ಬಿಜೆಪಿ ಜೊತೆ ಎಐಎಸ್ಎಂಕೆ ಪಕ್ಷ ವಿಲೀನಗೊಳಿಸಿದ ತಮಿಳು ನಟ ಶರತ್ ಕುಮಾರ್

Date:

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ತಮಿಳು ನಟ ಆರ್ ಶರತ್ ಕುಮಾರ್ ಅವರು ತಮ್ಮ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ (ಎಐಎಸ್ಎಂಕೆ) ಪಕ್ಷವನ್ನು ಬಿಜೆಪಿಯೊಂದಿಗೆ ಮಂಗಳವಾರ ವಿಲೀನಗೊಳಿಸಿದ್ದಾರೆ.

- Advertisement -

ಕನ್ನಡದಲ್ಲಿಯೂ ನಟಿಸಿರುವ ನಟ ಆರ್ ಶರತ್ ಕುಮಾರ್ ಅವರು ಎಐಎಸ್‌ಎಂಕೆ ಪದಾಧಿಕಾರಿಗಳು ಮತ್ತು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರ ಸಮ್ಮುಖದಲ್ಲಿ ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ತಮ್ಮ ಪಕ್ಷವನ್ನು ಬಿಜೆಪಿ ಜತೆಗೆ ವಿಲೀನಗೊಳಿಸಿದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶರತ್ ಕುಮಾರ್, “ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಏಕತೆಯನ್ನು ಬೆಳೆಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ಪೋಷಿಸುತ್ತಾರೆ. ಡ್ರಗ್ಸ್ ಪಿಡುಗನ್ನು ಕೊನೆಗಾಣಿಸಿ ಯುವಕರ ಹಿತ ಕಾಪಾಡುವುದು ಮೋದಿಯವರ ನೇತೃತ್ವದಲ್ಲಿ ಉಜ್ವಲವಾಗಿದೆ” ಎಂದು ಹೇಳಿದರು.

2026ರಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲಸ ಮಾಡುವಂತೆ ಶರತ್ ಕುಮಾರ್ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

 ಈ ಸುದ್ದಿ ಓದಿದ್ದೀರಾ?  ಬೋರ್ಡ್ ಪರೀಕ್ಷೆ | ಸಂವಿಧಾನದ ಮೂಲಭೂತ ಹಕ್ಕನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ: ನಿರಂಜನಾರಾಧ್ಯ ವಿ.ಪಿ

ಡಿಎಂಕೆಯಿಂಗ ರಾಜ್ಯಸಭೆಗೆ ಆಯ್ಕೆಯಾಗಿದ್ದ ಶರತ್ ಕುಮಾರ್ ಅವರು ನಂತರ ರಾಜ್ಯಸಭಾ ಸ್ಥಾನ ತ್ಯಜಿಸಿ ಎಐಎಡಿಎಂಕೆ ಸೇರಿದ್ದರು. ಅಂತಿಮವಾಗಿ 2007ರಲ್ಲಿ ಎಐಎಸ್ಎಂಕೆ ಸ್ಥಾಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...