ತೆಲಂಗಾಣ | ಮಾಜಿ ಸಿಎಂ ಕೆಸಿಆರ್ ಪುತ್ರಿ, ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಹೈದರಾಬಾದ್‌ನಲ್ಲಿ ಅವರನ್ನು ಬಂಧಿಸಲಾಗಿದ್ದು, ದೆಹಲಿಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.

- Advertisement -

ಕವಿತಾ ಅವರು ತೆಲಂಗಾಣದಲ್ಲಿ ವಿಧಾನ ಪರಿಷತ್ತಿನ ಸದಸ್ಯೆ (ಎಂಎಲ್‌ಸಿ)ಯಾಗಿದ್ದಾರೆ. ತೆಲಂಗಾಣದ ಹೈದರಾಬಾದ್‌ನಲ್ಲಿ ಕವಿತಾ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳಿಕ, ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ, ಅದರಲ್ಲೂ ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರ 100 ದಿನಗಳನ್ನು ಪೂರೈಸಿದ ದಿನವೇ ಅವರನ್ನು ಬಂಧಿಸಲಾಗಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಹೈದರಾಬಾದ್‌ನ ಮಲ್ಕಾಜ್‌ಗಿರಿಯಲ್ಲಿ ರೋಡ್‌ಶೋ ಕೂಡ ನಡೆಸಿದ್ದಾರೆ.

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಈ ಹಿಂದೆ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಅಲ್ಲದೆ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮತ್ತು ಇತ್ತೀಚೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎರಡು ಸಮನ್ಸ್‌ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ತಿಳಿದುಬಂದಿದೆ.

ಇಡಿ ಪ್ರಕಾರ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ‘ಸೌತ್ ಗ್ರೂಪ್’ ಸಂಸ್ಥೆಯ ಪ್ರಮುಖ ಪಾತ್ರವಿದೆ. ಕೆ. ಕವಿತಾ, ಹೈದರಾಬಾದ್ ಉದ್ಯಮಿ ಶರತ್ ರೆಡ್ಡಿ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸಲು ರೆಡ್ಡಿ ಮತ್ತು ಅವರ ಮಗ ರಾಘವ್ ಮಾಗುಂಟ ರೆಡ್ಡಿ ಅವರು ಈ ಸಂಸ್ಥೆಯ ಭಾಗವಾಗಿದ್ದಾರೆ.

ಈ ನಡುವೆ ಕವಿತಾ ಸಹೋದರ, ಕೆಟಿಆರ್‌ ಅವರು ಇಡಿ ಅಧಿಕಾರಿಗಳೊಂದಿಗೆ ಕವಿತಾ ಮನೆಯೊಳಗೆ ವಾಗ್ವಾದ ನಡೆಸಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...