ಬಸವಣ್ಣರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಲು ಸಿಎಂಗೆ ಸ್ವಾಮೀಜಿಗಳ, ಚಿಂತಕರ ಒತ್ತಾಯ

Date:

Advertisements

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಸ್ವಾಮೀಜಿ, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜತೆ ಚರ್ಚಿಸಿದ ಬಳಿಕ ಮಾತನಾಡಿದರು.

“ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ ಪ್ರಮುಖರು.

ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ನಿಯೋಗದ ಜತೆಗಿದ್ದರು.

ಸಾಂಸ್ಕೃತಿಕ ಮತ್ತು ಸಾಹಿತ್ಯಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಹೋರಾಟಗಾರ್ತಿ ಸೌಮ್ಯ, ಅಖಿಲಾ ಸೇರಿ ಹಲವು ಪ್ರಮುಖರು ನಿಯೋಗದ ಜತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X