ತೆಲಂಗಾಣ | ಲೋಕಸಭೆ ಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಟಿಡಿಪಿ

Date:

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಸ್ಪರ್ಧಿಸದಿರಲು ತೆಲುಗು ದೇಶಂ ಪಕ್ಷ (ಟಿಡಿಪಿ) ನಿರ್ಧರಿಸಿದೆ. ಆಂಧ್ರಪ್ರದೇಶದಲ್ಲಿ ಎನ್‌ಡಿಎ ಭಾಗವಾಗಿರುವ ಟಿಡಿಪಿ, ತೆಲಂಗಾಣದಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ನಾಯಕರು ಇನ್ನೂ ಮಾಹಿತಿ ನೀಡಿಲ್ಲ ಎಂದೂ ವರದಿಯಾಗಿದೆ.

- Advertisement -

ಆದಾಗ್ಯೂ, ತೆಲಂಗಾಣದಲ್ಲಿ ಈ ವರ್ಷ ಜೂನ್ ಅಥವಾ ಜುಲೈನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷವು ಸ್ಪರ್ಧಿಸುತ್ತದೆ ಎಂದು ಟಿಡಿಪಿ ವಕ್ತಾರ ಜ್ಯೋತ್ಸ್ನಾ ತಿರುನಗರಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನಾವು ಎನ್‌ಡಿಎ ಭಾಗವಾಗಿದ್ದರೂ ತೆಲಂಗಾಣದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ತೆಲಂಗಾಣದಲ್ಲಿ ಯಾರನ್ನು ಬೆಂಬಲಿಸಬೇಕು ಎಂಬುದನ್ನು ಪಕ್ಷದ ಹಿರಿಯ ನಾಯಕತ್ವ ನಿರ್ಧರಿಸುತ್ತದೆ. ಸದ್ಯಕ್ಕೆ ಇನ್ನೂ ಯಾವುದೇ ಸೂಚನೆ ಬಂದಿಲ್ಲ” ಎಂದು ಅವರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಲಸಿಕೆ ಪ್ರಕರಣದಲ್ಲಿ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದರು. ಅವರ ಬಂಧನದ ಬಳಿಕ ಪಕ್ಷದ ಪರಿಸ್ಥಿತಿ ಹೀನಾಯ ಸ್ಥಿತಿಯಲ್ಲಿದೆ. ತೆಲಂಗಾಣದಲ್ಲಿ ಟಿಡಿಪಿ ಪ್ರಾಬಲ್ಯವೇ ಇಲ್ಲದಂತಾಗಿದೆ.

ಚಂದ್ರಬಾಬು ನಾಯ್ಡು ಬಂಧನದ ನಂತರ, ಕಳೆದ ವರ್ಷ ನವೆಂಬರ್ 30ರಂದು ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿಯೂ ಪಕ್ಷವು ಸ್ಪರ್ಧಿಸಿರಲಿಲ್ಲ. ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಕ್ಸನೈ ಜ್ಞಾನೇಶ್ವರ್ ಅವರು ಟಿಡಿಪಿ ತೊರೆದು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸೇರಿದ್ದರು.

ಅಂದಿನಿಂದ, ತೆಲಂಗಾಣದಲ್ಲಿ ಪಕ್ಷವು ನೆಲೆ ಕಳೆದುಕೊಂಡಿದೆ. ಹಲವಾರು ನಾಯಕರು ಮತ್ತು ಕಾರ್ಯಕರ್ತರು ಪಕ್ಷವನ್ನು ತೊರೆಯುತ್ತಿದ್ದಾರೆ. 2018ರಲ್ಲಿ ನಡೆದಿದ್ದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 2 ಸ್ಥಾನಗಳ ಜೊತೆಗೆ, 3.51% ಮತಗಳನ್ನು ಪಡೆದಿತ್ತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಸಿಪಿಐ ಜೊತೆ ಚುನಾವಣಾ ಪೂರ್ವ ಮೈತ್ರಿಯನ್ನೂ ಟಿಡಿಪಿ ಮಾಡಿಕೊಂಡಿತ್ತು.

“ಪಕ್ಷದ ತೆಲಂಗಾಣ ಘಟಕಕ್ಕೆ ಅಧ್ಯಕ್ಷರ ನೇಮಕವನ್ನು ಮಹಾನಾಡು (ಟಿಡಿಪಿಯ ವಾರ್ಷಿಕ ಸಮಾವೇಶ)ದಲ್ಲಿ ನಿರ್ಧರಿಸಲಾಗುತ್ತದೆ” ಎಂದು ಟಿಡಿಪಿ ನಾಯಕರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...