‘ಮುಖ್ಯಮಂತ್ರಿ ಪದಕ’ ಪ್ರದಾನ ಕಾರ್ಯಕ್ರಮಕ್ಕೂ ತಟ್ಟಿದ ನೀತಿ ಸಂಹಿತೆ ಬಿಸಿ

Date:

  • ರಾಜ್ಯದ 42 ಪೊಲೀಸರಿಗೆ ‘ಮುಖ್ಯಮಂತ್ರಿ ಪದಕ’ ಪ್ರಕಟ
  • ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಾಹಿತಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿರತರಾದ, ಸೇವಾ ಅವಧಿಯಲ್ಲಿ ಉತ್ತಮ ಸಾಧನೆ ಮಾಡಿದ ಪೊಲೀಸರಿಗೆ ಪ್ರತಿ ವರ್ಷ ನೀಡುವ ‘ಮುಖ್ಯಮಂತ್ರಿ ಪದಕ’ ಪ್ರದಾನ ಕಾರ್ಯಕ್ರಮಕ್ಕೆ ನೀತಿಸಂಹಿತೆ ಬಿಸಿ ತಟ್ಟಿದ್ದು, ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಭಾನುವಾರ ಬೆಳಗ್ಗೆ ಕೋರಮಂಗಲದ ಕೆಎಸ್ಆರ್‌ಪಿ ಮೈದಾನದಲ್ಲಿ ನಡೆದ ‘ಪೊಲೀಸ್ ಧ್ವಜ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಪೊಲೀಸರಿಗೆ ಶುಭಾಶಯ ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಪೊಲೀಸರ ಅವಿರತ ಶ್ರಮದಿಂದಾಗಿ ರಾಜ್ಯದಲ್ಲಿ ಶಾಂತಿ‌ ನೆಲೆಸಿದೆ. ಕೊರೊನಾ ವೇಳೆ ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಯಾರೂ ಊಹಿಸದಂತಹ ಉತ್ತಮ‌ ಸೇವೆ ನಿರ್ವಹಿಸಿದ್ದಾರೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? : ದಕ್ಷಿಣ ಕನ್ನಡ | ತೂಗು ಸೇತುವೆ ನಿರ್ಮಿಸಲು ಆಗ್ರಹ; ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ

ಸಿಎಂ ಪದಕ ಪ್ರದಾನ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ವಿತರಣೆ ಮಾಡಬೇಕು ಆದರೆ, ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ‘ಪದಕ’ ವಿತರಣೆ ಮುಂದೂಡಲಾಗಿದೆ” ಎಂದು ಮಾಹಿತಿ ನೀಡಿದರು.

“ಹುತಾತ್ಮ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಪೊಲೀಸ್‌ ಧ್ವಜ ದಿನಾಚರಣೆಯನ್ನು ಪ್ರಾಯೋಗಿಕವಾಗಿ ಆಚರಿಸುತ್ತಿದ್ದು, ಚುನಾವಣೆ ಮುಗಿದ ಬಳಿಕ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಮಾಡಲಾಗುತ್ತದೆ” ಎಂದು ತಿಳಿಸಿದರು.

ಶಿವಮೊಗ್ಗದ ದೊಡ್ಡಪೇಟೆ ಇನ್‌ಸ್ಪೆಕ್ಟರ್‌ ಕೆ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆ ಸಬ್ ಇನ್ಸ್‌ಪ್ಟೆಕ್ಟರ್‌ ಕೆ ಶಿವಕುಮಾರ್, ಡಿಎಆರ್ ಪಡೆಯ ಎ.ಎಚ್‌.ಸಿ ಜೈ ಜಗದೀಶ್ ಸೇರಿದಂತೆ ರಾಜ್ಯದ 42 ಪೊಲೀಸರಿಗೆ 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರಕಟವಾಗಿದೆ ಎಂದು ಮಾಹಿತಿ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು ಚುನಾವಣಾ...

ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು...