ಭಯೋತ್ಪಾದನೆ ನಿಗ್ರಹ ಆಗಬೇಕು, ಪ್ರಧಾನಿ ಮೋದಿಗೆ ನಮ್ಮ ಬೆಂಬಲ: ಹೆಚ್.ಡಿ.ದೇವೇಗೌಡ ಘೋಷಣೆ

Date:

Advertisements

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲ ಕ್ರಮಗಳನ್ನು ಮುಕ್ತವಾಗಿ ಬೆಂಬಲಿಸುವೆ. ಕೊಂದವರಿಗೆ ತಕ್ಕ ಶಾಸ್ತಿ ಆಗಲೇಬೇಕು. ಈ ಹಿನ್ನೆಲೆಯಲ್ಲಿ ಪ್ರಧಾನಿಗಳು ಕೈಗೊಳ್ಳುವ ನಿರ್ಧಾರಕ್ಕೆ ಜೆಡಿಎಸ್ ಬದ್ಧವಾಗಿರುತ್ತದೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದರು.

ನವದೆಹಲಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ಕರೆದು ಮಾತನಾಡಿದ ಅವರು, “ಪಹಲ್ಗಾಮ್ ಘಟನೆ ಅಮಾನವೀಯ. ಮೊದಲ ಬಾರಿಗೆ ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ. ರಕ್ಷಣಾ ಪಡೆಗಳಿಗೆ ಮೋದಿ ಅವರು ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಮೊದಲ ಬಾರಿಗೆ ದೇಶದ ಪ್ರಧಾನಿ ಮೋದಿ ಅವರು ಇಂತಹ ದಿಟ್ಟ ನಿರ್ಧಾರ ಮಾಡಿದ್ದಾರೆ. ಇತಿಹಾಸದಲ್ಲಿ ಈ ರೀತಿ ಎಂದೂ ನಿರ್ಧಾರ ಆಗಿರಲಿಲ್ಲ” ಎಂದರು.

“ಗೃಹ, ರಕ್ಷಣೆ ಹಾಗೂ ವಿದೇಶಾಂಗ ಖಾತೆಗಳನ್ನು ನಿಭಾಯಿಸುತ್ತಿರುವ ಸಚಿವರುಗಳು ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಇಡೀ ದೇಶ ಪ್ರಧಾನಿ ಮೋದಿಯವರ ಜೊತೆ ನಿಂತಿದೆ. ಎಲ್ಲಾ ರಾಜಕೀಯ ಪಕ್ಷಗಳು ಮೋದಿಯವರ ನಿರ್ಧಾರವನ್ನು ಬೆಂಬಲಿಸಿವೆ. ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಪಾಕಿಸ್ತಾನ ಪ್ರೇರಿತ ಉಗ್ರರನ್ನು ಸದೆಬಡಿಯುವವರೆಗೆ ವಿರಮಿಸುವುದಿಲ್ಲ ಎಂದು ಮೋದಿ‌ ಹೇಳಿದ್ದಾರೆ. ನಾನು, ನಮ್ಮ ಪಕ್ಷ ಇಡೀ ದೇಶ ಪ್ರಧಾನಿ ಮೋದಿ ಜೊತೆಗಿರುತ್ತೇವೆ” ಎಂದು ದೇವೇಗೌಡರು ಹೇಳಿದರು.

Advertisements

“1971ರ ಯುದ್ಧ ಕಾಲಕ್ಕೂ ಈಗಿನ ಪರಿಸ್ಥಿತಿಗೂ ಬಹಳ ವ್ಯತ್ಯಾಸವಿದೆ. ಹೋಲಿಕೆ ಮಾಡಲು ಸಾಧ್ಯವಿಲ್ಲ. ಭಾರತ ಅಗಾಧವಾಗಿ ಬೆಳೆದಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶವು ಸಾಕಷ್ಟು ಅಭಿವೃದ್ಧಿ, ಬದಲಾವಣೆಯನ್ನು ಕಂಡಿದೆ ಎಂದ ಅವರು; ಇಲ್ಲಿ ಹಿಂದೂ ಮುಸ್ಲಿಂ ಎನ್ನುವ ಪ್ರಶ್ನೆಯಲ್ಲ. ಧರ್ಮ, ಜಾತಿ ಪ್ರಶ್ನೆ ಉದ್ಭವವಾಗುವುದಿಲ್ಲ. ದೇಶದ ಭದ್ರತೆ ಮುಖ್ಯ. ಯುದ್ಧ ಮಾಡಬೇಕೋ ಬೇಡವೋ ಎನ್ನುವ ನಿರ್ಧಾರವನ್ನು ಸೇವೆಗೆ ಬಿಡಲಾಗಿದೆ. ಮೂರು ಸೇನೆಗಳ ಮುಖ್ಯಸ್ಥರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯ ಅಮೃತಕಾಲದಲ್ಲಿ ದಾಳಿ ಮತ್ತು ದ್ವೇಷಕ್ಕಿದೆ ಮಾರುಕಟ್ಟೆ

ಜಾತಿ ಗಣತಿ | ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ

“ಜಾತಿ ಸಮೀಕ್ಷೆಯ ಮೂಲಕ ಬೆಣ್ಣೆ ತಿಂದು, ಉಳಿದವರಿಗೆ ನೀರು ಮಜ್ಜಿಗೆ ಕೊಡಲು ಸಿದ್ದರಾಮಯ್ಯ ಹೊರಟಿದ್ದಾರೆ. ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಮುಂದಿನ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನು ಮಾಡುತ್ತಿರುವುದು ಸ್ವಾಗತಾರ್ಹ” ಎಂದು ದೇವೇಗೌಡರು ಹೇಳಿದರು.

“ಕೇಂದ್ರ ನಿಲುವಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಕರ್ನಾಟಕದ ಜಾತಿಗಣತಿಗೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿಯೇ ಸಹಮತ ಇಲ್ಲ. ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ನಾನು ಪತ್ರ ಬರೆದಿದ್ದೆ. ನನಗೆ ಅವರು ಈವರೆಗೆ ಉತ್ತರ ಕೊಟ್ಟಿಲ್ಲ” ಎಂದರು.

“ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ. ಹಾಗಾದರೆ ಸಿಎಂ ಕಚೇರಿಯಲ್ಲಿ ಎಷ್ಟು ಹಿಂದುಳಿದವರು ಇದ್ದಾರೆ? ಸಿಎಂ ಕಚೇರಿಯಲ್ಲಿ ಅವರದ್ದೆ ಸಮುದಾಯದ ಉದ್ಯೋಗಿಗಳು ಎಷ್ಟಿದ್ದಾರೆ? ಎನ್ನುವುದನ್ನು ಹೇಳಬೇಕು. ಅವರು ಹೇಳುತ್ತಾರೆಯೇ? ಅಂತಹ ಸಿದ್ದರಾಮಯ್ಯನವರು ಮೋದಿ ಅವರಿಗೆ ಪಾಠ ಮಾಡುತ್ತಾರೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X