥಳಗಳು “ಪ್ರಜಾಪ್ರಭುತ್ವದ ದೇಗುಲಗಳು” ಎಂದು ಕರೆದರೆ ತಪ್ಪೇನೂ ಇಲ್ಲ. ಈ ದೇಗುಲಗಳಲ್ಲಿನ ಸಭಾಧ್ಯಕ್ಷರು ಮತ್ತು ಸಭಾಪತಿಗಳಿಗೆ ಇರುವ ಸ್ಥಾನವೂ ಅಷ್ಟೇ ಗೌರವಾನ್ವಿತವಾದುದು. ಈ ವಿಚಾರದಲ್ಲಿ ನನಗೆ ಯಾವ ಭಿನ್ನಾಭಿಪ್ರಾಯವೂ ಇಲ್ಲ.

ದಿ.21.03.2025ರಂದು ನಡೆದ ಘಟನೆ ಉದ್ದೇಶಪೂರ್ವಕವಾದುದು ಅಲ್ಲ ಅಥವಾ ನಿಮ್ಮ ಪೀಠಕ್ಕೆ, ಅಗೌರವ ತರುವ ಉದ್ದೇಶವೂ ಯಾವ ಶಾಸಕರಿಗೂ ಇರಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ತಾವು ಸದನದ ಕಲಾಪ ನಿರ್ವಹಿಸುವುದನ್ನು ನಾವು ಅತ್ಯಂತ ಹತ್ತಿರದಿಂದ ನೋಡಿದ್ದೇವೆ. ಸಂಸದೀಯ ಚರ್ಚೆಯ ಗುಣಮಟ್ಟ ಭಾಷೆಯ ಬಳಕೆ. ಕಲಾಪಗಳಲ್ಲಿನ ನಿಯಮಗಳ ಪಾಲನೆ ಇತ್ಯಾದಿಗಳೆಲ್ಲವು ದಿನದಿಂದ ಕುಸಿಯುತ್ತಿರುವ ಈ ದಿನಗಳಲ್ಲಿ ಯಾರಿಗೇ ಆಗಲಿ ಇದು ಅತ್ಯಂತ ಕಷ್ಟದ ಕೆಲಸ ಎಂಬುದು ಅರ್ಥವಾಗುತ್ತದೆ. ಅದಕ್ಕಾಗಿಯೇ ನಿಮ್ಮ ಬಗೆ ನಮಗೆ ಅಪಾರವಾದ ಗೌರವವಿದೆ.

ಒಂದು ವೇಳೆ ತಾವು ಅಂದು ನಮ್ಮ ಎಲ್ಲ ಶಾಸಕರನ್ನು ತಮ್ಮ ಕೊಠಡಿಗೆ ಕರೆದು ವಿವರಣೆ ಕೇಳಿದ್ದರೆ ನಾವುಗಳು ಖಂಡಿತ ಈ ಘಟನೆಯ ಬಗ್ಗೆ ಸ್ಪಷ್ಟೀಕರಣ ಕೊಡುತ್ತಿದ್ದೆವು. ಅದಕ್ಕೆ, ಅವಕಾಶ ಸಿಗಲಿಲ್ಲ ಈಗ ಒಂದಿಷ್ಟು ಕಠೋರ ಎನ್ನುವಂಥ ನಿರ್ಧಾರ ತಮ್ಮಿಂದ ಪ್ರಕಟವಾಗಿದೆ. ಇದರಿಂದಾಗಿ ಒಟ್ಟು 18 ಶಾಸಕರು ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದಂತೆ ಆಗಿದೆ. ನಿರ್ಬಂಧಗಳನ್ನು ಸಡಿಲಿಸಿ ಎಂದಿನಂತೆ ಒಬ್ಬ ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರಿಗೆ ಅವಕಾಶ ಕೊಡಬೇಕೆಂದು ಕೋರಿ ಈ ಪತ್ರವನ್ನು ಬರೆಯುತ್ತಿದ್ದೇನೆ.

ನಮ್ಮಗಳ ಪ್ರತಿಭಟನೆ ತಮ್ಮ ವಿರುದ್ಧ ಇರಲಿಲ್ಲ ಎಂಬುದನ್ನು ಅತ್ಯಂತ ಪ್ರಾಮಾಣಿಕವಾಗಿ ಮತ್ತೊಮ್ಮೆ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಈ ಪತ್ರದ ಆರಂಭದಲ್ಲಿ ತಿಳಿಸಿದಂತೆ ಸದನ ದೊಡ್ಡದು, ಸಭಾಧ್ಯಕ್ಷರು ದೊಡ್ಡವರು ಎಂಬ ಪ್ರಜಾಪ್ರಭುತ್ವದ ಮೂಲಭೂತ ಆಶಯಕ್ಕೆ ಅನುಗುಣವಾಗಿ ಹಾಗೂ ನಾವೆಲ್ಲರೂ ಸೇರಿಕೊಂಡು ಈ ಸಂಸ್ಥೆಯ ಘನತೆ ಹಾಗೂ ಗೌರವವನ್ನು ಉಳಿಸಬೇಕಾಗಿದೆ ಎಂಬ ತತ್ಪದಲ್ಲಿ ನಂಬಿಕೆ ಇರಿಸಿ ಅಮಾನತ್ತು ಮಾಡಿರುವ 18 ಶಾಸಕರ ಆದೇಶವನ್ನು ಮತ್ತೊಮ್ಮೆ ಮರುಪರಿಶೀಲಿಸಲು ಕೋರುತ್ತಾ, ಸದರಿ ಆದೇಶವನ್ನು ಹಿಂಪಡೆಯಬೇಕು ಎಂದು ಆರ್‌ ಅಶೋಕ್‌ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X