ಕೇಂದ್ರದಿಂದ ತೆರಿಗೆ ಅನ್ಯಾಯ; ಸಿದ್ದರಾಮಯ್ಯ ನಿರೂಪಿಸಿದರೆ ನಾವು ಅವರ ಜೊತೆ ಧ್ವನಿ ಎತ್ತುತ್ತೇವೆ: ಕುಮಾರಸ್ವಾಮಿ ಸವಾಲು

Date:

ತೆರಿಗೆ, ಅನುದಾನ ತಾರತಮ್ಯದ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

- Advertisement -

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ರಾಷ್ಟ್ರದ ಹಿರಿಯ, ನುರಿತ ಆರ್ಥಿಕ ತಜ್ಞರನ್ನು, ಮಾಧ್ಯಮಗಳನ್ನು ಕೂಡಿಸಿಕೊಂಡು ಎಲ್ಲರ ಎದುರು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ಧ್ವನಿ ಎತ್ತುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ನಿಮ್ಮಲ್ಲಿರುವ ಮಾಹಿತಿಯನ್ನು ನಾಡಿನ ಮುಂದೆ ಇಡಿ. ಚರ್ಚೆ ಮಾಡಲು ನಾನು ತಯಾರಿದ್ದೇನೆ. ರೈತರ ಪರಿಹಾರದಲ್ಲಿ ಶೇ.75 ರಷ್ಟು ಕೇಂದ್ರದ್ದು? ವೀರಾವೇಷದಿಂದ ಸದನದ ಒಳಗೆ ಭಾಷಣ ಮಾಡುತ್ತಿದ್ದಾರೆ ಮುಖ್ಯಮಂತ್ರಿ. ಕನ್ನಡಿಗರಿಗೆ ಅನ್ಯಾಯ ಆಯಿತು ಎನ್ನುತ್ತಾರೆ. ಕೇಂದ್ರ ಸರ್ಕಾರದಿಂದ ಹಣ ಬರಲಿಲ್ಲ, ಬರಪೀಡಿತ ರೈತರಿಗೆ ಪರಿಹಾರ ಕೊಡಿ ಎಂದರೆ 2000 ರೂ. ಕೊಡುತ್ತಾರೆ. ಈ 2000 ರೂ.ನಲ್ಲಿ 25% ರಾಜ್ಯದ್ದು, ಉಳಿದ 75% ಕೇಂದ್ರದ್ದು” ಎಂದು ಕಿಡಿಕಾರಿದರು.

“2,624 ಕೋಟಿ ರೂ. ಎಸ್ ಡಿಆರ್ ಎಫ್ ನಲ್ಲಿ ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತಾರಲ್ಲಾ? ಈ ಹಣದಲ್ಲಿ 75% ಮೊತ್ತವನ್ನು ಕೇಂದ್ರ ಸರ್ಕಾರವೇ ನೀಡಿದೆ. ನಾವು ಕೊಟ್ಟೆವು ಎಂದು ಇವರು ಹೇಳಿದ್ದೇ ಹೇಳಿದ್ದು. ನಾನು ಹೇಳೋದೇ ಸತ್ಯ, ನಾನು ಹೇಳೋದೇ ಸತ್ಯ ಎಂದು ಹೇಳ್ತಾನೇ ಇದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯ ಮಾಡು ಎಂದು ನಮ್ಮ ಹಿರಿಯರು ಗಾದೆ ಮಾತು ಹೇಳಿದ್ದಾರೆ, ಅದನ್ನು ನಮ್ಮ ಮುಖ್ಯಮಂತ್ರಿಗಳು ಅಚ್ಚುಕಟ್ಟಾಗಿ ನಿರೂಪಣೆ ಮಾಡುತ್ತಿದ್ದಾರೆ” ಎಂದರು.

“ಕೇರಳದಲ್ಲಿ ಆನೆ ತುಳಿದು ಸತ್ತರೆ 15 ಲಕ್ಷ; ಇಲ್ಲಿ 5 ಲಕ್ಷ ಕನ್ನಡಿಗರಿಗೆ ಅನ್ಯಾಯ, ಕನ್ನಡಿಗರಿಗೆ ಅನ್ಯಾಯ ಎಂದು ಜಾಗಟೆ ಹೊಡೆಯುತ್ತಿರಲ್ಲ, ಅಲ್ಲಿ ಆನೆ ತುಳಿದು ಸತ್ತರೆ 15 ಲಕ್ಷ ರೂ. ಕೊಡುತ್ತೀರಿ. ಇಲ್ಲಿ ಆನೆ ತುಳಿದು ಸತ್ತರೆ 5 ಲಕ್ಷ ಕೊಡುತ್ತೀರಿ. ಅದನ್ನು ಪಡೆಯುವುದಕ್ಕೆ ಐವತ್ತು ಸಲ ಕಚೇರಿಗಳಿಗೆ ಅಳೆಯಬೇಕು. ನಿಮ್ಮ ನೀತಿ ಹೇಗಿದೆ ಎಂದರೆ; ರಾಜ್ಯಕ್ಕೆ ಅನ್ಯಾಯ! ಕೇರಳಕ್ಕೆ ನ್ಯಾಯ! ಎನ್ನುವಂತೆ ಆಗಿದೆ” ಎಂದು ವಾಗ್ದಾಳಿ ನಡೆಸಿದರು.

“ಸಿದ್ದರಾಮಯ್ಯ ಅವರು ತಮ್ಮ ರಾಷ್ಟ್ರೀಯ ನಾಯಕರ ಸಲಹೆ ಮೇರೆಗೆ 15 ಲಕ್ಷ ರೂ. ಕೊಟ್ಟಿದ್ದಾರೆ. ನಾನೆಲ್ಲೂ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂದು ಹೇಳಿಲ್ಲ. ನಮ್ಮ ರೈತರಿಗೆ ಬರ ಪರಿಹಾರ ಎಂದು ಎರಡು ಸಾವಿರ ರೂ. ಘೋಷಣೆ ಮಾಡುತ್ತಾರೆ. ಕೇರಳದವಗೆ 15 ಲಕ್ಷ ರೂ. ಕೊಡುತ್ತಾರೆ. ಕೇಳಿದರೆ ಕೇಂದ್ರದಿಂದ ಪರಿಹಾರವೇ ಬಂದಿಲ್ಲ ಅಂತ ಹೇಳುತ್ತಾರೆ. ಕನ್ನಡಿಗರಿಗೆ ಅನ್ಯಾಯ ಆಗಿದೆ ಎನ್ನುತ್ತಾರೆ. ಸಾವಿರ ಸಲ ಸುಳ್ಳು ಹೇಳಿ ಅದನ್ನೇ ನಿಜ ಮಾಡುವ ರೀತಿ ಇವರು ಬರೀ ಸುಳ್ಳುಗಳನ್ನ್ನೆ ಹೇಳುತ್ತಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು.

“ಹಣಕಾಸು ಆಯೋಗದ ಮುಂದೆ ಮಾಹಿತಿ ಕೊಡಿ ರಾಜ್ಯ ರಾಜ್ಯ ಸರ್ಕಾರಕ್ಕೆ ನನ್ನ ಸಲಹೆ ಇಷ್ಟೇ. ಈಗ 16ನೇ ಹಣಕಾಸು ಆಯೋಗ ರಚನೆ ಆಗಿದೆ. ಆಯೋಗ ರಾಜ್ಯಕ್ಕೆ ಬಂದಾಗ ಸರಿಯಾದ ಮಾಹಿತಿ ಕೊಟ್ಟು ಹಕ್ಕು ಮಂಡಿಸಿ.ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟರೆ ಅಥವಾ ದೂರಿದರೆ ಉಪಯೋಗ ಇಲ್ಲ. ತೆರಿಗೆ ಪಾಲು, ಅನುದಾನ ಹಂಚಿಕೆ ಮಾಡುವುದು ಆಯೋಗವೇ ಹೊರತು ಕೇಂದ್ರವಲ್ಲ. ಈಗಾಗಲೇ ಕೇಂದ್ರದಿಂದ ಬಂದಿರುವ ಹಣವನ್ನು ಸರ್ಕಾರ ಸದ್ಬಳಕೆ ಮಾಡಿಲ್ಲ. ಆ ಬಗ್ಗೆ ಇವರು ಚಕಾರ ಎತ್ತುತ್ತಿಲ್ಲ” ಎಂದು ಅವರು ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...