ದಿನೇ ದಿನೆ ಏರಿಕೆ ಆಗುತ್ತಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡಲು ಸರ್ಕಾರ ಕೂಡಲೇ ಗಮನ ಹರಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಅಧ್ಯಕ್ಷ ತಾಹೇರ್ ಹುಸೇನ್ ಒತ್ತಾಯಿಸಿದ್ದಾರೆ.
“ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೆ ಏರುತ್ತಿದ್ದು, ಸಾಮಾನ್ಯ ಜನರ ಬದುಕು ಕಷ್ಟವಾಗಿದೆ. ಈಗಾಗ್ಲೇ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದ್ದು ಅಡುಗೆ ಅನಿಲ, ಎಣ್ಣೆ, ಬೇಳೆ ಇತ್ಯಾದಿ ದಿನನಿತ್ಯದ ವಸ್ತುಗಳು ಸಾಮಾನ್ಯ ಜನರ ಬದುಕು ನರಕ ಮಾಡಿದೆ. ಈ ನಡುವೆ ರಾಜ್ಯದಲ್ಲಿ ತರಕಾರಿ ಬೆಲೆ ಹೆಚ್ಚಾಗುತ್ತಿರುವುದರಿಂದ ಇನ್ನಷ್ಟು ಸಂಕಷ್ಟಕ್ಕೆ ಈಡು ಮಾಡಿದೆ” ಎಂದು ವಿವರಿಸಿದ್ದಾರೆ.
“ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತು ಜನಪರ ಸರ್ಕಾರ ಬರಬೇಕೆಂದು ಕಾಂಗ್ರೆಸ್ ಗೆ ಅವಕಾಶ ಕೊಟ್ಟಿದ್ದಾರೆ. ಜನ ತಮ್ಮ ಸಂಕಷ್ಟಗಳು ಕಡಿಮೆ ಆಗಬಹುದು ಎಂದು ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ ಜನರ ನಿರೀಕ್ಷೆ ಹುಸಿಗೊಳಿಸಬಾರದು” ಎಂದು ತಿಳಿಸಿದ್ದಾರೆ.
“ಚುನಾವಣೆ ಪೂರ್ವದಲ್ಲಿ ಮಾಡಿದ ಎಲ್ಲ ಭರವಸೆಗಳು ಗೊಂದಲ ಇಲ್ಲದೆ ಜನರಿಗೆ ತಲುಪಿಸುವ ಪ್ರಯತ್ನ ಆಗಬೇಕು. ಗ್ಯಾರಂಟಿಗಳ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವುದು ನಿಲ್ಲಿಸಬೇಕು” ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ