ಕಾವೇರಿ | ಸರ್ಕಾರ ಉಡಾಫೆ ಮುಂದುವರೆಸಿದರೆ ಜನ ದಂಗೆ ಏಳುತ್ತಾರೆ : ಬೊಮ್ಮಾಯಿ ಎಚ್ಚರಿಕೆ

Date:

Advertisements
  • ರಾಜ್ಯ ಸರ್ಕಾರ ನೀರಿನ ಗ್ಯಾರಂಟಿ ಕೊಡಲಿ: ಬಸವರಾಜ ಬೊಮ್ಮಾಯಿ
  • ‘ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ’

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ. ಇವರು ಹೀಗೆ ನಿರ್ಲಕ್ಷ್ಯ ಮಾಡಿದರೆ ಸ್ವಾಮೀಜಿಗಳು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.

ಕಾವೇರಿ ವಿಚಾರದಲ್ಲಿ ಬಿಜೆಪಿಯ ಮುಂದಿನ ಹೋರಾಟದ‌ ಕುರಿತು ಪಕ್ಷದ ಕಚೇರಿಯಲ್ಲಿ ಶುಕ್ರವಾರ ತಮ್ಮ ನೇತೃತ್ವದಲ್ಲಿ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾವೇರಿ ವಿಚಾರದಲ್ಲಿ ಈ ಸರ್ಕಾರ ತೀವ್ರವಾದ ಗಂಡಾಂತರ ತಂದಿದೆ. ಮೊದಲಿನಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ” ಎಂದರು.

“ಸುಪ್ರೀಂಕೋರ್ಟ್‌ನಲ್ಲಿ ಸರಿಯಾಗಿ ವಾದ ಮಾಡದೇ ಮತ್ತೆ 7.5 ಟಿಎಂಸಿ ನೀರು ಬಿಡುವ ಪರಿಸ್ಥಿತಿಗೆ ತಂದಿದೆ.‌ ಇಷ್ಟೆಲ್ಲ ಆದರೂ ರಾಜ್ಯದ ಜನರಿಗೆ ಸರ್ಕಾರ ಮುಂದೇನು ಮಾಡುತ್ತದೆ ಅಂತ ಹೇಳಿಲ್ಲ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ” ಎಂದು ಹೇಳಿದರು.

Advertisements

ನೀರಿನ‌ ಗ್ಯಾರಂಟಿ ಬೇಕು

“ರಾಜ್ಯ ಸರ್ಕಾರ ಆರಂಭದಿಂದಲೂ ಗ್ಯಾರಂಟಿ ಹೆಸರು ಹೇಳಿ ಈಗ ಕಂಡಿಷನ್ ಹಾಕಿ ಅರ್ಧಂಬರ್ಧ ಜಾರಿ ಮಾಡುತ್ತದೆ. ಬೆಂಗಳೂರು ಅಂತಾರಾಷ್ಟ್ರೀಯ ನಗರ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತೆತ್ತಿದರೆ ಬ್ರಾಂಡ್ ಬೆಂಗಳೂರು ಅಂತ ಹೇಳುತ್ತಾರೆ. ಆದರೆ, ಬೆಂಗಳೂರಿನ ಕುಡಿಯುವ ನೀರಿನ ಬಗ್ಗೆ ಮಾತನಾಡುವುದಿಲ್ಲ. ನಮಗೆ ಬೇಕಿರುವುದು ನೀರಿನ‌ ಗ್ಯಾರಂಟಿ” ಎಂದರು.

“ಬೆಂಗಳೂರಿಗೆ ಪ್ರತ್ಯೇಕವಾಗಿ 4.5 ಟಿಎಂಸಿ ನೀರು ಕೊಡಲು ಟ್ರಿಬುನಲ್ ಹೇಳಿದೆ. ಈ ಬಗ್ಗೆ ರಾಜ್ಯ ಸರ್ಕಾರ ಎಲ್ಲಿಯೂ ಪ್ರಸ್ತಾಪ ಮಾಡುತ್ತಿಲ್ಲ. ತಮಿಳುನಾಡು ಹೆಚ್ಚುವರಿ ನೀರು ಬಳಕೆ ಮಾಡಿ ಅಕ್ರಮವಾಗಿ ಬೆಳೆ ಬೆಳೆದಿದ್ದು, ಅದರ ಬಗ್ಗೆ ರಾಜ್ಯ ಸರ್ಕಾರ ಮಾತನಾಡಿಲ್ಲ. ನಮಗೆ ಮುಂಗಾರು ಮುಕ್ತಾಯವಾಗಿದೆ, ತಮಿಳುನಾಡಿಗೆ ಮುಂದಿನ ದಿನಗಳಲ್ಲಿ ಮಳೆ ಬರಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು. ಈ ವಿಷಯ ಹೇಳಿದರೆ ನಾವು ರಾಜಕಾರಣ ಮಾಡುತ್ತೇವೆ ಎನ್ನುತ್ತಾರೆ. ಇದರ ಮೇಲೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜಕಾರಣ ಮಾಡುತ್ತಾರೆ. ತಮಿಳುನಾಡು ಸಿಎಂ ಜೊತೆ ಮಾತನಾಡಿ ಅಂದರೆ ಮಾತನಾಡುವುದಿಲ್ಲ. ಅದರ ಬದಲು ಕೇಂದ್ರದ ಕಡೆ ಬೊಟ್ಟು ಮಾಡುತ್ತಾರೆ. ಅದರಲ್ಲಿ ಸಿದ್ದರಾಮಯ್ಯ ಪರಿಣಿತರು” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಹಣ-ಹೆಸರು ಗಳಿಕೆಗೆ ಧರ್ಮವೇ ಸುಲಭದ ಸಾಧನ

ಸರ್ಕಾರದ ವಿರುದ್ಧ ಪ್ರತಿಭಟನೆ

“ಬರ ಬಂದರೆ ಕೇಂದ್ರದ ಕಡೆ ತೊರಿಸುತ್ತಾರೆ. ರಾಜ್ಯ ಸರ್ಕಾರ ಪರಿಹಾರ ಕೊಡಬಾರದು ಎಂದು ಏನು ನಿಯಮ ಇಲ್ಲ. ನಾವು ಪ್ರವಾಹ ಬಂದಾಗ ಕೇಂದ್ರದ ಎರಡು ಪಟ್ಟು ಪರಿಹಾರ ಕೊಟ್ಡಿದ್ದೇವೆ. ಜನ ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ ನೀವು ಜನರಿಗೆ ದ್ರೋಹ ಮಾಡಿದ್ದೀರಿ, ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಾಳೆ (ಶನಿವಾರ) ಪ್ರತಿಭಟನೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ 28 ಲೋಕಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಲಾಗುವುದು” ಎಂದು ಹೇಳಿದರು.

“ಕಾವೇರಿ ನೆಲ ಜಲ ವಿಚಾರ ಬಂದಾಗ ನಾವು ಒಗಟ್ಟು ಪ್ರದರ್ಶನ ಮಾಡಬೇಕು. ಆ ದೃಷ್ಟಿಯಿಂದ ನಾವು ಸಹಕಾರ ಕೊಡುತ್ತೇವೆ. ಸರ್ವಪಕ್ಷದ ಸಭೆಯಲ್ಲಿ ನೀರು ಬಿಡುವುದಿಲ್ಲ ಎಂದು ತೆಗೆದುಕೊಂಡ ತೀರ್ಮಾನ ಪಾಲನೆ ಮಾಡದಿದ್ದರೆ ನಾವು ಮಾತನಾಡುತ್ತೇವೆ. ಸುಪ್ರೀಂ ಕೋರ್ಟ್ ನಲ್ಲಿ ಇವರು ಮಧ್ಯಂತರ ಅರ್ಜಿ (ಐಎ) ಹಾಕಲಿಲ್ಲ” ಎಂದರು.

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಬೇಕಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಹಿಂದೆ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ತಂದಾಗ ಸುಪ್ರೀಂ ಕೋರ್ಟ್ ಅದನ್ನು ತಳ್ಳಿ ಹಾಕಿದೆ. ಅದರ ಬದಲು ಈಗಲಾದರೂ ಸರ್ಕಾರ ಮೇಲ್ಮನವಿ ಸಲ್ಲಿಸಿ ಇದುವರೆಗೂ ವಿಚಾರಣೆಯಲ್ಲಿ ಚರ್ಚೆಗೆ ಬಾರದ ಬೆಂಗಳೂರಿನ ಕುಡಿಯುವ ನೀರು, ತಮಿಳುನಾಡು ಹೆಚ್ಚಿಗೆ ನೀರು ಬಳಕೆ ಮಾಡಿಕೊಂಡಿದ್ದು, ನಮ್ಮಲ್ಲಿ ಮುಂಗಾರು ಮುಕ್ತಾಯವಾಗಿದ್ದು, ತಮಿಳುನಾಡಿಗೆ ಹಿಂಗಾರು ಮಳೆ ಬರುವ ವಿಚಾರಗಳನ್ನು ಸುಪ್ರೀಂ ಕೋರ್ಟ್ ಮುಂದೆ ಹಾಕಬೇಕು. ಅದನ್ನು ಸುಪ್ರೀಂ ಕೋರ್ಟ್ ಪರಿಗಣಿಸುವ ಸಾಧ್ಯತೆ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X