ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

Advertisements

ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ (ಮೇ 10) ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಿಎಂ ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು. “ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ. ರಾಜ್ಯದ ಜನರ ರಕ್ಷಣೆಗೆ ಮೊದಲು ಆದ್ಯತೆ ನೀಡಿ” ಎಂದು ಹೇಳಿರುವ ಮುಖ್ಯಮಂತ್ರಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಲು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

Advertisements

“ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು. ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸೂಚನೆ ನೀಡಲಾಗಿದೆ. ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಿ” ಎಂದು ಸೂಚಿಸಿದರು.

“ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು” ಎಂದು ತಿಳಿಸಿದ್ದಾರೆ. ಜೊತೆಗೆ ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು ಎಂದರು.

“ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು. ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿಯನ್ನು ಒದಗಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಪೌರ ರಕ್ಷಣಾ ವ್ಯವಸ್ಥೆಗೆ ಸ್ವಯಂಸೇವಕರನ್ನು ನೇಮಕ ಮಾಡುವ ಕಾರ್ಯ ಆರಂಭಿಸಬೇಕು. ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಲು ವ್ಯವಸ್ಥೆ ಕಲ್ಪಿಸಬೇಕು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಸುಳ್ಳು ಸುದ್ದಿಗೆ, ವದಂತಿಗೆ ಕಡಿವಾಣ ಹಾಕಲು ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಕರಾವಳಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು ಎಂದರು. ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ದೇಶದ, ರಾಜ್ಯದ ಸಹಭಾಳ್ವೆಗೆ ಧಕ್ಕೆ ತರುವ, ಕೋಮುಭಾವನೆ ಕೆರಳಿಸಿ, ಕೋಮು ವಿಭಜನೆ ತರಲು, ದೇಶದ ಭದ್ರತೆಗೆ ಅಪಾಯ ತರಲು ಷಡ್ಯಂತ್ರ ನಡೆಸುತ್ತಿರುವ ಎಲ್ಲರ ಪಟ್ಟಿ ಸಿದ್ದಪಡಿಸಿ ಕಾನೂನು ಕ್ರಮಕ್ಕೆ ಒಳಪಡಿಸಲು ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳಿಗೆ ಸೂಚಿಸಿದರು.

“ಕೋಮು ಸಾಮರಸ್ಯ ಕದಡುವ ಪ್ರಯತ್ನಗಳ ಮೇಲೆ ನಿಗಾ ಇರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೋಮು ಗೂಂಡಾಗಳ ಪಟ್ಟಿಯನ್ನು ಅಪ್‌ಡೇಟ್ ಮಾಡಬೇಕು. ಅವರ ಮೇಲೆ ನಿಗಾ ಇಡಬೇಕು. ಎಲ್ಲಾ ಕಮಿಷನರೇಟ್‌ಗಳಲ್ಲಿ ಅಲರ್ಟ್ ಆಗಿರಬೇಕು. ಪ್ರಮುಖ ಸ್ಥಾವರಗಳಲ್ಲಿ ಭದ್ರತೆಯನ್ನು ಹೆಚ್ಚಿಸಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಸುರಕ್ಷತೆ ಕುರಿತಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಸಹ ಕಟ್ಟುನಿಟ್ಟಿನಿಂದ ಪಾಲಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

“ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು. ಆಹಾರ ಭದ್ರತೆಯನ್ನು ಖಾತ್ರಿಪಡಿಸಬೇಕು. ಅಕ್ರಮ ದಾಸ್ತಾನು ಮೂಲಕ ಬೆಲೆ ಏರಿಕೆ ಮಾಡುವ ಪ್ರಯತ್ನಗಳನ್ನು ತಪ್ಪಿಸಬೇಕು” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X