ತೆಲಂಗಾಣ | ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಜಾರಿಗೊಳಿಸಿದ ಕಾಂಗ್ರೆಸ್ ಸರ್ಕಾರ

Date:

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀಡಿದ್ದ ಪ್ರಮುಖ ಆರು ಗ್ಯಾರಂಟಿಗಳ ಪೈಕಿ ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಯೋಜನೆ’ ‘ಮಹಾಲಕ್ಷ್ಮಿ’ ಯೋಜನೆಗೆ ಇಂದು(ಡಿ.9) ಶನಿವಾರದಂದು ಚಾಲನೆ ನೀಡಲಾಗಿದೆ.

ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಸರ್ಕಾರಿ ಸ್ವಾಮ್ಯದ ಟಿಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ರಾಜೀವ್ ಆರೋಗ್ಯಶ್ರೀ ಯೋಜನೆಯಡಿ ಪ್ರಸ್ತುತ 5 ಲಕ್ಷದಿಂದ 10 ಲಕ್ಷಕ್ಕೆ ವ್ಯಾಪ್ತಿಯನ್ನು ಹೆಚ್ಚಿಸುವ ಯೋಜನೆಯ ಎರಡು ಗ್ಯಾರಂಟಿಗಳಿಗೆ ಚಾಲನೆ ನೀಡಿದರು.

ಮಹಿಳಾ ಸಚಿವರಾದ ಸೀತಕ್ಕ ಮತ್ತು ಕೊಂಡ ಸುರೇಖಾ ಅವರು ತೆಲಂಗಾಣ ವಿಧಾನಸಭೆ ಆವರಣದಲ್ಲಿ ಇಡೀ ಸಚಿವ ಸಂಪುಟ ಮತ್ತು ಕಾಂಗ್ರೆಸ್ ಶಾಸಕರ ಸಮ್ಮುಖದಲ್ಲಿ ಬಸ್‌ಗೆ ಚಾಲನೆ ನೀಡಿದರು. ಮುಖ್ಯ ಕಾರ್ಯದರ್ಶಿ ಸಂತಿ ಕುಮಾರಿ ಮತ್ತು ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್ ಉಪಸ್ಥಿತರಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖ್ಯಮಂತ್ರಿ ರೇವಂತ್ ರೆಡ್ಡಿ, ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ, ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಮತ್ತು ಸಚಿವರು ಟಿಎಸ್‌ಆರ್‌ಟಿಸಿಯ ಶೂನ್ಯ ಟಿಕೆಟ್ ಮತ್ತು ರಾಜೀವ್ ಆರೋಗ್ಯಶ್ರೀ ಯೋಜನೆಯ ಹೊಸ ಲೋಗೋ ಮತ್ತು ಪೋಸ್ಟರ್‌ಗಳನ್ನು ಅನಾವರಣಗೊಳಿಸಿದರು.

ಈ ವೇಳೆ ಮಾತನಾಡಿದ ರೇವಂತ್ ರೆಡ್ಡಿ, ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರ ಜನ್ಮದಿನದಂದು ಕಾಂಗ್ರೆಸ್ ಸರ್ಕಾರ ತನ್ನ ಆರು ಭರವಸೆಗಳಲ್ಲಿ ಎರಡನ್ನು ಜಾರಿಗೊಳಿಸುತ್ತಿದೆ. ತೆಲಂಗಾಣಕ್ಕೆ ಡಿಸೆಂಬರ್ 9 ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ 2009ರಲ್ಲಿ ಇದೇ ದಿನ ಆಗಿನ ಯುಪಿಎ ಸರ್ಕಾರ ತೆಲಂಗಾಣ ರಾಜ್ಯ ರಚನೆಯ ಪ್ರಕ್ರಿಯೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿತ್ತು” ಎಂದು ಹೇಳುತ್ತಾ ‘ಸೋನಿಯಾ ಗಾಂಧಿ ಅವರನ್ನು ತೆಲಂಗಾಣದ ಮಾತೆ’ ಎಂದು ಬಣ್ಣಿಸಿದರು.

ತೆಲಂಗಾಣವನ್ನು ಕಲ್ಯಾಣ ರಾಜ್ಯವನ್ನಾಗಿ ಮಾಡಲು ಎಲ್ಲ ಆರು ಭರವಸೆಗಳನ್ನು 100 ದಿನಗಳಲ್ಲಿ ಈಡೇರಿಸಲಾಗುವುದು ಎಂದು ಅವರು ಪುನರುಚ್ಚರಿಸಿದರು.

“ತೆಲಂಗಾಣದಲ್ಲಿ ನೆಲೆಸಿರುವ ಎಲ್ಲ ವಯೋಮಾನದ ಹುಡುಗಿಯರು, ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ರಾಜ್ಯದ ಗಡಿಯೊಳಗೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TSRTC) ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ವಿಳಾಸವಿರುವ ಯಾವುದೇ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು” ಎಂದು ತಿಳಿಸಿದರು.

ಇದೇ ವೇಳೆ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಆರೋಗ್ಯ ವಿಮಾ ಯೋಜನೆಯಾದ ರಾಜೀವ್ ಆರೋಗ್ಯಶ್ರೀ ಅಡಿಯಲ್ಲಿ ಆರ್ಥಿಕ ಮಿತಿಯನ್ನು ಪ್ರತಿ ಕುಟುಂಬಕ್ಕೆ ವಾರ್ಷಿಕ 10 ಲಕ್ಷಕ್ಕೆ ದ್ವಿಗುಣಗೊಳಿಸಲಾಗಿದೆ. ಒಟ್ಟು 90.10 ಲಕ್ಷ ಕೆಳಗಿರುವ ಬಿಪಿಎಲ್ ಕುಟುಂಬಗಳು ಈ ಯೋಜನೆಯಡಿ ಫಲಾನುಭವಿಗಳಾಗಲಿದ್ದಾರೆ. ಈ ಯೋಜನೆಯಡಿಯಲ್ಲಿ 21 ವಿಶೇಷತೆಗಳ ಅಡಿಯಲ್ಲಿ ವಿವಿಧ ಕಾಯಿಲೆಗಳಿಗೆ 1,672 ‘ಹೆಲ್ತ್‌ ಪ್ಯಾಕೇಜ್‌’ಗಳು ಲಭ್ಯವಿದೆ.

ತೆಲಂಗಾಣದಲ್ಲಿ ಅಧಿಕಾರದಲ್ಲಿದ್ದ ಕೆ ಚಂದ್ರಶೇಖರ್ ರಾವ್ ಅವರ ಬಿಆರ್‍‌ಎಸ್ ಪಕ್ಷಕ್ಕೆ ಠಕ್ಕರ್ ನೀಡಲು, ಕಾಂಗ್ರೆಸ್ ‘ಆರು ಗ್ಯಾರಂಟಿ’ ಅಸ್ತ್ರ ಪ್ರಯೋಗಿಸಿತ್ತು. ಮೊದಲ ಗ್ಯಾರಂಟಿ ‘ಮಹಾಲಕ್ಷ್ಮೀ’ ಯೋಜನೆಯನ್ನು ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ ಘೋಷಣೆ ಮಾಡಿದ್ದರು.

‘ಮಹಾಲಕ್ಷ್ಮೀ’ ಯೋಜನೆಯಡಿ ತೆಲಂಗಾಣದಲ್ಲಿ ಮಹಿಳೆಯರಿಗೆ ಮಾಸಿಕ 2,500 ಹಣ, ಪ್ರತಿ ಸಿಲಿಂಡರ್‌ಗೆ 500 ರೂಪಾಯಿ ಸಬ್ಸಿಡಿ ಮತ್ತು ತೆಲಂಗಾಣದಲ್ಲಿ ಟಿಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯದೊಳಗಡೆ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಿಸಲಾಗಿತ್ತು. ಕರ್ನಾಟಕದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಯೋಜನೆಗೆ ‘ಶಕ್ತಿ’ ಎಂದು ನಾಮಕರಣ ಮಾಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರ | ಚುನಾವಣಾ ಪ್ರಚಾರ ಸಭೆಯಲ್ಲೇ ಪ್ರಜ್ಞಾಹೀನರಾಗಿ ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ...

ವಿವಿಪ್ಯಾಟ್ ಪ್ರಕರಣ: ನಾವು ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಮತದಾನ ಯಂತ್ರದ ಮೂಲಕ ಮತ ಚಲಾಯಿಸಿದ ನಂತರ ವಿವಿಪ್ಯಾಟ್ ಮೂಲಕ ಮತದಾರರಿಗೆ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...