ತೆಲಂಗಾಣ | ಚಾರ್ಮಿನಾರ್ ಕ್ಷೇತ್ರದ ಓವೈಸಿ ಪಕ್ಷದ ಅಭ್ಯರ್ಥಿ ಜುಲ್ಫಿಕರ್ ಅಲಿ ಗೆಲುವು

Date:

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಸದ್ಯ ಕಾಂಗ್ರೆಸ್‌ ಮೂರು ಕ್ಷೇತ್ರದಲ್ಲಿ ಗೆಲವು ಸಾಧಿಸಿದ್ದು, ಇದೀಗ ಚಾರ್ಮಿನಾರ್ ಕ್ಷೇತ್ರದಲ್ಲಿ ಓವೈಸಿ ಅವರ ಎಐಎಂಐಎಂ ಅಭ್ಯರ್ಥಿ ಜುಲ್ಫಿಕರ್ ಅಲಿ ಗೆಲುವು ಸಾಧಿಸಿದ್ದಾರೆ.

- Advertisement -

ಸದ್ಯ ತೆಲಂಗಾಣದಲ್ಲಿ ಕಾಂಗ್ರೆಸ್ 71 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, 3 ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಆರ್‌ಎಸ್ 36 ಸ್ಥಾನಗಳಲ್ಲಿ ಮುನ್ನುಗ್ಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಕಾಂಗ್ರೆಸ್‌ ಗೆಲುವು

119 ಕ್ಷೇತ್ರಗಳ ಪೈಕಿ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್‌, ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಅಶ್ವರಾವ್ ಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆದಿನಾರಾಯಣ ಗೆಲುವು ಸಾಧಿಸಿದ್ದಾರೆ. ಖಮ್ಮಂ ಜಿಲ್ಲೆಯ ಅಶ್ವರಾವ್ ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಜೇರಿ ಆದಿನಾರಾಯಣ 28,000 ಬಹುಮತದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ. ಅವರು ಪ್ರತಿಸ್ಪರ್ಧಿ ಬಿಆರ್‌ಎಸ್ ಅಭ್ಯರ್ಥಿ ಮೆಚ್ಚಾ ನಾಗೇಶ್ವರ ರಾವ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯ; ಅಶ್ವರಾವ್ ಪೇಟೆಯಲ್ಲಿ ಆದಿನಾರಾಯಣ ಗೆಲುವು

ಮೇಚಾ ನಾಗೇಶ್ವರ ರಾವ್ 2018ರ ಚುನಾವಣೆಯಲ್ಲಿ ಟಿಡಿಪಿಯಿಂದ ಗೆದ್ದಿದ್ದರು. ನಂತರ ಅವರು ಬಿಆರ್‌ಎಸ್ ಸೇರಿದರು. ಹಾಲಿ ಶಾಸಕರಾಗಿರುವ ಅವರಿಗೆ ಬಿಆರ್‌ಎಸ್‌ ಟಿಕೆಟ್‌ ನೀಡಿತ್ತು. ಕಾಂಗ್ರೆಸ್‌ ಪಕ್ಷ ಜಾರೆ ಆದಿನಾರಾಯಣ ಅವರಿಗೆ ಟಿಕೆಟ್‌ ನೀಡಿತ್ತು. ಈ ಸ್ಥಾನದಲ್ಲಿ ಸಿಪಿಐ ಅಭ್ಯರ್ಥಿಗೆ ಮೂರನೇ ಸ್ಥಾನ ಸಿಕ್ಕಿದೆ.

ಇಲ್ಲಾಂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೊಂದು ಸ್ಥಾನ ಗೆದ್ದಿದೆ. ಇಲ್ಲಾಂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೋರಂ ಕನಕಯ್ಯ ಅವರು ಬಿಆರ್‌ಎಸ್ ಅಭ್ಯರ್ಥಿ ಹರಿಪ್ರಿಯಾ ವಿರುದ್ಧ 38 ಸಾವಿರ ಭಾರೀ ಬಹುಮತದಿಂದ ಗೆಲುವು ಸಾಧಿಸಿದ್ದಾರೆ.

ರಾಮಗುಂಡಂನಲ್ಲಿ ಕಾಂಗ್ರೆಸ್ ಗೆಲುವು

ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಸತತ ಮೂರು ಸ್ಥಾನಗಳನ್ನು ಗೆದ್ದಿದೆ. ರಾಮಗುಂಡಂ ಹಾಗೂ ಅಶ್ವರಾವ್‌ಪೇಟೆ, ಇಲ್ಲಾಂಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ರಾಮಗುಂಡಂ ಕಾಂಗ್ರೆಸ್ ಅಭ್ಯರ್ಥಿ ರಾಜ್ ಠಾಕೂರ್ ಬಿಆರ್ ಎಸ್ ಅಭ್ಯರ್ಥಿ ಚಂದರ್ ವಿರುದ್ಧ ಜಯಗಳಿಸಿದ್ದಾರೆ.

ಭದ್ರಾಚಲಂನಲ್ಲಿ ಬಿಆರ್‌ಎಸ್ ಗೆಲುವು

ಭದ್ರಾಚಲಂ ಕ್ಷೇತ್ರದಲ್ಲಿ ಬಿಆರ್‌ಎಸ್ ಪಕ್ಷದ ಶಾಸಕ ಡಾ.ತೆಲ್ಲಂ ವೆಂಕಟರಾವ್ ಅವರು 4466 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಕಾಮರೆಡ್ಡಿಯಲ್ಲಿ ರೇವಂತ್ ರೆಡ್ಡಿ ಮುನ್ನಡೆ

ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿದೆ. ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಮುನ್ನಡೆಯಲ್ಲಿದ್ದಾರೆ. 8 ಸುತ್ತುಗಳ ಅಂತ್ಯಕ್ಕೆ ರೇವಂತ್ ರೆಡ್ಡಿ 26,437 ಮತಗಳನ್ನು ಪಡೆದರೆ, ಸಿಎಂ ಕೆಸಿಆರ್ 24,091 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿಗೆ 23,802 ಮತಗಳು. ಇದರೊಂದಿಗೆ ರೇವಂತ್ ರೆಡ್ಡಿ 2346 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಪೋಚಾರಂ 8,632 ಮತಗಳ ಮುನ್ನಡೆ

ಕಾಮರೆಡ್ಡಿ ಜಿಲ್ಲೆಯ ಬಾನ್ಸವಾಡ ಕ್ಷೇತ್ರದಲ್ಲಿ ಬಿಆರ್‌ಎಸ್ ಮುನ್ನಡೆ ಸಾಧಿಸಿದೆ. ಬಿಆರ್‌ಎಸ್ ಅಭ್ಯರ್ಥಿ ಪೋಚಾರಂ ಶ್ರೀನಿವಾಸ್ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ಏಣುಗು ರವೀಂದರ್ ರೆಡ್ಡಿ ಅವರಿಗಿಂತ 8,632 ಮತಗಳ ಬಹುಮತದಿಂದ ಮುನ್ನಡೆ ಸಾಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...