ನೆಟೆ ರೋಗಕ್ಕೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ; 74 ಕೋಟಿ ರೂಪಾಯಿ ಮಂಜೂರು

Date:

  • ನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಪರಿಹಾರ ಧನ ಬಿಡುಗಡೆ
  • ಶೀಘ್ರದಲ್ಲೇ ಉಳಿದ ಪರಿಹಾರದ ಹಣ ಪಾವತಿ ಎಂದ ಕೃಷಿ ಸಚಿವರು

ನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಮೊದಲ ಹಂತದ ಪರಿಹಾರ ಧನವಾಗಿ 74 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 2022-23 ಮುಂಗಾರು ಹಂಗಾಮಿನಲ್ಲಿ ಹಾನಿಯಾದ ತೊಗರಿ ಬೆಳೆಗೆ ಪರಿಹಾರವಾಗಿ ನೀಡಿರುವ ಮೊದಲ ಹಂತದ ಪರಿಹಾರ ಧನ ಇದಾಗಿದೆ ಎಂದು ಹೇಳಿದ್ದಾರೆ.

ಪ್ರಸಕ್ತ ಹಂಗಾಮಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 198488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10259 ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೀಗೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ 10 ಸಾವಿರ ಪರಿಹಾರದಂತೆ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿ ರೂಪಾಯಿಗಳ ಅನುದಾನ ಘೋಷಿಸಲಾಗಿದ್ದು, ಇದರ ಪೈಕಿ ಮೊದಲ ಹಂತದಲ್ಲಿ 1/3 ಭಾಗದಷ್ಟು, ಅಂದರೇ 74 ಕೋಟಿ ರೂಪಾಯಿ ಪರಿಹಾರ ಹಣವನ್ನು ಸಾದಿಲ್ವಾರು ನಿಧಿಯಿಂದ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಬೀದರ್ | ಔರಾದ ಶಾಸಕರ ಊರಿನಲ್ಲೇ ಇಲ್ಲ ಖಾಯಂ ಶಿಕ್ಷಕರು

ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯಾಗಿ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರದ ಹಣ ವಿತರಿಸಲಾಗುವುದು. ಉಳಿದ ಪರಿಹಾರದ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಲ್ಮೀಕಿ ನಿಗಮ ಅಕ್ರಮ | ಇ.ಡಿ ವಿರುದ್ಧ ನೇರ ಸಂಘರ್ಷಕ್ಕೆ ಇಳಿದ ರಾಜ್ಯ ಸರ್ಕಾರ, ಗಾಂಧಿ ಪ್ರತಿಮೆ ಬಳಿ ಧರಣಿ

ವಾಲ್ಮೀಕಿ ನಿಗಮ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ...

ವಾಲ್ಮೀಕಿ ನಿಗಮ ಅಕ್ರಮ | ಮಾಜಿ ಸಚಿವ ನಾಗೇಂದ್ರ ಹೆಸರು ಹೇಳುವಂತೆ ಇ.ಡಿ ಒತ್ತಡ; ಎಂಡಿ ಕಲ್ಲೇಶ್ ದೂರು ದಾಖಲು

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಾಜಿ ಸಚಿವ ನಾಗೇಂದ್ರ ಅವರ...

ಸರ್ಕಾರಿ ನೌಕರರ ಆರ್‌ಎಸ್‌ಎಸ್‌ ಚಟುವಟಿಕೆ ಮೇಲಿನ ನಿಷೇಧ ತೆರವು; ವಿಪಕ್ಷಗಳಿಂದ ಖಂಡನೆ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರ ಮೇಲಿನ...

7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ...