ನೋಟಿಸ್ ಬಂದ ಮೇಲೆ ಕಾರ್ಖಾನೆ ಬಂದ್ ಮಾಡಬೇಕು, ಇಲ್ಲದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲು: ಸಚಿವ ಈಶ್ವರ ಖಂಡ್ರೆ

Date:

Advertisements

ರಾಜ್ಯದ ವಿವಿಧ ಕಾರ್ಖಾನೆಗಳು ಕಾಯ್ದೆ ಉಲ್ಲಂಘಿಸಿದ್ದರಿಂದ ಕಾನೂನು ರೀತಿಯಲ್ಲಿ ನೋಟಿಸ್ ನೀಡಲಾಗಿದೆ. ಅದರಲ್ಲಿ ಯತ್ನಾಳ್ ಅವರಿಗೆ ಸೇರಿದ ಕಾರ್ಖಾನೆಗೆ ಪ್ರತ್ಯೇಕವಾಗಿ ಕೊಟ್ಟಿಲ್ಲ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಸಕ್ಕರೆ ಹಾಗೂ ಇಥೆನಾಲ್ ಕಾರ್ಖಾನೆಗೆ ಕೇಂದ್ರ ಪರಿಸರ ಸಚಿವಾಲಯವೇ ಒಂದೂವರೆ ವರ್ಷದ ಹಿಂದೆ ₹1.5 ಕೋಟಿ ದಂಡ ವಿಧಿಸಿತ್ತು. ಅದನ್ನು ಪಾವತಿಸಿದ ಬಳಿಕವೂ ಅಗತ್ಯ ಅನುಮತಿ ಪಡೆದಿರಲಿಲ್ಲ”ಎಂದು ಆರೋಪಿಸಿದರು.

“ವಾರದ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಲ ಮತ್ತು ವಾಯು ಮಾಲಿನ್ಯ ಮಾಡುವ ಕಾರ್ಖಾನೆಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದೆ. ಅದರಂತೆ ಇದೀಗ ಕಾರ್ಖಾನೆಗಳು ಕಾಯ್ದೆ ಉಲ್ಲಂಘಿಸಿದ್ದರಿಂದ ನೋಟಿಸ್‌ ನೀಡಲಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

“ನೋಟಿಸ್ ನಂತರ ಕಾರ್ಖಾನೆ ಬಂದ್ ಮಾಡಲೇಬೇಕು. ಇಲ್ಲದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು” ಎಂದು ಸಚಿವರು ಎಚ್ಚರಿಸಿದರು.

“ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ ‌ಎಂಬ ಯತ್ನಾಳ್ ಹೇಳಿಕೆಯೇ ಹಾಸ್ಯಾಸ್ಪದ.
ಪರವಾನಗಿ ಪಡೆಯದೇ ಲಕ್ಷಾಂತರ ಟನ್ ಕಬ್ಬು ನುರಿಸಿದ್ದಾರೆ ಮತ್ತು ಬಾಯ್ಲರ್ ಅಳವಡಿಸಿದ್ದಾರೆ. ಹೀಗಾಗಿ ನಿಯಮಾವಳಿ ಪ್ರಕಾರ ನೋಟಿಸ್ ನೀಡಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

Download Eedina App Android / iOS

X