ಬಿಹಾರ ಚುನಾವಣೆ | ಸರ್ಕಾರ ರಚಿಸುವ ವಿಶ್ವಾಸ; ಪ್ರಮಾಣವಚನ ಸ್ವೀಕಾರ ದಿನಾಂಕ ಘೋಷಿಸಿದ ತೇಜಸ್ವಿ ಯಾದವ್

Date:

ಬಿಹಾರದಲ್ಲಿ ವಿರೋಧ ಪಕ್ಷಗಳ ಒಕ್ಕೂಟ ಮಹಾಘಟಬಂಧನ ಮುಂದಿನ ಸರ್ಕಾರವನ್ನು ರಚಿಸುವ ವಿಶ್ವಾಸವನ್ನು ವ್ಯಕ್ತಿಪಡಿಸಿರುವ ಆರ್‌ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕಾರ ದಿನಾಂಕವನ್ನೂ ಘೋಷಿಸಿದ್ದಾರೆ.

- Advertisement -

ಪಟನಾದಲ್ಲಿ ಮಾಧ್ಯಮ ಪ್ರತಿಕ್ರಿಯಿಸಿದ ಯಾದವ್, ಚುನಾವಣೆ ಫಲಿತಾಂಶ ಪ್ರಕಟವಾದ ನಾಲ್ಕು ದಿನಗಳ ನಂತರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ನವೆಂಬರ್ 14ರಂದು ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ಘೋಷಿಸಲಾಗುವುದು. ನವೆಂಬರ್ 18ರಂದು ಪ್ರಮಾಣವಚನ ಸ್ವೀಕಾರ ನಡೆಯಲಿದೆ” ಎಂದು ವರದಿಗಾರರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ಶಿಕ್ಷಣ, ನಿರುದ್ಯೋಗ – ಬಿಹಾರಿ ಯುವಜನರು ಬಯಸುತ್ತಿರುವುದೇನು?

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಅಭ್ಯರ್ಥಿಯಾಗಿ ಕಣದಲ್ಲಿರುವ ಮಾಜಿ ಮೊಕಾಮಾ ಶಾಸಕ ಅನಂತ್ ಸಿಂಗ್ ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸುತ್ತಾ ತೇಜಸ್ವಿ ಯಾದವ್ ಈ ಹೇಳಿಕೆಯನ್ನು ನೀಡಿದ್ದಾರೆ. “ಅಂತಹ ಗಂಭೀರ ಘಟನೆ ನಡೆದಾಗ ಈ ಬಂಧನವಾಗಲೇಬೇಕು” ಎಂದು ಹೇಳಿದರು. ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷವನ್ನು ಬೆಂಬಲಿಸುತ್ತಿದ್ದ ದುಲಾರ್ ಚಂದ್ ಯಾದವ್ ಅವರ ಹತ್ಯೆಗೆ ಸಂಬಂಧಿಸಿದಂತೆ ಜೆಡಿಯು ಮಾಜಿ ಶಾಸಕ ಅನಂತ್ ಸಿಂಗ್ ಬಂಧನ ನಡೆದಿದೆ.

“ಇಂದು ಪ್ರಧಾನಿ ಬಿಹಾರಕ್ಕೆ ಭೇಟಿ ನೀಡುತ್ತಿದ್ದಾರೆ. ಘೋರ ಅಪರಾಧಗಳು ನಡೆಯದೆ ಒಂದು ದಿನವೂ ಸಾಗದ ರಾಜ್ಯದ ಪರಿಸ್ಥಿತಿಯನ್ನು ಅವರು ಗಮನಿಸಬೇಕು. ಆದರೆ ಮಹಾಘಟಬಂಧನ್ ಸರ್ಕಾರ ರಚಿಸಿದ ಕೂಡಲೇ ಎಲ್ಲವೂ ಬದಲಾಗುತ್ತದೆ. ನವೆಂಬರ್ 26 ಮತ್ತು ಜನವರಿ 26ರ ನಡುವೆ ಒಂದು ತಿಂಗಳ ಅವಧಿಯಲ್ಲಿ ಜಾತಿ ಮತ್ತು ಧರ್ಮವನ್ನು ಲೆಕ್ಕಿಸದೆ ಎಲ್ಲಾ ಅಪರಾಧಿಗಳು ಜೈಲು ಸೇರುತ್ತಾರೆ. ಸಾಧ್ಯವಾದಷ್ಟು ಕಠಿಣ ಕ್ರಮ ಎದುರಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಯಾದವ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...