ತಮಿಳುನಾಡು | ʼಸ್ವಜನಪಕ್ಷಪಾತʼದ ಆರೋಪ; ಬಿಜೆಪಿ ವಿರುದ್ಧ ಉದಯನಿಧಿ ವಾಗ್ದಾಳಿ

Date:

Advertisements

‘ಸ್ವಜನಪಕ್ಷಪಾತ’ದ ಬಗ್ಗೆ ತಮ್ಮ ಪಕ್ಷದ ವಿರುದ್ಧ ಆಗಾಗ್ಗೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಆಡಳಿತಾರೂಢ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್ ತಿರುಗೇಟು ನೀಡಿದ್ದಾರೆ. “ಇಡೀ ತಮಿಳುನಾಡು ಡಿಎಂಕೆ ನಾಯಕ ದಿ. ಕರುಣಾನಿಧಿ ಅವರ ಸಂಬಂಧಿಕರಾಗಿರುವುದರಿಂದ ನಾನು ಕುಟುಂಬ ರಾಜಕಾರಣ ಮಾಡುವ ಪಕ್ಷಕ್ಕೆ ಸೇರಿದವನು” ಎಂದಿದ್ದಾರೆ.

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ, ಕರುಣಾನಿಧಿ ಅವರ ಮೊಮ್ಮಗ, ಸಚಿವ ಉದಯನಿಧಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಜೆಪಿಯವರು ನಮ್ಮನ್ನು (ಡಿಎಂಕೆ) ಕುಟುಂಬ ರಾಜಕಾರಣ ನಡೆಸುವ ಪಕ್ಷವೆಂದು ಕರೆಯುತ್ತಾರೆ. ಡಿಎಂಕೆ ಕುಟುಂಬ ರಾಜಕಾರಣ ಮಾಡುವ ಪಕ್ಷ ಎಂಬುದನ್ನು ನಾನು ಒಪ್ಪುತ್ತೇನೆ. ಏಕೆಂದರೆ ಇಡೀ ತಮಿಳುನಾಡು ಕರುಣಾನಿಧಿ ಅವರ ಕುಟುಂಬವಾಗಿದೆ” ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಉದಯನಿಧಿ, “ಎಐಎಡಿಎಂಕೆ ನಾಯಕಿ ದಿ. ಜಯಲಲಿತಾ ಮುಖ್ಯಮಂತ್ರಿಯಾಗಿದ್ದಾಗಲೂ ರಾಜ್ಯದಲ್ಲಿ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ)ಗೆ ಅವಕಾಶವಿರಲಿಲ್ಲ. ಆದರೆ, ಅವರ ನಿಧನದ ನಂತರ, ಬಿಜೆಪಿಯ ದಾಸ ಸರ್ಕಾರ (ಹಿಂದಿನ ಎಐಎಡಿಎಂಕೆ ಆಡಳಿತ) ಬಿಜೆಪಿಗೆ ಹೆದರಿ ರಾಜ್ಯದಲ್ಲಿ ನೀಟ್ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿತು” ಎಂದು ಟೀಕಿಸಿದರು.

Advertisements

“ನೀಟ್ ಪರೀಕ್ಷೆಯನ್ನು ತಮಿಳುನಾಡಿಗೆ ತರಲು ಹಿಂದಿನ ಸರ್ಕಾರ ತೆಗೆದುಕೊಂಡ ನಿರ್ಧಾರ ನಮ್ಮ ಹೆಣ್ಣುಮಕ್ಕಳಲ್ಲಿ ಒಬ್ಬರಾದ ಅನಿತಾ (ಅಖಿಲ ಭಾರತ ರಾಷ್ಟ್ರೀಯ ಮತ್ತು ವೈದ್ಯಕೀಯ ಎಂಜಿನಿಯರಿಂಗ್ ಪರೀಕ್ಷೆಯ ವಿರುದ್ಧ ಹೋರಾಟವನ್ನು ಮುನ್ನಡೆಸಿದ್ದರು) ಎಂಬುವವರ ಆತ್ಮಹತ್ಯೆಗೆ ಕಾರಣವಾಯಿತು. ಆ ಬಳಿಕ ನೀಟ್ ಪರೀಕ್ಷೆಯ ಭಯದಿಂದ ಈವರೆಗೆ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದರು.

ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ತಮಿಳುನಾಡಿನ ಎಲ್ಲ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19ರಂದು ಮತದಾನ ನಡೆಯಲಿದೆ.

2019ರ ಸಾರ್ವತ್ರಿಕ ಚುನಾವಣೆಯ ಮತದಾನದಲ್ಲಿ, ಕಾಂಗ್ರೆಸ್, ವಿಸಿಕೆ, ಎಂಡಿಎಂಕೆ, ಸಿಪಿಐ, ಸಿಪಿಐ(ಎಂ), ಐಯುಎಂಎಲ್, ಎಂಎಂಕೆ, ಕೆಎಂಡಿಕೆ, ಟಿವಿಕೆ ಮತ್ತು ಎಐಎಫ್‌ಟಿ ಒಳಗೊಂಡ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟವು 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ವಿಜಯವನ್ನು ದಾಖಲಿಸಿತ್ತು.

ಈ ಸುದ್ದಿ ಓದಿದ್ದೀರಾ? ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

2019ರ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ 23 ಲೋಕಸಭಾ ಸ್ಥಾನಗಳನ್ನು ಗೆದ್ದು, ಒಟ್ಟು ಚಲಾವಣೆಯಾದ ಮತಗಳಲ್ಲಿ ಶೇ.33.2ರಷ್ಟ ಮತಗಳನ್ನು ಪಡೆದಿತ್ತು. ಕಾಂಗ್ರೆಸ್ 8 ಸ್ಥಾನಗಳನ್ನು ಗಳಿಸಿದರೆ, ಸಿಪಿಐ ಎರಡು ಸ್ಥಾನಗಳನ್ನು ಗೆದ್ದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X