ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದಾರೆ.
ಅವರ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ, ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ಬಳಿಕ ಇಂದು ತಮ್ಮ ರಾಜಕೀಯ ಪಕ್ಷದ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
#தமிழகவெற்றிகழகம் #TVKVijay pic.twitter.com/ShwpbxNvuM
— TVK Vijay (@tvkvijayoffl) February 2, 2024
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್, ನಮ್ಮ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಅನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ. ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ” ಎಂದಿದ್ದಾರೆ.
#WATCH | Tamil Nadu: Actor Vijay’s supporters in Madurai celebrate as the actor enters politics, and announces the name of his party – Tamilaga Vetri Kazham. pic.twitter.com/rGxybtA3dW
— ANI (@ANI) February 2, 2024
2024ರಲ್ಲಿ ಸ್ಪರ್ಧೆಯಿಲ್ಲ
ಅದೇ ರೀತಿ ನಾವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಕೂಡ ಇದೇ ವೇಳೆ ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆಗೂ ಮುನ್ನ ರಾಜಕೀಯ ಪಾದಾರ್ಪಣೆಗೆ ಸಜ್ಜಾದ ನಟ ವಿಜಯ್
ಕೇರಳ ಮತ್ತು ಕರ್ನಾಟಕದಲ್ಲಿ ಅವರ ಬಲವಾದ ಮತ್ತು ಸಂಘಟಿತ ಅಭಿಮಾನಿಗಳನ್ನು ಗಮನಿಸಿದರೆ ಪಕ್ಷದ ವ್ಯಾಪ್ತಿಯು ತಮಿಳುನಾಡು ರಾಜ್ಯವನ್ನು ಮೀರಿ ವಿಸ್ತರಿಸುವ ಸಾಧ್ಯತೆ ಇದೆ ಎಂದು ನಟ ವಿಜಯ್ ಅವರ ಆಪ್ತರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
#தமிழகவெற்றிகழகம் #TVKVijay https://t.co/Szf7Kdnyvr
— Vijay (@actorvijay) February 2, 2024
ಅಭಿಮಾನಿಗಳಿಂದ ಸಂಭ್ರಮಾಚರಣೆ
ನಟ ವಿಜಯ್ ರಾಜಕೀಯಕ್ಕೆ ಪ್ರವೇಶಿಸುತ್ತಿದ್ದಂತೆ ಮಧುರೈ, ಚೆನ್ನೈ ಸೇರಿದಂತೆ ವಿವಿಧ ಕಡೆಗಳಲ್ಲಿ ನಟ ವಿಜಯ್ ಬೆಂಬಲಿಗರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ವಿಜಯ್ ಅವರ ಫೋಟೋಗೆ ಪೂಜೆ ಸಲ್ಲಿಸಿ, ತೆಂಗಿನಕಾಯಿ ಒಡೆದು ಸಂಭ್ರಮಿಸಿದರು.