ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗದು: ಉಪಮುಖ್ಯಮಂತ್ರಿ ಡಿಕೆಶಿ

Date:

  • ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು
  • ಸೌಹಾರ್ದತೆಯಿಂದ ಮೇಕೆದಾಟು ಯೋಜನೆಗೆ ಸಹಕರಿಸಿ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದರು.

- Advertisement -

ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೇಕೆದಾಟು ಯೋಜನೆಗೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ ನಂತರ ಹಿಂದಿನ ಸರ್ಕಾರ ರಾಜ್ಯ ಬಜೆಟ್ ನಲ್ಲಿ 1 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಆದರೆ ಅದನ್ನು ಖರ್ಚು ಮಾಡಿಲ್ಲ ಎಂದರು.

ನಮಗೆ ತಮಿಳುನಾಡಿನ ಮೇಲೆ ದ್ವೇಷ ಮಾಡುವ, ಯುದ್ಧ ಮಾಡುವ ಉದ್ದೇಶವಿಲ್ಲ. ಅಲ್ಲಿರುವವರು ನಮ್ಮ ಅಣ್ಣತಮ್ಮಂದಿರೆ. ನಮಗೆ ಯಾರ ಮೇಲೂ ದ್ವೇಷ, ಅಸೂಯೆ ಇಲ್ಲ ಎಂದು ಹೇಳಿದರು.

ಮೇಕೆದಾಟು ನಮ್ಮ ಯೋಜನೆ. ಇದರಿಂದ ತಮಿಳುನಾಡಿಗೂ ಅನುಕೂಲವಾಗುತ್ತದೆ. ಸಮುದ್ರಕ್ಕೆ ಹೋಗುವ ನೀರು ತಡೆದು ಅದನ್ನು ಕಾವೇರಿ ಭಾಗದ ಜನರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು. ಕಾವೇರಿ ನದಿಗೆ ಅಣೆಕಟ್ಟುಗಳ ಬೀಗ ಕೇಂದ್ರ ಸರ್ಕಾರದ ಕೈಯಲ್ಲಿದೆ. ಅವರಿಗೆ ಯಾವಾಗ ಎಷ್ಟು ನೀರು ಬಿಡಬೇಕು ಎಂದು ಅವರು ತೀರ್ಮಾನಿಸಿ ಬಿಡುತ್ತಾರೆ ಎಂದರು.

ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸುವುದರಿಂದ ಅವರಿಗೆ ಆಗುವ ತೊಂದರೆ ಏನು? ನಮ್ಮಲ್ಲಿ ನೀರು ಸಂರಕ್ಷಣೆ ಮಾಡಿಕೊಂಡು ಕುಡಿಯುವ ನೀರು ಪೂರೈಸಬಹುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಹೀಗಾಗಿ ತಮಿಳುನಾಡಿನವರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಮೇಕೆದಾಟು ಯೋಜನೆಯಿಂದ ಯಾವುದೇ ತೊಂದರೆ ಇಲ್ಲ. ಹೀಗಾಗಿ ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದದ್ದು ಸಾಕು. ಸೌಹಾರ್ದತೆಯಿಂದ ಕುಡಿಯುವ ನೀರು ಹಾಗೂ ತಮಿಳುನಾಡಿನ ರೈತರಿಗೆ ಅನುಕೂಲವಾಗುವ ಯೋಜನೆಗೆ ಸಹಕರಿಸಿ.

ಈ ಸುದ್ದಿ ಓದಿದ್ದೀರಾ? ಮಳೆಹಾನಿ | ಪರಿಹಾರ ಕ್ರಮ ತ್ವರಿತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ

ಆಕ್ರಮಣಕಾರಿಯಾಗಿ ವರ್ತಿಸುವುದು ಬೇಡ : ಡಿಎಂಕೆ

ಡಿಎಂಕೆ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಬುಧವಾರ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದರು. “ಅಧಿಕಾರಕ್ಕೆ ಬಂದು ಕೆಲ ದಿನಗಳು ಕಳೆದಿವೆ. ಅಷ್ಟರಲ್ಲೇ, ನೆರೆಯ ರಾಜ್ಯದ ಬಗ್ಗೆ ಶಿವಕುಮಾ‌ರ್‌ ಅವರು ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದಕ್ಕೆ ಆಶ್ಚರ್ಯವಾಗಿದೆ. ಮೇಕೆದಾಟು ಯೋಜನೆ ಕುರಿತು ಅಧಿಕಾರಿಗಳು ಅವರಿಗೆ ವಿವರವಾದ ಮಾಹಿತಿ ನೀಡಿಲ್ಲ ಅನಿಸುತ್ತದೆ. ನಾನು ಶಿವಕುಮಾರ್ ಅವರನ್ನು ಭೇಟಿ ಮಾಡಿ, ಈ ವಿಷಯ ಕುರಿತು ವಿವರಿಸುತ್ತೇನೆ. ಅಲ್ಲಿಯವರೆಗೆ ಅವರು ತಾಳ್ಮೆಯಿಂದ ಇರುತ್ತಾರೆ ಎಂದು ಆಶಿಸುವೆ” ಎಂದಿದ್ದರು.

“ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದಕ್ಕಾಗಿ ಕಾಂಗ್ರೆಸ್‌ ಪಕ್ಷಕ್ಕೆ ಮತ್ತು ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲು ಅವರನ್ನು ಭೇಟಿಯಾಗಲು ಯೋಜಿಸಿದ್ದೆ. ಆದರೆ, ಈಗ ಈ ಹೇಳಿಕೆ ಮೂಲಕವೇ ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ” ಎಂದು ಪ್ರಕಟಣೆಯಲ್ಲಿ ಹೇಳಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...