ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್‌ ಆದೇಶ ಎತ್ತಿಹಿಡಿದ ವಿಭಾಗೀಯ ಪೀಠ

Date:

Advertisements
  • 2022ರಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲವೆಂದು ಹೈಕೋರ್ಟ್ ಹೇಳಿತ್ತು
  • ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದ ಬಿಜೆಪಿ ಅಭ್ಯರ್ಥಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು

ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್‌ ಚುನಾವಣೆ ನಡೆಯುವ ವೇಳೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕು ಇಲ್ಲ ಎಂದು ಹೇಳಿದ್ದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ವಿಭಾಗೀಯ ಪೀಠವು ಎತ್ತಿಹಿಡಿದಿದೆ.

2021ರ ನ.9 ರಂದು ಚಿಕ್ಕಮಗಳೂರು ಸೇರಿದಂತೆ ರಾಜ್ಯದ 20 ಸ್ಥಳೀಯ ಸಂಸ್ಥೆ ಕ್ಷೇತ್ರಗಳಿಂದ 25 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ 1,182 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಗಾಯಿತ್ರಿ 1,176 ಮತಗಳನ್ನು ಪಡೆದು ಕೇವಲ 6 ಮತಗಳ ಅಂತರದಿಂದ ಸೋತಿದ್ದರು.

ಈ ಫಲಿತಾಂಶವನ್ನು ಪ್ರಶ್ನಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡ, “ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಎನ್ ಆರ್ ಪುರ, ಶೃಂಗೇರಿ ಮತ್ತು ಕೊಪ್ಪ ಭಾಗದ ಸ್ಥಳೀಯ ಸಂಸ್ಥೆಗಳ 12 ನಾಮನಿರ್ದೇಶಿತ ಸದಸ್ಯರಿಗೆ ಕಾನೂನು ಬಾಹಿರವಾಗಿ ಮತದಾನದ ಹಕ್ಕು ನೀಡಲಾಗಿದೆ” ಎಂದು ಆರೋಪಿಸಿದ್ದರು.

Advertisements

“ಈ ನಾಮನಿರ್ದೇಶಿತ ಸದಸ್ಯರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದರಿಂದ ಗೆಲುವು ಸಾಧಿಸಿದ್ದಾರೆ. ಸಂವಿಧಾನದ ನಿಯಮಗಳ ಪ್ರಕಾರ ನಾಮನಿರ್ದೇಶಿತ ಸದಸ್ಯರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನದ ಹಕ್ಕು ಇಲ್ಲ. ಹಾಗಾಗಿ, ತಮ್ಮ ಪ್ರತಿಸ್ಪರ್ಧಿಯ ಆಯ್ಕೆ ಅಕ್ರಮ ಹಾಗೂ ಕಾನೂನು ಬಾಹಿರವಾಗಿದ್ದು, ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲವೆಂದು ಘೋಷಿಸಬೇಕು” ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಅರ್ಜಿ ವಜಾ ಮಾಡಿದ ಹೈಕೋರ್ಟ್

2022ರ ನ.3ರಂದು ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ, “ಸಂವಿಧಾನದ 243(6)ನೇ ವಿಧಿ ಮತ್ತು ಕೆಎಂಸಿ ಕಾಯಿದೆ ಪ್ರಕಾರ ನಾಮನಿರ್ದೇಶಿತ ಸದಸ್ಯರು ಸಲಹೆ ಮತ್ತು ಸೂಚನೆಗಳನ್ನು ಮಾತ್ರ ನೀಡಬಹುದೇ ಹೊರತು, ವಿಧಾನ ಪರಿಷತ್‌ ಚುನಾವಣೆ ಮಾತ್ರವಲ್ಲದೇ, ಸ್ಥಳೀಯ ಸಂಸ್ಥೆಗಳ ಸಭೆಗಳಲ್ಲೂ ಕೂಡ ಮತದಾನಕ್ಕೆ ಅವಕಾಶವಿಲ್ಲ. ಆದ್ದರಿಂದ ವಿಧಾನ ಪರಿಷತ್ ಚುನಾವಣೆಯಲ್ಲೂ ಸಹ ಮತದಾನದ ಹಕ್ಕು ಇರುವುದಿಲ್ಲ” ಎಂದು ಆದೇಶ ಹೊರಡಿಸಿತ್ತು.

ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶದಿಂದ ಹಿನ್ನಡೆ ಅನುಭವಿಸಿದ್ದ ಎಂ.ಕೆ ಪ್ರಾಣೇಶ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಏಕ ಸದಸ್ಯ ಪೀಠದ ತೀರ್ಪನ್ನು ಎತ್ತಿಹಿಡಿದಿದೆ. ಮೇಲ್ಮನವಿಯನ್ನು ವಜಾಗೊಳಿಸಿದೆ.

ಆದರೆ, ಪ್ರತ್ಯೇಕ ಚುನಾವಣಾ ತಕರಾರು ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ಬಿಜಿಪಿ ಅಭ್ಯರ್ಥಿ ಪ್ರಾಣೇಶ್ ಆಯ್ಕೆಯನ್ನು ಅಸಿಂಧುಗೊಳಿಸಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

Download Eedina App Android / iOS

X