ಎಚ್ಎಂಟಿ ವಶದಲ್ಲಿದ್ದ ಐದು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಅರಣ್ಯ ಇಲಾಖೆ

Date:

ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್‌ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

- Advertisement -

ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಶುಕ್ರವಾರ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು ಅಲ್ಲಿ ಕರ್ನಾಟಕ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದರು.

ಸದರಿ ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್‌ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐ.ಎ.) ಹಿಂಪಡೆಯಲೂ ಸೂಚನೆ ನೀಡಿದ್ದರು.
ಈ ಮಧ್ಯೆ ಎಚ್ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂಪಾಯಿಗಳಿಗೆ ಖಾಸಗಿ ಮತ್ತು ಸರ್ಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ಅಧಿಕಾರಿಗಳು ಪ್ರಥಮ ಹೆಜ್ಜೆ ಇಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...