ಪ್ರತಿ ಕ್ಷೇತ್ರದ ಅಭಿವೃದ್ಧಿಗೆ 50 ಲಕ್ಷ ರೂ.ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ

Date:

  • ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಮೊದಲ ಕಂತು ಬಿಡುಗಡೆ
  • ಶಾಸಕರ ಅಸಮಾಧಾನಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಮೊದಲ ಕಂತಿನಲ್ಲಿ 145 ಕೋಟಿ ರೂ. ಬಿಡುಗಡೆ ಮಾಡಿದ್ದು, ಪ್ರತಿ ಕ್ಷೇತ್ರಕ್ಕೂ 50 ಲಕ್ಷ ರೂ. ನಂತೆ 224 ಕ್ಷೇತ್ರದ ಶಾಸಕರು ಮತ್ತು 67 ವಿಧಾನಪರಿಷತ್ ಸದಸ್ಯರಿಗೆ ಅನುದಾನ ನೀಡಿದ್ದಾರೆ.

ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಶಾಸಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ದುಂಬಾಲು ಬಿದ್ದಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಶಾಸಕರನ್ನು ಶಾಂತಗೊಳಿಸಲು ಸಿಎಂ ಸಿದ್ದರಾಮಯ್ಯ 31 ಜಿಲ್ಲೆಗಳ 135 ಶಾಸಕರ ಸಭೆ ಕರೆದಿದ್ದರು.

ಸಭೆಯಲ್ಲಿ ಶಾಸಕರು ಅನುದಾನ ಸಿಗುತ್ತಿಲ್ಲವೆಂದು ಸಿಎಂ ಬಳಿ ಅಳಲು ತೋಡಿಕೊಂಡಿದ್ದರು. ಶಾಸಕರ ಈ ಅಳಲು ಕೇಳಿದ ಸಿಎಂ ಸಿದ್ದರಾಮಯ್ಯ, ಆದ್ಯತೆ ಮತ್ತು ಅನುದಾನದ ಲಭ್ಯತೆ ಆಧಾರದಲ್ಲಿ ಅಭಿವೃದ್ಧಿ ಕಾರ್ಯ ಹಾಗೂ ಅಹವಾಲುಗಳನ್ನು ಜಾರಿಗೆ ತರುವಂತೆ ಶಾಸಕರಿಗೆ ಷರತ್ತು ವಿಧಿಸಿದ್ದಾರೆ. ಇದಕ್ಕೆ ಶಾಸಕರು ಸಮ್ಮತಿ ಸೂಚಿಸಿದ ಬಳಿಕ ಅನುದಾನ ಬಿಡುಗಡೆ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಲ್ಕಿಸ್‌ ಕಾನೂನು ಸಮರ – ನ್ಯಾಯವ್ಯವಸ್ಥೆಯ ಅಣಕ

ಈ ಮೂಲಕ ಸರ್ಕಾರ ಮತ್ತು ಶಾಸಕರ ನಡುವಿನ ಸಮಸ್ಯೆಗೆ ತಾತ್ಕಾಲಿಕ ಬ್ರೇಕ್ ಹಾಕಿದಂತಾಗಿದೆ. ಇನ್ನು ಮೊದಲ ಕಂತು ಬಿಡುಗಡೆಯಾದ ಬಳಿಕವಾದರೂ ಶಾಸಕರ ಅಸಮಾಧಾನ ನಿವಾರಣೆಯಾಗುತ್ತಾ ಅಥವಾ ಮುಂದುವರಿಯುತ್ತಾ ಎಂಬುದನ್ನು ಕಾದುನೋಡಬೇಕು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ತಾರತಮ್ಯ ಮಾಡದೆ ಎಲ್ಲ 224 ವಿಧಾನ ಸಭಾ ಕ್ಷೇತ್ರಗಳಿಗೂ ತಲಾ ರೂ.50 ಲಕ್ಷ ಅನುದಾನ ನೀಡಿದ ಸಿದ್ದರಾಮಯ್ಯ ಅವರು , ಒಬ್ಬ ಪಕ್ಷಾತೀತ ಮುಖ್ಯ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...