ಕೋಲಾರ ಮಲೆನಾಡು ಆಗುವ ದಿನಗಳು ದೂರವಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements
  • ಕುಮಾರಸ್ವಾಮಿ ಇದನ್ನು ಅರ್ಥಮಾಡಿಕೊಳ್ಳಬೇಕು
  • ಕೇವಲ ರಾಜಕೀಯಕ್ಕಾಗಿ ಟೀಕೆ ಮಾಡಬಾರದು 

‘ಕೆಸಿ ವ್ಯಾಲಿ ಯೋಜನೆ ಜಾರಿ ಮಾಡಬಾರದು. ಅದರ ಮೂಲಕ ಜನರಿಗೆ ವಿಷ ನೀಡಲಾಗುತ್ತಿದೆ’ ಎಂದು ಎಚ್‌ ಡಿ ಕುಮಾರಸ್ವಾಮಿ ಹೇಳುತ್ತಾರೆ. ಆದರೆ, ಯೋಜನೆಯಿಂದ ಕೆರೆಗಳು ತುಂಬಿವೆ. ದನಕರುಗಳಿಗೆ ಮೇವಾಗಿದೆ. ಈವರೆಗೂ ಜನ, ದನಕರುಗಳು ಸತ್ತ ಉದಾಹರಣೆ ಇದೆಯಾ? ಎಂದು ಸಿದ್ದರಾಮಯ್ಯ ಅವರು ಜನರನ್ನು ಕೇಳಿದಾಗ, “ಇಲ್ಲ” ಎಂದು ನೆರೆದಿದ್ದ ಜನತೆ ಜೋರಾಗಿ ಕೂಗಿದರು. ಇದನ್ನು ಕುಮಾರಸ್ವಾಮಿಗೆ ಹೇಳಿ ಮುಖ್ಯಮಂತ್ರಿ ತಿಳಿಸಿದರು.

ಕೋಲಾರ, ಬಂಗಾರಪೇಟೆ ತಾಲ್ಲೂಕುಗಳಿಗೆ ಕುಡಿಯುವ ನೀರನ್ನು ಒದಗಿಸುವ ಯರಗೋಳ್ ಯೋಜನೆ ಹಾಗೂ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಈ ಬಾರಿಯ ಬಜೆಟ್‌ನಲ್ಲಿ ಕೆಜಿಎಫ್‌ನಲ್ಲಿರುವ 965 ಕೈಗಾರಿಕಾ ಪ್ರದೇಶದವನ್ನು ಬಿಇಎಂಎಲ್ ನಿಂದ ಹಿಂಪಡೆದು ಅಲ್ಲಿ ಹೊಸ ಕೈಗಾರಿಕಾ ಟೌನ್ಸ್‌ಶಿಪ್ ನಿರ್ಮಾಣ ಮಾಡಲಾಗುವುದು. ಹಿಂದೆ ಪ್ರತ್ಯೇಕವಾಗಿದ್ದ ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ಒಂದು ಮಾಡಲಾಗಿತ್ತು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರತ್ಯೇಕ ಡೈರಿ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ” ಎಂದರು.

Advertisements

“ಪ್ರತಿ ತಿಂಗಳು 2 ತಿಂಗಳು ವಿದ್ಯುತ್ ಬಿಲ್ಲು ಕಟ್ಟಲಾಗುತ್ತಿತ್ತು. ಅದನ್ನು ತಪ್ಪಿಸಲು 50 ಎಕರೆ ಜಾಗದಲ್ಲಿ ಸ್ವಂತ ವಿದ್ಯುತ್ ಉತ್ಪಾದಿಸಲು ಸೋಲಾರ್ ಘಟಕ ಸ್ಥಾಪನೆಗೆ ಪರವಾನಗಿ ನೀಡಲಾಗಿದೆ. ಕೋಲಾರ ಹಾಲು ಒಕ್ಕೂಟದಿಂದ ರೈತರಿಗೆ ಅನುಕೂಲವಾಗಲಿದೆ” ಎಂದು ಹೇಳಿದರು.

“ಬರಗಾಲವಿದ್ದರೂ 2263 ಕೋಟಿ ರೂ.ಗಳನ್ನು ಜಿಲ್ಲೆಯ ಅಭಿವೃದ್ಧಿಗಾಗಿ ನೀಡಿದ್ದೇವೆ. ಕೆ.ಹೆಚ್.ಮುನಿಯಪ್ಪ ಅವರು ಸಚಿವರಾಗಿದ್ದಾಗ 83 ಕೋಟಿ ರೂ.ಗಳನ್ನು ಮಂಜೂರು ಮಾಡಿಸಿರುವುದಕ್ಕಾಗಿ ಹಾಗೂ ಯೋಜನೆಗೆ ಸಹಕರಿಸಿದ ಎಲ್ಲರಿಗೂ ಮುಖ್ಯಮಂತ್ರಿಗಳು ಧನ್ಯವಾದ ತಿಳಿಸುವೆ” ಎಂದರು.

ಕೊಡುಗೆ ಸ್ಮರಿಸಬೇಕು

“ಒಂದು ಕಾಲದಲ್ಲಿ ಕೋಲಾರ, ಬಂಗಾರಪೇಟೆಯಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ನೀಡುವ ಪರಿಸ್ಥಿತಿ ಇತ್ತು. ಕುಡಿಯುವ ನೀರು ಸಿಗುತ್ತಿರಲಿಲ್ಲ. ಅದಕ್ಕೆ ಯೋಚಿಸಿ ಮಾರ್ಕಾಂಡೇಯ ನದಿಗೆ ಯರಗೋಳ್ ಗ್ರಾಮದ ಬಳಿ ಅಣೆಕಟ್ಟು ನಿರ್ಮಿಸಿ ನೀರು ಶೇಖರಿಸಿ ಮೂರೂ ಪಟ್ಟಣಗಳಿಗೆ ಕುಡಿಯುವ ನೀರು ಕೊಡುವ ಯೋಜನೆ ರೂಪಿಸಲಾಯಿತು. ಇದು ಇಂದು ಕಾರ್ಯಗತವಾಗುತ್ತಿರುವ ಹಿಂದೆ ಮಾಜಿ ಸಚಿವ ಶ್ರೀನಿವಾಸಗೌಡ ಅವರ ಕೊಡುಗೆಯನ್ನು ಸ್ಮರಿಸಬೇಕು” ಎಂದರು.

“ಟೀಚರ್ ಚಂದ್ರಪ್ಪ, ನಾರಾಯಣಸ್ವಾಮಿ ಅವರನ್ನು ಸ್ಮರಿಸಬೇಕು. ಯರಗೋಳ್ ಯೋಜನೆ 2006 ರಲ್ಲಿ ಪ್ರಾರಂಭವಾದರೂ, ಕಾರ್ಯಗತವಾಗಲಿಲ್ಲ. ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಯವರು ಒತ್ತಾಯ ಮಾಡಿ ಚಾಲನೆ ನೀಡಿದರು. ಹಾಗಾಗಿ ಇದಕ್ಕೆ ಚಾಲನೆ ದೊರಕುತ್ತಿದೆ. 38.1 ಗಜ ಆಳದಲ್ಲಿ ನೀರು ನಿಲ್ಲಲಿದೆ. ಈ ಮೂರು ಪಟ್ಟಣಗಳಿಗೆ ನೀರು ಸಾಕಾಗುತ್ತದೆ ಎನ್ನುವುದು ನನ್ನ ಭಾವನೆ. ಕೆಜಿಎಫ್ ಶಾಸಕಿ ರೂಪ ಅವರೂ ಕೂಡ ಕೆಜಿಎಫ್ ಗೆ ಯರಗೋಳ್ ಯೋಜನೆಯಿಂದ ನೀರು ಒದಗಿಸಲು ಕೋರಿದ್ದು, ಈ ಬಗ್ಗೆ ಚರ್ಚೆ ಮಾಡಿ ನೀರು ಸಿಕ್ಕರೆ ಎಷ್ಟೇ ಖರ್ಚಾದರೂ ನೀರು ಕೊಡುತ್ತೇವೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ ಗೆಲ್ಲಲು ಲಿಂಗಾಯತರಿಗೆ ನಾಯಕತ್ವ; ಅಧಿಕಾರ ಸಿಕ್ಕಾಗ ಬ್ರಾಹ್ಮಣರ ಪಾರುಪತ್ಯ

ಯರಗೋಳ್ ಯೋಜನೆಗೆ 23 ಸಾವಿರ ಕೋಟಿ ರೂ. ವೆಚ್ಚ

“ಕೋಲಾರ, ಚಿತ್ರದುರ್ಗ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಗಳು. ರಾಜಸ್ಥಾನ ಬಿಟ್ಟರೆ ಅತಿ ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ರಾಜ್ಯ ಕರ್ನಾಟಕ. ಎಚ್.ಎನ್.ವ್ಯಾಲಿ, ಕೆ.ವ್ಯಾಲಿ, ಪುಷ್ಪಾವತಿ ವ್ಯಾಲಿ ಜಾರಿ ಮಾಡಿದ ನಾವು ಎತ್ತಿನಹೊಳೆ ಯೋಜನೆಯನ್ನು ಜಾರಿ ಮಾಡಲೇಬೇಕೆಂದು ಒತ್ತಾಯ ಮಾಡಿದ್ದು ಮಹಾಜನತೆ. ಯೋಜನೆ ಕಾರ್ಯಸಾಧುವಾಗಿದ್ದರೆ ಎಷ್ಟೇ ಖರ್ಚಾದರೂ ಯೋಜನೆ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಯರಗೋಳ್ ಯೋಜನೆಗೆ 23 ಸಾವಿರ ಕೋಟಿ ರೂ ವೆಚ್ಚವಾಗಿದೆ. ಕೆ.ಸಿ.ವ್ಯಾಲಿಗೆ 1800 ಕೋಟಿ ರೂ ಹಾಗೂ ಎಚ್.ಎನ್.ವ್ಯಾಲಿಗೆ 800 ಕೋಟಿ ರೂ.ವೆಚ್ಚವಾಗಿದ್ದು, ಇದು ಅಭಿವೃದ್ಧಿ” ಎಂದು ಹೇಳಿದರು.

ಕೋಲಾರ ಮಲೆನಾಡು ಆಗುವ ದಿನಗಳು ದೂರವಿಲ್ಲ

“ನೀರನ್ನು ಪರೀಕ್ಷೆ ಮಾಡಿಸಿದ್ದು ಹಾನಿಕಾರಕ ಪದಾರ್ಥ ಇಲ್ಲ ಎಂದು ವಿಶ್ವಸಂಸ್ಥೆಯವರು ಭೇಟಿ ನೀಡಿ ಮೆಚ್ಚುಗೆ ನೀಡಿದ್ದಾರೆ. ಕುಮಾರಸ್ವಾಮಿಯವರು ಇದನ್ನು ಅರ್ಥಮಾಡಿಕೊಳ್ಳಬೇಕು. ಕೇರಳದ ಸಮಾಲೋಚಕರೂ ಕೂಡ ಇದನ್ನು ಇತರೆ ರಾಜ್ಯಗಳಲ್ಲಿ ಅನುಕರಿಸಬೇಕು ಎಂದಿದ್ದಾರೆ. ಕೇವಲ ರಾಜಕೀಯಕ್ಕಾಗಿ ಟೀಕೆ ಮಾಡಬಾರದು ಎಂದರು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಜನರ ಸಮಸ್ಯೆಗಳಿಗೆ, ಜನರ ವಿರುದ್ಧವಾಗಿ, ದಾರಿತಪ್ಪಿಸುವ ಕೆಲಸವನ್ನು ಮಾಡಬಾರದು. ಕೋಲಾರ ಮಲೆನಾಡು ಆಗುವ ದಿನಗಳು ದೂರವಿಲ್ಲ” ಎಂದರು.

ವಿರೋಧಿಗಳೇ ಕಣ್ತೆರೆದು ನೋಡಿ

“ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳ ನಂತರ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ ಎಂದು ಟೀಕಿಸುವ ವಿರೋಧಿಗಳಿಗೆ ಕಣ್ತೆರೆದು ನೋಡುವಂತೆ ತಿಳಿಸಿದ ಮುಖ್ಯಮಂತ್ರಿಗಳು, ಕಣ್ಣು ಮುಚ್ಚಿಕೊಂಡು, ರಾಜಕೀಯ ಕಾರಣಗಳಿಗಾಗಿ ಮಾತನಾಡಬೇಡಿ. ಇದು ಸಣ್ಣ ಅನುದಾನವಲ್ಲ. ಕೋಲಾರ ಜಿಲ್ಲೆ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯನ್ನು ಯಾರು ಜಾರಿಗೆ ಮಾಡಿದ್ದು? ವಿರೋಧಿಸುವವರು ಮಾಡಿಕೊಟ್ಟರೆ ಎಂದು ಪ್ರಶ್ನಿಸಿದರು. ಎತ್ತಿನಹೊಳೆ ಯೋಜನೆ ಜಾರಿಯಾಗುವುದಿಲ್ಲ ಎನ್ನುವವರಿಗೆ ಇಂದು ಉತ್ತರ ಸಿಕ್ಕಿದೆ” ಎಂದು ತಿಳಿಸಿದರು.

ಟೀಕಿಸುವವರಿಗೆ ಹೊಟ್ಟೆಉರಿಯುವಂತೆ ಕೆಲಸ

“ಕಳೆದ ವರ್ಷವೇ ಈ ಯೋಜನೆ ಜಾರಿಯಾಗಿದ್ದರೆ ಎಲ್ಲರಿಗೂ ನೀರು ದೊರಕುತ್ತಿತ್ತು. ನಮ್ಮ ಅವಧಿಯಲ್ಲಿ ಎತ್ತಿನಹೊಳೆ ಸಂಪೂರ್ಣ ಯೋಜನೆ ಮುಗಿಸಿ ಈ ಭಾಗದ ಜನರಿಗೆ ಕುಡಿಯುವ ನೀರನ್ನು ಕೊಟ್ಟೇಕೊಡುತ್ತೇವೆ. ನಮ್ಮನ್ನು ಟೀಕಿಸುವವರಿಗೆ ಹೊಟ್ಟೆ ಉರಿಯುವಂತೆ ಕೆಲಸವನ್ನು ಮಾಡುತ್ತೇವೆ” ಎಂದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X