‘ಒಂದು ದೇಶ, ಒಂದು ಚುನಾವಣೆ’ ನೀತಿಗೆ ವಿರೋಧ: ನಿರ್ಣಯ ಅಂಗೀಕರಿಸಿದ ತಮಿಳುನಾಡು ಸರ್ಕಾರ

Date:

Advertisements

ಕಳೆದ ಕೆಲವು ತಿಂಗಳುಗಳಿಂದ ದೇಶಾದ್ಯಂತ ಚರ್ಚೆಯಲ್ಲಿರುವ ಕೇಂದ್ರ ಸರ್ಕಾರದ ಪ್ರಸ್ತಾವಿತ ‘ಒಂದು ದೇಶ, ಒಂದು ಚುನಾವಣೆ’ ನೀತಿಗೆ ವಿರೋಧ ವ್ಯಕ್ತಪಡಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ, ಇಂದು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವ ಮೂಲಕ, ಅಂಗೀಕರಿಸಿಕೊಂಡಿದೆ.

‘ಒಂದು ದೇಶ, ಒಂದು ಚುನಾವಣೆ’ ನೀತಿ ಮಾತ್ರವಲ್ಲದೇ, ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಬಾರದು ಎಂಬ ಎರಡು ಪ್ರತ್ಯೇಕ ನಿರ್ಣಯಗಳನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.

ಕಳೆದ ಸೋಮವಾರ ರಾಜ್ಯಪಾಲ ಆರ್.ಎನ್. ರವಿ ಅವರ ಭಾಷಣದೊಂದಿಗೆ ತಮಿಳುನಾಡಿನ ಬಜೆಟ್ ಅಧಿವೇಶನ ಪ್ರಾರಂಭವಾಗಿದೆ. ಪ್ರಸಕ್ತ ವರ್ಷದ ಬಜೆಟ್ ಫೆ.19 ರಂದು ಮಂಡನೆಯಾಗಲಿದೆ.

Advertisements

ಈ ನಡುವೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಇಂದು ಒಂದು ರಾಷ್ಟ್ರ, ಒಂದು ಚುನಾವಣೆ ಮತ್ತು ಕ್ಷೇತ್ರ ಪುನ‌ರ್ ಸಂಘಟನೆಯ ವಿರುದ್ಧ ಪ್ರತ್ಯೇಕ ನಿರ್ಣಯಗಳನ್ನು ಪ್ರಸ್ತಾಪಿಸಿದರು.

“ಒಂದು ದೇಶ ಒಂದು ಚುನಾವಣೆಯನ್ನು ಬಲವಾಗಿ ವಿರೋಧಿಸಬೇಕಿದೆ. ಜನಗಣತಿಯ ನಂತರ ಕ್ಷೇತ್ರಗಳನ್ನು ಪುನರ್ ರಚಿಸಲಾಗುವುದು ಎಂದು ಘೋಷಿಸಲಾಗಿದೆ. ಈ ಮೂಲಕ ತಮಿಳುನಾಡಿನಿಂದ ಚುನಾಯಿತರಾಗುವ ಜನಪ್ರತಿನಿಧಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಂಚು ರೂಪಿಸಿದ್ದಾರೆ. ಇವೆರಡೂ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿವೆ” ಎಂದು ಸಿಎಂ ನಿರ್ಣಯ ಮಂಡನೆಯ ವೇಳೆ ಹೇಳಿದರು.

“ಒಂದು ದೇಶ ಒಂದು ಚುನಾವಣೆ ಯೋಜನೆ ಸಂಪೂರ್ಣವಾಗಿ ಅಪ್ರಾಯೋಗಿಕವಾಗಿದ್ದು, ಸಂವಿಧಾನಕ್ಕೆ ವಿರುದ್ಧವಾಗಿದೆ. ಒಂದೇ ಚುನಾವಣೆಯು ಜನಪ್ರಿಯವಾಗಿ ಚುನಾಯಿತವಾದ ಶಾಸಕಾಂಗಗಳನ್ನು ಬೇಗನೆ ವಿಸರ್ಜಿಸಲು ಕಾರಣವಾಗಬಹುದು. ಯಾವುದೋ ರಾಜ್ಯದಲ್ಲಿ ಸರ್ಕಾರ ಪತನವಾದಾಗ ಏನು ಮಾಡುವುದು?” ಎಂದು ಕೇಳಿದ ಸ್ಟಾಲಿನ್, “ಇದೊಂದು ತಮಾಷೆಯ ವಿಷಯವಾಗಿದೆ. ಸಂಸದೀಯ ಚುನಾವಣೆಗಳನ್ನು ಕೂಡ ಸಹ ಒಂದೇ ಹಂತದಲ್ಲಿ ನಡೆಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಸ್ಥಳೀಯ ಸಂಸ್ಥೆಗಳು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವಾಗ, ಅವುಗಳಿಗೂ ಚುನಾವಣೆ ನಡೆಸಲಾಗುವುದು ಎಂದು ಹೇಳುವುದು ರಾಜ್ಯದ ಹಕ್ಕುಗಳನ್ನು ಕಸಿದುಕೊಂಡಂತಾಗುತ್ತದೆ” ಎಂದು ತಿಳಿಸಿದರು.

“ಕ್ಷೇತ್ರ ಪುನರ್‌ ವಿಂಗಡಣೆ ಮೂಲಕ ತಮಿಳುನಾಡಿನ ಸದಸ್ಯರ ಸಂಖ್ಯೆಯನ್ನು ಕಡಿಮೆ ಮಾಡುವ ತಂತ್ರಗಾರಿಕೆ ನಡೆಯುತ್ತಿದೆ. ಜನಸಂಖ್ಯೆ ಅಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆಯು ಜನಸಂಖ್ಯೆಯನ್ನು ನಿಯಂತ್ರಿಸದ ರಾಜ್ಯಗಳಿಗೆ ಲಾಭದಾಯಕವಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಜನಗಣತಿಯ ಪ್ರಕಾರ ಕ್ಷೇತ್ರಗಳನ್ನು ಪುನ‌ರ್ ರಚಿಸಿದರೆ ತಮಿಳುನಾಡಿನ ಪ್ರಾತಿನಿಧ್ಯ ಕಡಿಮೆಯಾಗುತ್ತದೆ. ಎಲ್ಲ ರಾಜ್ಯಗಳಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಗಂಭೀರ ಕ್ರಮಗಳನ್ನು ಕೈಗೊಳ್ಳುವವರೆಗೆ ಕ್ಷೇತ್ರಗಳ ಸಂಖ್ಯೆ ಇದೇ ರೀತಿ ಮುಂದುವರಿಯಬೇಕು.” ಎಂದು ಸಿಎಂ ಸ್ಟಾಲಿನ್ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಅಕ್ರಮ ವ್ಯವಹಾರದ ಬಗ್ಗೆ ತನಿಖೆ ಆರಂಭಿಸಿದ ED: ವರದಿ

“ತಮಿಳುನಾಡಿನಲ್ಲಿ 39 ಲೋಕಸಭಾ ಸ್ಥಾನಗಳಿವೆ. ಡಿಲಿಮಿಟೇಶನ್ ಮಾಡಿದರೆ ನಮ್ಮ ಲೋಕಸಭಾ ಸ್ಥಾನಗಳ ಸಂಖ್ಯೆ ಕಡಿಮೆಯಾಗುತ್ತದೆ. 39 ಸಂಸದರಿದ್ದರೂ ನಮ್ಮ ಬೇಡಿಕೆಗಳಿಗೆ ಸಂಸತ್ತಿನಲ್ಲಿ ಬೆಲೆ ಸಿಗುವುದಿಲ್ಲ. ಈಗ ಈ ಸಂಖ್ಯೆಯನ್ನು ಇನ್ನೂ ಕಡಿಮೆ ಮಾಡಿದರೆ ಅದು ನಮ್ಮ ರಾಜ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು” ಎಂದು ತಮಿಳುನಾಡು ಸಿಎಂ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X