ತಮಿಳಿಸೈ, ಅಣ್ಣಾಮಲೈ ಬಗ್ಗೆ ಟೀಕೆ: ತಮಿಳುನಾಡಿನ ಇಬ್ಬರು ಬಿಜೆಪಿ ನಾಯಕರು ಅಮಾನತು

Date:

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ಮತ್ತು ಹಿರಿಯ ನಾಯಕಿ ತಮಿಳಿಸೈ ಸೌಂದರರಾಜನ್ ಅವರನ್ನು ಬಹಿರಂಗವಾಗಿ ಟೀಕಿಸಿ ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣ ಇಬ್ಬರು ಬಿಜೆಪಿ ನಾಯಕರನ್ನು ತಮಿಳುನಾಡು ಬಿಜೆಪಿ ಜವಾಬ್ದಾರಿಯಿಂದ ತೆಗೆದುಹಾಕಿದೆ. ಇನ್ನು ಈ ಇಬ್ಬರು ನಾಯಕರೊಂದಿಗೆ ಬೆರೆಯದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಸೂಚಿಸಲಾಗಿದೆ.

ತಮಿಳುನಾಡು ಬಿಜೆಪಿಯ ಇಂಟೆಲೆಕ್ಚುವಲ್ ವಿಂಗ್‌ನ ಭಾಗವಾಗಿದ್ದ ಕಲ್ಯಾಣ್ ರಾಮನ್ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ಕೆಳಗಿಳಿಸಲಾಗಿದೆ ಮತ್ತು ಒಂದು ವರ್ಷದ ಅವಧಿಗೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅದೇ ರೀತಿ ತಮಿಳುನಾಡು ಬಿಜೆಪಿಯ ಒಬಿಸಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿದ್ದ ತಿರುಚ್ಚಿ ಸೂರ್ಯ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಕೆಳಗಿಳಿಸಲಾಗಿದೆ.

ಇದನ್ನು ಓದಿದ್ದೀರಾ?  ವೇದಿಕೆಯಲ್ಲೇ ಮಾಜಿ ರಾಜ್ಯಪಾಲೆ ತಮಿಳ್‌ಸೈಗೆ ಎಚ್ಚರಿಕೆ ನೀಡಿದ ಅಮಿತ್ ಶಾ: ವಿಡಿಯೋ ವೈರಲ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಪ್ರಕಾರ, ಇಬ್ಬರು ನಾಯಕರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ. ಆ ಮೂಲಕ ಪಕ್ಷಕ್ಕೆ ಕಳಂಕ ತಂದಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಕಲ್ಯಾಣ್ ರಾಮನ್, ಕೆ ಅಣ್ಣಾಮಲೈ ಮತ್ತು ಅವರ ‘ವಾರ್ ರೂಮ್’ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದಾರೆ. ಅಣ್ಣಾಮಲೈ ಕಾರ್ಯವೈಖರಿ ಮತ್ತು ನಿರ್ಧಾರ ತೆಗೆದುಕೊಳ್ಳುವ ಶೈಲಿಯನ್ನು ಬಹಿರಂಗವಾಗಿ ಪ್ರಶ್ನಿಸಿದ್ದಾರೆ.


ಕಲ್ಯಾಣ್ ರಾಮನ್ ಅವರು ಸರಿಯಾದ ಪುರಾವೆಗಳಿಲ್ಲದೆ ರಾಜ್ಯ ನಾಯಕತ್ವ ಮತ್ತು ಪಕ್ಷದ ಕಾರ್ಯಕರ್ತರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಲ್ಯಾಣ್ ರಾಮನ್ ಅವರನ್ನು ಪಕ್ಷದಿಂದ ತೆಗೆದುಹಾಕಿದೆ.

ಇದನ್ನು ಓದಿದ್ದೀರಾ? ತಮಿಳುನಾಡಿನ ಜನ ಅಣ್ಣಾಮಲೈಗೆ ʼಕೈʼ ಕೊಟ್ಟಿದ್ಯಾಕೆ?

ತಿರುಚ್ಚಿ ಸೂರ್ಯ ಅವರು ತಮ್ಮ ಇತ್ತೀಚಿನ ಕೆಲವು ಸಂದರ್ಶನಗಳಲ್ಲಿ ಬಿಜೆಪಿಯ ಹಿರಿಯ ನಾಯಕಿ ತಮಿಳಿಸೈ ಸೌಂದರರಾಜನ್ ಅವರನ್ನು ಟೀಕಿಸಿದ್ದಾರೆ.

ಬಿಜೆಪಿಯ ಕೋರ್ ಕಮಿಟಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ ಅಣ್ಣಾಮಲೈ, “ಕೆಲವು ಪಕ್ಷದ ಸದಸ್ಯರು ಸಾಮಾಜಿಕ ಮಾಧ್ಯಮದಲ್ಲಿ ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿ ತಮ್ಮದೇ ನಾಯಕರನ್ನು ಟೀಕಿಸುತ್ತಿರುವುದನ್ನು ಗಮನಿಸಿದ್ದೇನೆ. ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನದಿಗೆ ಹಾರಿದ್ದ ಜಮ್ಮು ಯುವಕನ ಮೃತದೇಹ ಪಾಕಿಸ್ತಾನದಲ್ಲಿ ಪತ್ತೆ

ಜಮ್ಮು ಮತ್ತು ಕಾಶ್ಮೀರದ ಜಮ್ಮುವಿನಲ್ಲಿ ಕಳೆದ ತಿಂಗಳು ಚೆನಾಬ್ ನದಿಗೆ ಹಾರಿ...

ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ; ‘ಚಾನ್ಸೇ ಇಲ್ಲ’ ಎಂದ ಕೇಂದ್ರ ಸಚಿವ ಮಾಂಝಿ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಎನ್‌ಡಿಎ ಸರ್ಕಾರದ ಪಾಲುದಾರ ಜೆಡಿಯು ಕೇಂದ್ರ...

ಅಕ್ರಮವಾಗಿ ‘ಕೆಂಪು ಬೀಕನ್’ ಅಳವಡಿಸಿದ್ದ ಐಎಎಸ್ ಅಧಿಕಾರಿಯ ಆಡಿ ಕಾರು ವಶ

ತಮ್ಮ ಐಷಾರಾಮಿ ಕಾರಿಗೆ ಅಕ್ರಮವಾಗಿ 'ಕೆಂಪು ಬೀಕನ್' ದೀಪವನ್ನು ಅಳವಡಿಸಿದ ಆರೋಪದ...

ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು...