ತೆಲಂಗಾಣ ಮತ ಎಣಿಕೆ | 119 ಸ್ಥಾನಗಳ ಪೈಕಿ 64ರಲ್ಲಿ ಕಾಂಗ್ರೆಸ್ ಮುನ್ನಡೆ

Date:

2014ರಲ್ಲಿ ರಚನೆಯಾದ ತೆಲಂಗಾಣ ರಾಜ್ಯದ ಮೂರನೇ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ರಾಜ್ಯದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌), ಕಾಂಗ್ರೆಸ್‌, ಬಿಜೆಪಿ ಹಾಗೂ ಎಐಎಂಎಐ ಚುನಾವಣಾ ಕಣದಲ್ಲಿವೆ. ಕಾಂಗ್ರೆಸ್‌ ಮತ್ತು ಬಿಆರ್‌ಎಸ್‌ ನಡುವೆ ನೇರ ಸ್ಪರ್ಧೆ ಇದ್ದು, ಕಾಂಗ್ರೆಸ್ 119 ಸ್ಥಾನಗಳ ಪೈಕಿ 64ರಲ್ಲಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಬಿಆರ್‌ಎಸ್‌ 42 ಸ್ಥಾನ ಗೆಲ್ಲುವಲ್ಲಿ ಹಿಂದುಳಿದಿದ್ದರೇ, ಬಿಜೆಪಿ 7 ಸ್ಥಾನಗಳಿಗೆ ಕುಸಿದಿದೆ.

- Advertisement -

ಬಿಆರ್‌ಎಸ್ ನಾಯಕ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ತಮ್ಮ ಪಕ್ಷವು ರಾಜ್ಯದಲ್ಲಿ ಮತ್ತೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಚುನಾವಣೆ ನಡೆದಿತ್ತು. ಕೋಟ್ಯಂತರ ಜನರು ಮತದಾನದ ಹಕ್ಕನ್ನು ಚಲಾಯಿಸಿದರು. ಭಾನುವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ.

119 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ಪೂರ್ಣಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 1 ಲಕ್ಷ 80 ಸಾವಿರ ಅಂಚೆ ಮತಗಳು ಚಲಾವಣೆಯಾಗಿವೆ. ತೆಲಂಗಾಣದಲ್ಲಿ ಒಟ್ಟು ಮತಗಳ ಸಂಖ್ಯೆ 3,26,02,793 ಆಗಿದ್ದರೆ, 2,32,59,256 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ತೆಲಂಗಾಣದ 79 ಕ್ಷೇತ್ರಗಳಲ್ಲಿ ಶೇ.75ರಷ್ಟು ಮತದಾನವಾಗಿದೆ.

71.34 ರಷ್ಟು ಮತದಾನ ತೆಲಂಗಾಣದಾದ್ಯಂತ ದಾಖಲಾಗಿದೆ. ತೆಲಂಗಾಣದಲ್ಲಿ ಮುನುಗೋಡು ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ.91.89 ರಷ್ಟು ಮತದಾನವಾಗಿದೆ. ಯಾಕುತ್ಪುರದಲ್ಲಿ ಅತಿ ಕಡಿಮೆ ಅಂದರೆ ಶೇ.39.64ರಷ್ಟು ಮತದಾನವಾಗಿದೆ.

  • ಪಾಲಕುರ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎರ್ರಬೆಳ್ಳಿ ದಯಾಕರ್ ರಾವ್ ಮುಂದಿದ್ದಾರೆ
  • ಕುತ್ಬುಳ್ಳಾಪುರದಲ್ಲಿ ಬಿಆರ್‌ಎಸ್‌ ಅಭ್ಯರ್ಥಿ ಮುನ್ನಡೆ
  • ಸೆರಿಲಿಂಗಂಪಲ್ಲಿಯಲ್ಲಿ ಬಿಆರ್‌ಎಸ್ ಅಭ್ಯರ್ಥಿ ಅರಿಕೆಪುಡಿ ಗಾಂಧಿ ಮುಂದಿದ್ದಾರೆ
  • ನಿಜಾಮಾಬಾದ್ ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೂಪತಿ ರೆಡ್ಡಿ 500 ಮತಗಳ ಅಂತರದಲ್ಲಿ ಮುನ್ನಡೆ
  • ಸತ್ತುಪಲ್ಲಿ ಮೊದಲ ಸುತ್ತಿನಲ್ಲಿ ಬಿಆರ್‌ಎಸ್ ಅಭ್ಯರ್ಥಿ ಸಂಡ್ರಾ ವೆಂಕಟವೀರಯ್ಯ (226) ಮುನ್ನಡೆ.
  • ಮೇಡಕ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೈನಂಪಲ್ಲಿ ರೋಹಿತ್ (1411) ಮುನ್ನಡೆ
  • ನರಸಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅವಲು ರಾಜಿರೆಡ್ಡಿ (1205) ಮುನ್ನಡೆ
  • ವೈರಾ ಎರಡನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮದಾಸ್ (3400) ಮುನ್ನಡೆ
  • ನರಸಂಪೇಟೆಯಲ್ಲಿ ಬಿಆರ್ ಎಸ್ ಅಭ್ಯರ್ಥಿ ಪೆದ್ದಿ ಸುದರ್ಶನ ರೆಡ್ಡಿ (350) ಮುಂದಿದ್ದಾರೆ
  • ಅಂಬರ್ ಪೇಟೆ ಬಿಆರ್ ಎಸ್ ಅಭ್ಯರ್ಥಿ ಕಾಳೇರು ವೆಂಕಟೇಶ್ (485) ಮುನ್ನಡೆ
  • ಮುಶಿರಾಬಾದ್ ಬಿಆರ್ ಎಸ್ ಅಭ್ಯರ್ಥಿ ಮುತ್ತ ಗೋಪಾಲ್ (2261) ಮುಂದಿದ್ದಾರೆ
  • ಕೊಲ್ಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೂಪಲ್ಲಿ ಕೃಷ್ಣರಾವ್ (1011) ಮುನ್ನಡೆ
  • ನಿಜಾಮಾಬಾದ್‌ನ ಆರ್ಮರ್ ಕ್ಷೇತ್ರದಲ್ಲಿ ಎರಡು ಸುತ್ತು ಸೇರಿ ಬಿಜೆಪಿ ಅಭ್ಯರ್ಥಿ ರಾಕೇಶ್ ರೆಡ್ಡಿ 1,856 ಮುನ್ನಡೆ ಸಾಧಿಸಿದ್ದಾರೆ

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಮತ ಎಣಿಕೆ | ಅಂಚೆ ಮತದಾನ: ಬಿಆರ್‌ಎಸ್ ಹಿಂದಿಕ್ಕಿದ ಕಾಂಗ್ರೆಸ್‌

ಇಂದು ತೆಲಂಗಾಣದಲ್ಲಿ 2,290 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಎಲ್ಲ 119 ಕ್ಷೇತ್ರಗಳಲ್ಲಿ ಬಿಆರ್‌ಎಸ್‌ ಅಭ್ಯರ್ಥಿಗಳು, 118 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಒಂದು ಸ್ಥಾನದಲ್ಲಿ ಸಿಪಿಐ, 111 ಕ್ಷೇತ್ರಗಳಲ್ಲಿ ಬಿಜೆಪಿ, 8 ಸ್ಥಾನಗಳಲ್ಲಿ ಜನಸೇನೆ, 108 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಎಸ್ಪಿ ಅಭ್ಯರ್ಥಿಗಳು, 19 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಎಂ ಅಭ್ಯರ್ಥಿಗಳು, 9 ವಿಧಾನಸಭಾ ಕ್ಷೇತ್ರಗಳಲ್ಲಿ ಎಂಐಎಂ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...