ತೆಲಂಗಾಣ ಮತ ಎಣಿಕೆ | ಅಂಚೆ ಮತದಾನ: ಬಿಆರ್‌ಎಸ್ ಹಿಂದಿಕ್ಕಿದ ಕಾಂಗ್ರೆಸ್‌

Date:

2024ರ ಲೋಕಸಭೆ ಚುನಾವಣೆ ಕದನಕ್ಕೆ ‘ಸೆಮಿ ಫೈನಲ್’ ಎಂದೇ ಹೇಳಲಾದ ಪಂಚ ರಾಜ್ಯ ಚುನಾವಣೆಯಲ್ಲಿ ಜನರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂಬುದು ಭಾನುವಾರ ಗೊತ್ತಾಗಲಿದೆ. ನವೆಂಬರ್ 7ರಿಂದ 30ರ ನಡುವೆ ತೆಲಂಗಾಣ, ಛತ್ತೀಸ್‌ಘಡ, ಮಿಜೋರಾಂ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಮತದಾನ ನಡೆದಿತ್ತು. ಈ ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ ಹೊರಬೀಳಲಿದೆ. ಮಿಜೋರಾಂನಲ್ಲಿ ಮಾತ್ರ ಮತ ಎಣಿಕೆ ಸೋಮವಾರ ನಡೆಯಲಿದೆ. ಯಾವ ಪಕ್ಷ ಯಾವ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಕುತೂಹಲಕ್ಕೆ ಇಂದು ತೆರೆಬೀಳಲಿದೆ.

ತೆಲಂಗಾಣ ವಿಧಾನಸಭೆಯ 119 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸರ್ಕಾರ ರಚನೆಗೆ ಬೇಕಿರುವ ಬಹುಮತದ ಸಂಖ್ಯೆ 60 ಇದೆ. ಈಗಾಗಲೇ 4 ರಾಜ್ಯಗಳ ವಿಧಾನಸಭಾ ಚುನಾವಣೆಯ ಅಂಚೆ ಮತ ಎಣಿಕೆ ಆರಂಭವಾಗಿದೆ.

ಹಾಲಿ ಅಧಿಕಾರದಲ್ಲಿರುವ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ(ಬಿಆರ್‌ಎಸ್) ತೆಲಂಗಾಣದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ರಚಿಸುವ ವಿಶ್ವಾಸದಲ್ಲಿದೆ. ಆದರೆ, ಈ ಬಾರಿ ಆಡಳಿತಾರೂಢ ಬಿಆರ್‌ಎಸ್ ಅಧಿಕಾರ ಕಳೆದುಕೊಳ್ಳಲಿದ್ದು, ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2018ರಲ್ಲಿ ಸಿಂಹಪಾಲು ಮತಗಳನ್ನು ಗಳಿಸಿದ್ದ ಟಿಆರ್‌ಎಸ್ (ಈಗ ಬಿಆರ್‌ಎಸ್‌) ರಾಜ್ಯದ 119 ಸ್ಥಾನಗಳಲ್ಲಿ 88 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಈ ಬಾರಿಯ ಚುನಾವಣೆಯಲ್ಲಿ ತೆಲಂಗಾಣದ ಅಂಚೆ ಮತದಾನದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ಬಿಆರ್‌ಎಸ್‌ ಪಕ್ಷವನ್ನು ಹಿಂದಿಕ್ಕಿದೆ. ತೆಲಂಗಾಣದಲ್ಲಿ ಕಾಮಾರೆಡ್ಡಿ ಕ್ಷೇತ್ರದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್​ಗೆ ಹಿನ್ನಡೆಯಾಗಿದೆ. ಕಾಮಾರೆಡ್ಡಿ ಕ್ಷೇತ್ರದಲ್ಲಿ ಕಾಂಗ್ರೆಸ್​ನ ರೇವಂತ್​ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತ ಎಣಿಕೆ ಆರಂಭ : ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ

ತೆಲಂಗಾಣದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲು ಹವಣಿಸುತ್ತಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಪ್ರಸ್ತುತ ಗಜ್ವೇಲ್‌ನಲ್ಲಿ ಮುನ್ನಡೆ ಸಾಧಿಸಿದ್ದಾರೆ. 2014ರಲ್ಲಿ ರಾಜ್ಯ ರಚನೆಯಾದಾಗಿನಿಂದ ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷ ಅಧಿಕಾರದಲ್ಲಿದೆ. ಎಲ್ಲ ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ.

ಈ ಬಾರಿ ತೆಲಂಗಾಣದಲ್ಲಿ 1.80 ಲಕ್ಷ ಚುನಾವಣಾ ಸಿಬ್ಬಂದಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ 27, ಬಿಆರ್​ಎಸ್ 17​ ಮುನ್ನಡೆ ಸಾಧಿಸಿದೆ. ಎಐಎಮ್‌ಐಎಮ್‌ (AIMIM) 5, ಬಿಜೆಪಿ 1, ಇತರೆ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...