ಮತ್ತೆ ತೆರಿಗೆ ಅನ್ಯಾಯ, ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರ್ಕಾರ: ಡಿ ಕೆ ಸುರೇಶ್ ಆಕ್ರೋಶ

Date:

ಪದೇ ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು.

- Advertisement -

ರಾಜ್ಯಗಳಿಗೆ ತೆರಿಗೆ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ಪಟ್ಟಿಯ ಬಗ್ಗೆ ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಕೇಳಿದಾಗ ಸುರೇಶ್ ಅವರು ಹೀಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

“ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ ಪಾವತಿಸುವ ಎರಡನೇ ರಾಜ್ಯ ಕರ್ನಾಟಕಕ್ಕೆ 6,498 ಕೋಟಿ ರೂಪಾಯಿ ಕೊಡಲಾಗಿದೆ. ದಕ್ಷಿಣ ಭಾರತ ರಾಜ್ಯಗಳಿಗೆ ಒಟ್ಟಾರೆ 28,152 ಕೋಟಿ ರೂಪಾಯಿ ತೆರಿಗೆ ಪಾಲು ಕೊಡಲಾಗಿದೆ. ಆದರೆ ಉತ್ತರ ಪ್ರದೇಶ ರಾಜ್ಯವೊಂದಕ್ಕೆ 31,962 ಕೋಟಿ ರೂಪಾಯಿ ನೀಡಲಾಗಿದೆ. ನಮಗೆ ಈಗಾಗಲೇ ಆಗಿರುವ ಅನ್ಯಾಯವನ್ನಾದರೂ ಕನಿಷ್ಠ ಪಕ್ಷ ಸರಿದೂಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬಹುದಿತ್ತು. 2022 ರ ಕೇಂದ್ರ ಬಜೆಟ್ ಸಂದರ್ಭದಲ್ಲಿಯೇ ರಾಜ್ಯಗಳ ತೆರಿಗೆ ಪಾಲಿನ ತಾರತಮ್ಯದ ಬಗ್ಗೆ ನಾನು ದನಿಯೆತ್ತಿದ್ದೆ. ಅದರಲ್ಲೂ ಕರ್ನಾಟಕಕ್ಕೆ ಮತ್ತು ದಕ್ಷಿಣ ಭಾರತ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದೆ” ಎಂದು ಹೇಳಿದರು.

“ಉತ್ತರ ಭಾರತ ರಾಜ್ಯಗಳಂತೆ, ದಕ್ಷಿಣ ಭಾರತದ ರಾಜ್ಯಗಳನ್ನು ಕೇಂದ್ರ ಸರ್ಕಾರ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. ನಮ್ಮ ರಾಜ್ಯಗಳ ಅಭಿವೃದ್ದಿಗೆ ಪೂರಕವಾಗಿ ನಿಲ್ಲಬೇಕು ಎನ್ನುವ ಆಲೋಚನೆ ಕೇಂದ್ರ ಸರ್ಕಾರಕ್ಕೆ ಬರಬೇಕು” ಎಂದರು.

ಕರ್ನಾಟಕದ ಮೇಲೆ ಮಲತಾಯಿ ಧೋರಣೆ ಏಕೆ?

“ಬಿಜೆಪಿ ಹಾಗೂ ಮಿತ್ರಪಕ್ಷದ 19 ಮಂದಿ ಸಂಸತ್ ಸದಸ್ಯರನ್ನು ಕರ್ನಾಟಕದಿಂದ ಕಳುಹಿಸಲಾಗಿದೆ. ಕಳೆದ 5 ಚುನಾವಣೆಗಳಲ್ಲಿ ಅತಿ ಹೆಚ್ಚು ಸಂಸದರನ್ನು ಕರ್ನಾಟಕದಿಂದ ಕಳುಹಿಸಿದರೂ ಏಕೆ ಈ ಧೋರಣೆ? ಕರ್ನಾಟಕದ ಜನರ ಮೇಲೆ ಮಲತಾಯಿ ಮತ್ಸರವೇಕೆ? ವಿಜಯದಶಮಿಯ ದಿನ ಕರ್ನಾಟಕಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಹಕ್ಕೋತ್ತಾಯ ಮಾಡುತ್ತಿದ್ದೇನೆ” ಎಂದು ಹೇಳಿದರು.

ನನ್ನ ಹಿಂದಿನ ಹೇಳಿಕೆ ತಿರುಚಲಾಗಿತ್ತು

ತೆರಿಗೆ ಅನ್ಯಾಯ ಮುಂದುವರೆದರೆ ದಕ್ಷಿಣ ಭಾರತ ಬೇರೆಯಾಗುವ ಪರಿಸ್ಥಿತಿ ಬರುತ್ತದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, ” ನಾನು ಹೇಳಿದ ಹೇಳಿಕೆಯನ್ನು ಭಾರತೀಯ ಜನತಾ ಪಕ್ಷ ತಿರುಚಿತ್ತು. ಮತ್ತೆ, ಮತ್ತೆ ಇದೇ ರೀತಿಯ ಕೆಲಸವನ್ನು ಮಾಡಲಾಗುತ್ತಿದೆ” ಎಂದರು.

ತಮಿಳುನಾಡು ಪ್ರತ್ಯೇಕ ದೇಶದ ದನಿ ಎತ್ತಿತ್ತು

“ಈ ಹಿಂದೆಯೇ ತಮಿಳುನಾಡಿನವರು ಪ್ರತ್ಯೇಕ ರಾಷ್ಟ್ರದ ದನಿ ಎತ್ತಿದ್ದರು. ನಾನು ರಾಜ್ಯಗಳ ಹಿತಾಸಕ್ತಿಗೆ ಧಕ್ಕೆ ತರಬಾರದು ಎಂದು ಮನವಿ ಮಾಡಿದ್ದೆ. ಕೇಂದ್ರ ಸರ್ಕಾರದ ಧೋರಣೆ ಸರಿಯಿಲ್ಲ. ಎಂದಿಗೂ ಕರ್ನಾಟಕವನ್ನು , ದಕ್ಷಿಣ ಭಾರತೀಯರನ್ನು ಕಡೆಗಣಿಸಬೇಡಿ. ನಾವು ಕೂಡ ಭಾರತ ಮಾತೆಯ ಮಕ್ಕಳು. ನಮ್ಮ ಮೇಲೆ ಮಲತಾಯಿ ಧೋರಣೆ ಸರಿಯಲ್ಲ” ಎಂದು ಹೇಳಿದರು.

ಕರ್ನಾಟಕಕ್ಕೆ ಎಲ್ಲಾ ವಿಚಾರಗಳಲ್ಲಿ ವಿಜಯ ದೊರಕಲಿ

“ಮುಂದಿನ ದಿನಗಳಲ್ಲಿ ಕರ್ನಾಟಕ ಎಲ್ಲಾ ವಿಚಾರಗಳಲ್ಲೂ ವಿಜಯ ಸಾಧಿಸಲಿ. ತಾಯಿ ಭಾರತಾಂಬೆಯ ಮಡಿಲಲ್ಲಿ ನಾವಿದ್ದೇವೆ. ನಮ್ಮ ಕನ್ನಡಾಂಬೆ ಎಂದೆಂದಿಗೂ ವಿಜಯಪತಾಕೆಯನ್ನು ಹಾರಿಸಲಿ. ತಾಯಿ ಚಾಮುಂಡೇಶ್ವರಿ ಕರ್ನಾಟಕದ ಜನರ ಆಶೋತ್ತರಗಳನ್ನು ಈಡೇರಿಸುವ ಮುಖಾಂತರ ಭವಿಷ್ಯದಲ್ಲಿ ನಮ್ಮದು ಅಭಿವೃದ್ಧಿ ಹೊಂದಿದ ರಾಜ್ಯವಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಸಮಸ್ತ ಜನರಿಗೆ ವಿಜಯದಶಮಿ ಹಬ್ಬದ ಶುಭಾಶಯಗಳನ್ನು ತಿಳಿಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಹಿನ್ನೆಲೆ ಏನು?

ಕೃಪಾ ಆಳ್ವ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...

ಉದ್ಯೋಗ ಸೃಷ್ಟಿ, ನೈಸರ್ಗಿಕ, ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಸಿಎಂ ಡಿ.ಕೆ. ಶಿವಕುಮಾರ್

"ಕರ್ನಾಟಕವು ನೈಸರ್ಗಿಕ ಹಾಗೂ ಪಾರಂಪರಿಕ ಸಂಪತ್ತಿನಿಂದ ಶ್ರೀಮಂತವಾಗಿದೆ. ಹಂಪಿ, ಬೇಲೂರು, ಮಲೆನಾಡು,...