ಬಿಹಾರ ಚುನಾವಣೆ | ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ 30,000 ರೂ. ನೀಡುತ್ತೇವೆ: ತೇಜಸ್ವಿ ಯಾದವ್

Date:

ಬಿಹಾರ ಚುನಾವಣೆ ಬಳಿಕ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ 30,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖಂಡ ತೇಜಸ್ವಿ ಯಾದವ್ ಮಂಗಳವಾರ ಹೇಳಿದ್ದಾರೆ.

- Advertisement -

ಬಿಹಾರದಲ್ಲಿ ಗುರುವಾರ ಮೊದಲ ಹಂತದ ಚುನಾವಣೆ ನಡೆಯಲಿದೆ. ಇದಕ್ಕೂ ಎರಡು ದಿನ ಮುನ್ನ ಪಟನಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿಪಕ್ಷಗಳ ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, “ಗೆದ್ದು ಅಧಿಕಾರಕ್ಕೆ ಬಂದರೆ ಮುಂದಿನ ವರ್ಷ ಮಕರ ಸಂಕ್ರಾಂತಿಯಂದು(ಜನವರಿ 14) ‘ಮಾಯ್ ಬೆಹನ್ ಮಾನ್ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ ವಾರ್ಷಿಕವಾಗಿ 30 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ಶಿಕ್ಷಣ, ನಿರುದ್ಯೋಗ – ಬಿಹಾರಿ ಯುವಜನರು ಬಯಸುತ್ತಿರುವುದೇನು?

“ನಾವು ಈಗಾಗಲೇ ಮಹಿಳೆಯರ ಬಳಿ ‘ಮಾಯ್ ಬೆಹನ್ ಮಾನ್ ಯೋಜನೆ’ ಬಗ್ಗೆ ಮಾತನಾಡಿದ್ದೇವೆ. ಮಹಿಳೆಯರು ಈ ಯೋಜನೆ ಬಗ್ಗೆ ಉತ್ಸುಕರಾಗಿದ್ದಾರೆ” ಎಂದೂ ಈ ಸಂದರ್ಭದಲ್ಲೇ ಹೇಳಿದರು.

ಕಳೆದ ವಾರ ಮಹಾಘಟಬಂಧನ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಮಾಸಿಕ 2,500 ರೂಪಾಯಿಯಂತೆ ವಾರ್ಷಿಕವಾಗಿ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಇದು ಡಿಸೆಂಬರ್ ಒಂದರಿಂದಲೇ ಪ್ರಾರಂಭವಾಗಲಿದೆ. ಐದು ವರ್ಷಗಳ ಕಾಲ ಹಣಕಾಸು ನೆರವು ನೀಡಲಾಗುತ್ತದೆ ಎಂದು ಭರವಸೆ ನೀಡಲಾಗಿದೆ.

ಇನ್ನೊಂದೆಡೆ ಎನ್‌ಡಿಎ ಮಹಿಳೆಯರಿಗೆ ವ್ಯಾಪಾರ ಆರಂಭಿಸಲು 10 ಸಾವಿರ ರೂಪಾಯಿ ನೀಡುವ ‘ಮುಖ್ಯಮಂತ್ರಿ ಮಹಿಳಾ ಯೋಜ್‌ಗಾರ್ ಯೋಜನೆ’ ಅನ್ನು ಈಗಾಗಲೇ ಆರಂಭಿಸಿದೆ. ಇತ್ತೀಚೆಗೆ ಒಂದು ಕೋಟಿ ಮಹಿಳೆಯರಿಗೆ 10 ಸಾವಿರ ರೂಪಾಯಿ ವರ್ಗಾಯಿಸಿದೆ. ಚುನಾವಣೆ ನಡುವೆ ಹೊಸ ಯೋಜನೆಯ ಹಣ ಬಿಡುಗಡೆ ಮಾಡಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ವಿಪಕ್ಷಗಳು ಈಗಾಗಲೇ ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಆದರೆ ಚುನಾವಣಾ ಆಯೋಗ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ.

ಈ ಬೆಳವಣಿಗೆ ನಡುವೆ ಯಾದವ್ ತಮ್ಮ ಪ್ರಣಾಳಿಕೆಯ ಭರವಸೆಯನ್ನು ಪುನರುಚ್ಚರಿಸಿದ್ದಾರೆ. ಹಾಗೆಯೇ ರೈತರಿಗೆ ಪ್ರತಿ ಕ್ವಿಂಟಲ್ ಭತ್ತಕ್ಕೆ 300 ರೂಪಾಯಿ, ಗೋಧಿಗೆ 400 ರೂಪಾಯಿಯನ್ನು ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಅಡಿ ಬೋನಸ್ ರೂಪದಲ್ಲಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬಿಹಾರದಲ್ಲಿ ನವೆಂಬರ್ 6ರಂದು ಮೊದಲ ಹಂತದ ಚುನಾವಣೆ ಮತ್ತು ನವೆಂಬರ್ 11ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...