ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಹೈದರಾಬಾದ್ನಲ್ಲಿ ಅವರನ್ನು ಬಂಧಿಸಲಾಗಿದ್ದು, ದೆಹಲಿಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.
ಕವಿತಾ ಅವರು ತೆಲಂಗಾಣದಲ್ಲಿ ವಿಧಾನ ಪರಿಷತ್ತಿನ ಸದಸ್ಯೆ (ಎಂಎಲ್ಸಿ)ಯಾಗಿದ್ದಾರೆ. ತೆಲಂಗಾಣದ ಹೈದರಾಬಾದ್ನಲ್ಲಿ ಕವಿತಾ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳಿಕ, ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
#WATCH | BRS MLC K Kavitha comes out of her residence in Hyderabad, Telangana.
She has been arrested by the Enforcement Directorate (ED) and is being brought to Delhi where she will be further questioned in connection with the Delhi excise policy-linked money laundering case. pic.twitter.com/fQexLiLzUx
— ANI (@ANI) March 15, 2024
ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ, ಅದರಲ್ಲೂ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ 100 ದಿನಗಳನ್ನು ಪೂರೈಸಿದ ದಿನವೇ ಅವರನ್ನು ಬಂಧಿಸಲಾಗಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಹೈದರಾಬಾದ್ನ ಮಲ್ಕಾಜ್ಗಿರಿಯಲ್ಲಿ ರೋಡ್ಶೋ ಕೂಡ ನಡೆಸಿದ್ದಾರೆ.
ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಈ ಹಿಂದೆ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಅಲ್ಲದೆ, ಕಳೆದ ವರ್ಷ ಅಕ್ಟೋಬರ್ನಲ್ಲಿ ಮತ್ತು ಇತ್ತೀಚೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎರಡು ಸಮನ್ಸ್ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ತಿಳಿದುಬಂದಿದೆ.
#WATCH | Visuals from inside the residence of BRS MLC K Kavitha; a heated exchange of words going on between ED and BRS leader KTR Rao.
K Kavitha is being brought to Delhi by ED; she will be further questioned.
(Video Source: BRS worker) pic.twitter.com/3EUTKDA9Ow
— ANI (@ANI) March 15, 2024
ಇಡಿ ಪ್ರಕಾರ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ‘ಸೌತ್ ಗ್ರೂಪ್’ ಸಂಸ್ಥೆಯ ಪ್ರಮುಖ ಪಾತ್ರವಿದೆ. ಕೆ. ಕವಿತಾ, ಹೈದರಾಬಾದ್ ಉದ್ಯಮಿ ಶರತ್ ರೆಡ್ಡಿ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸಲು ರೆಡ್ಡಿ ಮತ್ತು ಅವರ ಮಗ ರಾಘವ್ ಮಾಗುಂಟ ರೆಡ್ಡಿ ಅವರು ಈ ಸಂಸ್ಥೆಯ ಭಾಗವಾಗಿದ್ದಾರೆ.
ಈ ನಡುವೆ ಕವಿತಾ ಸಹೋದರ, ಕೆಟಿಆರ್ ಅವರು ಇಡಿ ಅಧಿಕಾರಿಗಳೊಂದಿಗೆ ಕವಿತಾ ಮನೆಯೊಳಗೆ ವಾಗ್ವಾದ ನಡೆಸಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.