21 ಲಕ್ಷಕ್ಕೂ ಹೆಚ್ಚು ವೃದ್ಧರು, ಅಂಗವಿಕಲರ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಮುಂದಾದ ತಮಿಳುನಾಡು ಸರ್ಕಾರ

Date:

Advertisements

21 ಲಕ್ಷಕ್ಕೂ ಹೆಚ್ಚು ವೃದ್ಧರು ಮತ್ತು ಅಂಗವಿಕಲರಿಗೆ ಪಡಿತರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸಲು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮುಂದಾಗಿದ್ದಾರೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ಮುಖ್ಯಮಂತ್ರಿಗಳ ಥಾಯುಮನವರ್ ಯೋಜನೆಯನ್ನು ಸ್ಟಾಲಿನ್ ಚೆನ್ನೈನಲ್ಲಿ ಉದ್ಘಾಟಿಸಲಿದ್ದಾರೆ.

ಈ ಯೋಜನೆಯಡಿಯಲ್ಲಿ ಅಕ್ಕಿ ಮತ್ತು ಸಕ್ಕರೆ ಸೇರಿದಂತೆ ಪಡಿತರ ಸಾಮಗ್ರಿಗಳನ್ನು ಉದ್ದೇಶಿತ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಪಡಿತರ ಚೀಟಿ ಹೊಂದಿರುವ 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಈ ಯೋಜನೆಯ ಫಲಾನುಭವಿಗಳು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್‌ | 2024-25ನೇ ಸಾಲಿನ ಹೊಸ ಯೋಜನೆಗಳ ಪೂರ್ಣ ವಿವರ ಇಲ್ಲಿದೆ…

Advertisements

ಸುಮಾರು 20.42 ಲಕ್ಷ ಹಿರಿಯ ನಾಗರಿಕರು ಮತ್ತು 1.27 ಲಕ್ಷಕ್ಕೂ ಹೆಚ್ಚು ಅಂಗವಿಕಲರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಪ್ರತಿ ಎರಡನೇ ಶನಿವಾರ ಮತ್ತು ಭಾನುವಾರ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಈ ಜನಪರ ಕ್ರಮದಿಂದ ಸರ್ಕಾರಕ್ಕೆ 30.16 ಕೋಟಿ ರೂ.ಗಳ ಹೊರೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನು ಕರ್ನಾಟಕ, ಆಂಧ್ರ ಪ್ರದೇಶ ಸೇರಿ ಕೆಲವು ರಾಜ್ಯಗಳಲ್ಲಿ ಈ ರೀತಿಯ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಂಡಿದೆ. ರಾಜ್ಯದಲ್ಲಿಯೂ ಈ ಸಂಬಂಧ ಅನ್ನ ಸುವಿಧ ಎಂಬ ಯೋಜನೆಯಿದೆ. ಆದರೆ ಸರಿಯಾದ ರೀತಿಯಲ್ಲಿ ಅನುಷ್ಠಾನಗೊಂಡಿಲ್ಲ. 80 ವರ್ಷ ದಾಟಿದ ವೃದ್ಧರಿಗೆ ಅನ್ನ ಸುವಿಧ ಯೋಜನೆ ಮೂಲಕ ಮನೆ ಬಾಗಿಲಿಗೆ ಪಡಿತರ ತಲುಪಿಸುವ ವ್ಯವಸ್ಥೆಯಿದಾಗಿದ್ದು, ಇದಕ್ಕಾಗಿ ಆಪ್‌ ಬಿಡುಗಡೆಯಾಗಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X