ʼSIRʼ ಬಿಜೆಪಿಯ ಗುಪ್ತ ತಂತ್ರ ಎಂಬ ಸತ್ಯ ಬಿಚ್ಚಿಟ್ರಾ ಸುವೇಂದು ಅಧಿಕಾರಿ?

Date:

ಮತದಾರರ ಪಟ್ಟಿಯ ಪರಿಷ್ಕರಣೆ ಒಂದು ತಾಂತ್ರಿಕ ಪ್ರಕ್ರಿಯೆಯಾಗಬೇಕೆ ಹೊರತು, ರಾಜಕೀಯ ಪಕ್ಷವೊಂದು ತನ್ನ ಗೆಲುವಿಗಾಗಿ ಬಳಸುವ ‘ಅಸ್ತ್ರ’ ಆಗಬಾರದು. ಸುವೇಂದು ಅಧಿಕಾರಿ ನೀಡಿರುವುದು ಕೇವಲ ಒಂದು ರಾಜಕೀಯ ಹೇಳಿಕೆಯಲ್ಲ, ಬದಲಾಗಿ ವ್ಯವಸ್ಥಿತವಾಗಿ ಒಂದು ವರ್ಗದ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡು ಚುನಾವಣೆಯನ್ನು ಗೆಲ್ಲಲು ಕಂಡುಕೊಂಡಿರುವ ವಾಮ ಮಾರ್ಗ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ.

294 ವಿಧಾನಸಭಾ ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ 23 ಮತ್ತು ಏಪ್ರಿಲ್‌ 29ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಕೇಂದ್ರ ಚುನಾವಣಾ ಆಯೋಗ ನಡೆಸಿದ ಎಸ್‌ಐಆರ್‌ ಪ್ರಕ್ರಿಯೆ ರಾಜ್ಯದಲ್ಲಿ ಅನೇಕ ಗೊಂದಲಗಳಿಗೆ ಕಾರಣವಾಗಿದೆ. ಪಕ್ಷಪಾತಿ ಧೋರಣೆಯನ್ನು ಕೇಂದ್ರ ಚುನಾವಣಾ ಆಯೋಗ ತೋರಿದೆ ಎಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರವನ್ನು ಉಳಿಸಿಕೊಳ್ಳಬೇಕು ಎಂದು ಸತತ ಪ್ರಯತ್ನ ಮಾಡುತ್ತಿರುವ ತೃಣಮೂಲ ಕಾಂಗ್ರೆಸ್‌ ಒಂದೆಡೆಯಾದರೆ, ಇನ್ನೊಂದೆಡೆ ತೃಣಮೂಲ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರದಿಂದ ಇಳಿಸಿ, ತಾನು ಅಧಿಕಾರಕ್ಕೇರಲೇಬೇಕೆಂದು ಬಿಜೆಪಿ ಯತ್ನಿಸುತ್ತಿದೆ. ಚುನಾವಣಾ ಕಣ ತೀವ್ರ ಜಿದ್ದಾಜಿದ್ದಿನ ಪೈಪೋಟಿಯನ್ನು ಸೃಷ್ಟಿಸಿದೆ.

ಈ ನಡುವೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಮಾಜಿ ತೃಣಮೂಲ ಕಾಂಗ್ರೆಸ್‌ನ ಮುಖಂಡ ಸುವೇಂದು ಅಧಿಕಾರಿ, ಕೇಂದ್ರ ಚುನಾವಣಾ ಆಯೋಗ ನಡೆಸಿದ ಎಸ್‌ಐಆರ್‌ ಪ್ರಕ್ರಿಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ʼSIR  ಬಳಿಕ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಎದುರಾಳಿಗಳೇ ಇರುವುದಿಲ್ಲʼ ಎಂಬ ಅರ್ಥದಲ್ಲಿ ಅವರು ಮಾತನಾಡಿದ್ದಾರೆ. ನ್ಯೂಸ್‌ ಲ್ಯಾಂಡ್ರಿ ಸುದ್ದಿ ಸಂಸ್ಥೆಯ ಶ್ರೀನಿವಾಸ್‌ ಜೈನ್‌, ಸುವೇಂದು ಅಧಿಕಾರಿ ಅವರೊಂದಿಗೆ ನಡೆಸಿದ ಚಿಟ್‌ಚಾಟ್‌/ಸಂದರ್ಶನದಲ್ಲಿ ಈ ರೀತಿಯಾಗಿ ಅವರು ಒಂದು ವಿವಾದಾತ್ಮಕ ಹೇಳಿಕೆ ಕೊಟ್ಟಿರುವುದು ರಾಷ್ಟ್ರ ರಾಜಕಾರಣದಲ್ಲೀಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

ಅಧಿಕಾರಿ ಅವರ ಮಾತಿನ ಒಳಾರ್ಥವನ್ನು ಗಮನಿಸಿದರೆ, ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಅನುಮಾನ ಮೂಡದೇ ಇರುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಪ್ರಕ್ರಿಯೆಯಿಂದ ಸುಮಾರು 91 ಲಕ್ಷ (90,83,454) ಮತದಾರರ ಹೆಸರನ್ನು ಮತಪಟ್ಟಿಯಿಂದ ತೆಗೆಯಲಾಗಿದೆ. ಅಕ್ಟೋಬರ್ 2025ರಲ್ಲಿ 7.66 ಕೋಟಿ ಇದ್ದ ಮತದಾರರ ಸಂಖ್ಯೆ, ಈ ಎಸ್‌ಐಆರ್ ಪರಿಷ್ಕರಣೆಯ ನಂತರ 6.75 ಕೋಟಿಗೆ ಇಳಿಕೆಯಾಗಿದೆ. ಅಂದರೆ ರಾಜ್ಯದ ಒಟ್ಟು ಮತದಾರರ ಸಂಖ್ಯೆಯಲ್ಲಿ ಸುಮಾರು 12% ರಷ್ಟು ಕುಸಿತ ಕಂಡುಬಂದಿದೆ.  ಮುಸ್ಲಿಂ ಬಾಹುಳ್ಯದ ಜಿಲ್ಲೆಗಳಾದ ಮುರ್ಷಿದಾಬಾದ್, ಉತ್ತರ 24 ಪರಗಣ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲಾಗಿದೆ. ಹಾಗಾಗಿ ಚುನಾವಣಾ ಆಯೋಗ ನಡೆಸಿದ ಎಸ್‌ಐಆರ್‌ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿದ ಪ್ರಕ್ರಿಯೆಯೇ ಎನ್ನುವ ಪ್ರಶ್ನೆಯನ್ನು ಮೂಡಿಸಿದೆ. ಇದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿದೆ ಎನ್ನುವ ವಾದವೂ ಇದೆ.

‘SIR’ ಎಂಬ ಗುಪ್ತ ತಂತ್ರ?

- Advertisement -

ಅಧಿಕಾರಿ ನೀಡಿದ ವಿವಾದಾತ್ಮಕ ಹೇಳಿಕೆ ಗಮನಿಸಿದರೇ, ಎಸ್‌ಐಆರ್‌ ಪ್ರಕ್ರಿಯೆಯನ್ನು ಬಿಜೆಪಿ ಗೆಲುವಿನ ಸೂತ್ರವಾಗಿ ವ್ಯವಸ್ಥಿತವಾಗಿ ನಡೆಸಲಾಗಿದೆಯೇ ಎನ್ನುವ ಪ್ರಶ್ನೆಯನ್ನೂ ಮೂಡಿಸುತ್ತದೆ. ಬಂಗಾಳದಲ್ಲಿ ಚುನಾವಣೆಯನ್ನು ಗೆಲ್ಲಲು ಮತಗಳನ್ನು ಪಡೆಯುವುದಕ್ಕಿಂತ ಹೆಚ್ಚಾಗಿ, ತಮಗೆ ವಿರೋಧವಾಗಿ ಚಲಾವಣೆಯಾಗುವ ಮತಗಳನ್ನು ಮತಪಟ್ಟಿಯಿಂದಲೇ ಅಳಿಸಿ ಹಾಕುವುದು ಬಿಜೆಪಿ ಕೃಪಾಪೋಷಿತ ತಂತ್ರವೇ ಎನ್ನುವ ಅನುಮಾನವನ್ನು ಸಹಜವಾಗಿ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

‘SIR’ ಅಥವಾ ಅಕ್ರಮ ವಲಸಿಗರ ಹೆಸರಿನಲ್ಲಿ ನಡೆಯುವ ಪರಿಶೀಲನೆ ನಿರ್ದಿಷ್ಟ ಸಮುದಾಯದ ಮತದಾರರನ್ನು ಗುರಿಯಾಗಿಸಿ ನಡೆಸಿದಂತೆಯೇ  ಕಾಣಿಸುತ್ತಿದ್ದು, ಇದು ರಾಜ್ಯದ ಚುನಾವಣಾ ಫಲಿತಾಂಶವನ್ನೇ ಅಡಿಮೇಲು ಮಾಡುವ ವ್ಯವಸ್ಥಿತ ಹುನ್ನಾರ ಎನ್ನುವ ತೃಣಮೂಲ ಕಾಂಗ್ರೆಸ್‌ ಪಕ್ಷದ ಟೀಕೆಯನ್ನು ತಳ್ಳಿಹಾಕುವಂತಿಲ್ಲ.  

ಇದನ್ನೂ ಓದಿ : ಗದಗ | ಚಿಕಿತ್ಸೆ ನೀಡಬೇಕಾದ ಆರೋಗ್ಯ ಕೇಂದ್ರವೇ ಅಸ್ವಸ್ಥ; ಮೇಲ್ದರ್ಜೆಗೇರಿಸಲು ಸಾರ್ವಜನಿಕರ ಒತ್ತಾಯ

“ಸುವೇಂದು ಅಧಿಕಾರಿ ನೀಡಿರುವುದು ಕೇವಲ ಒಂದು ರಾಜಕೀಯ ಹೇಳಿಕೆಯಲ್ಲ, ಬದಲಾಗಿ ವ್ಯವಸ್ಥಿತವಾಗಿ ಒಂದು ವರ್ಗದ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡು ಚುನಾವಣೆಯನ್ನು ಗೆಲ್ಲಲು ಕಂಡುಕೊಂಡಿರುವ ವಾಮ ಮಾರ್ಗ ” ಎನ್ನುವುದನ್ನು ಸ್ಪಷ್ಟಪಡಿಸುತ್ತದೆ. ಇನ್ನು, ಸುವೇಂದು ಅಧಿಕಾರಿ ಅವರ ಹೇಳಿಕೆ ಬಂಗಾಳದ ಚುನಾವಣಾ ರಾಜಕೀಯದ ಮೇಲೆ ಬೀರುವ ಗಂಭೀರ ಪರಿಣಾಮಗಳನ್ನು ಮತ್ತು ಮತದಾರರ ಪಟ್ಟಿಯ ಸುತ್ತ ನಡೆಯುತ್ತಿರುವ ಸಂಚುಗಳನ್ನು ಬಯಲು ಮಾಡಿದೆ. ಬಿಜೆಪಿಯನ್ನು ಗೆಲ್ಲಿಸುವ ಏಕೈಕ ಉದ್ದೇಶಕ್ಕಾಗಿ ಬಿಜೆಪಿಯನ್ನು ಹೊರತಾಗಿ, ಬೇರೆ ಪಕ್ಷಗಳಿಗೆ ಮತ ಚಲಾಯಿಸುವ ಮತದಾರರ ಹೆಸರನ್ನು ಮತಪಟ್ಟಿಯಿಂದಲೇ ಅಳಿಸಿ ಹಾಕುವ ʼಕಾನೂನುಬದ್ಧ ಸಂಚುʼ SIR ಆಗಿದೆಯೇ ಎನ್ನುವ ಪ್ರಶ್ನೆಯನ್ನು ಮೂಡಿಸದೇ ಇರುವುದಿಲ್ಲ.  

ಭಾರತದ ಚುನಾವಣಾ ರಾಜಕೀಯದ ಒಂದು ಆತಂಕಕಾರಿ ಮುಖವನ್ನು ಕೇಂದ್ರ ಚುನಾವಣಾ ಆಯೋಗ ನಡೆಸಿದ SIR ಪ್ರಕ್ರಿಯೆ ಪರಿಚಯಿಸಿದೆ. ಇದು ಪಶ್ಚಿಮ ಬಂಗಾಳದ ರಾಜಕೀಯ ಸಮೀಕರಣವನ್ನೇ ಬದಲಿಸುವ ತಂತ್ರವೆ? ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ (TMC) ನಡುವಿನ ಮತಗಳ ಅಂತರ ಸಣ್ಣ ಮಟ್ಟದ್ದಲ್ಲದಿದ್ದರೂ, ಸುಮಾರು 91 ಲಕ್ಷ ಮತದಾರರ ಹೆಸರನ್ನು ಮತಪಟ್ಟಿಯಿಂದ ತೆಗೆದು ಹಾಕುವುದೆಂದರೆ, ರಾಜ್ಯದ ಒಟ್ಟು ಮತದಾರರ ಸುಮಾರು 12% ಮತದಾರರನ್ನು ತೆಗೆದು ಹಾಕಿದಂತಾಗಿದೆ.  

ಇಲ್ಲಿ ‘SIR’ ಎನ್ನುವುದು ಕೇವಲ ಚುನಾವಣಾತ್ಮಕ ಪ್ರಕ್ರಿಯೆಯಾಗಿ ಉಳಿಯದೆ, ರಾಜಕೀಯ ಲಾಭದ ಸಾಧನವಾಗಿ ಗುಪ್ತವಾಗಿ ಪರಿವರ್ತಿಸಿಕೊಳ್ಳುತ್ತಿರುವುದು ಕಾಣಿಸುತ್ತಿದೆ.  “ನುಸುಳುಕೋರರನ್ನು ಹೊರಹಾಕುತ್ತೇವೆ” ಎಂಬ ನೆಪದಲ್ಲಿ ಒಂದು ಸಮುದಾಯದ ಮತದಾನದ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎನ್ನುವುದು ಪ್ರಕಟಗೊಳ್ಳದೆ ಉಳಿದಿಲ್ಲ ಎನ್ನುವುದು ಕೂಡ ಸ್ಪಷ್ಟ.

ಒಟ್ಟಿನಲ್ಲಿ, ಮತದಾರರ ಪಟ್ಟಿಯ ಪರಿಷ್ಕರಣೆ ಒಂದು ತಾಂತ್ರಿಕ ಪ್ರಕ್ರಿಯೆಯಾಗಬೇಕೆ ಹೊರತು, ರಾಜಕೀಯ ಪಕ್ಷವೊಂದು ತನ್ನ ಗೆಲುವಿಗಾಗಿ ಬಳಸುವ ‘ಅಸ್ತ್ರ’ ಆಗಬಾರದು. ಸುವೇಂದು ಅಧಿಕಾರಿ ಅವರ ಮಾತುಗಳು ನಿಜವಾದಲ್ಲಿ, ಅದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತದೆ. ಭಾರತದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ನೀಡಿರುವ ‘ಮತದಾನದ ಹಕ್ಕು’ ನಿಜಕ್ಕೂ ಅಪಾಯದಲ್ಲಿದೆ ಎನ್ನುವುದನ್ನೂ ಸ್ಪಷ್ಟಪಡಿಸಿದೆ.

IMG 20260316 WA0002
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....