ತಾರತಮ್ಯದ ಬಜೆಟ್ | ರಾಜಕೀಯವಾಗಿ ಮೂಲೆಗುಂಪಾಗುತ್ತೀರಿ: ಮೋದಿಗೆ ಸ್ಟಾಲಿನ್ ಎಚ್ಚರಿಕೆ

Date:

ತಮ್ಮ ರಾಜಕೀಯ ಇಷ್ಟ, ಇಷ್ಟವಿಲ್ಲದಿರುವ ವಿಚಾರಗಳನ್ನು ಆಧರಿಸಿ ಆಡಳಿತವನ್ನು ಮುಂದುವರಿಸಿದರೆ ನೀವು ರಾಜಕೀಯವಾಗಿ ಮೂಲೆಗುಂಪಾಗುತ್ತೀರಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -

ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಬಜೆಟ್ ಹಂಚಿಕೆಗೆ ಮೋದಿ ಒಲವು ತೋರುತ್ತಿದ್ದಾರೆ ಎಂದು ಟೀಕಿಸಿದ ಸ್ಟಾಲಿಕ್, “ಮೋದಿ ತಮ್ಮ ಮಿತ್ರರನ್ನು ಸಮಾಧಾನಪಡಿಸಬಹುದು ಆದರೆ ಅವರು ದೇಶವನ್ನು ಉಳಿಸಲು ಸಾಧ್ಯವಿಲ್ಲ” ಎಂದು ತನ್ನ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಬಜೆಟ್‌ನಲ್ಲಿ ಕೇಂದ್ರವು ಇತರ ರಾಜ್ಯಗಳ ವಿರುದ್ಧ ತಾರತಮ್ಯ ಮಾಡಿದೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದ ಬೆನ್ನಲ್ಲೇ ಸ್ಟಾಲಿನ್ ಟ್ವೀಟ್ ಮಾಡಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ತಮ್ಮನ್ನು ಸೋಲಿಸಿದವರ ವಿರುದ್ಧ ಮೋದಿ ಬಜೆಟ್ ಮೂಲಕ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಎಂಕೆ ಸ್ಟಾಲಿನ್ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?  ತಮಿಳುನಾಡು ರಾಜಕಾರಣ | ಕರುಣಾನಿಧಿ, ಸ್ಟಾಲಿನ್ ನಂತರ ಸಿಎಂ ಕುರ್ಚಿಯತ್ತ ಉದಯನಿಧಿ?

“ನೀವು ಹೇಳಿದ್ದೀರಿ, ಚುನಾವಣೆ ಮುಗಿದಿದೆ, ಈಗ ನಾವು ದೇಶದ ಬಗ್ಗೆ ಯೋಚಿಸಬೇಕು. ಆದರೆ, ನಿನ್ನೆಯ ಬಜೆಟ್ 2024 ನಿಮ್ಮ ಆಡಳಿತವನ್ನು ಮಾತ್ರ ಉಳಿಸುತ್ತದೆ, ಭಾರತವನ್ನಲ್ಲ” ಎಂದು ಸ್ಟಾಲಿನ್ ಎಕ್ಸ್ ಪೋಸ್ಟ್ ಮಾಡಿದ್ದಾರೆ.

“ರಾಜಕೀಯ ಪಕ್ಷಪಾತದ ಆಧಾರದ ಮೇಲೆ ಮೋದಿ ಆಡಳಿತ ಮುಂದುವರಿಸಿದರೆ, ಅವರು ಪ್ರತ್ಯೇಕಗೊಳ್ಳುವ ಅಪಾಯವಿದೆ” ಎಂದು ಹೇಳಿರುವ ಸ್ಟಾಲಿನ್ #BJPBetraysTamilnadu ಎಂಬ ಹ್ಯಾಷ್‌ಟ್ಯಾಗ್ ಅನ್ನು ಹಾಕಿದ್ದಾರೆ.

ಇನ್ನು ಸ್ಟಾಲಿನ್ ಸೇರಿದಂತೆ ನಾಲ್ವರು ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳ ಬೇಡಿಕೆಗಳನ್ನು ಕೇಂದ್ರ ಬಜೆಟ್‌ನಲ್ಲಿ ನಿರ್ಲಕ್ಷಿಸಿರುವುದನ್ನು ವಿರೋಧಿಸಿ ಜುಲೈ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ನೀತಿ ಆಯೋಗ ಭೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...