ಪಬ್ಲಿಕ್ ಪರೀಕ್ಷೆ ರದ್ದು: ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲಿ ಸರ್ಕಾರ

Date:

5, 8, 9, 11 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲಿ ಕರ್ನಾಟಕ ಸರ್ಕಾರ, ಶಿಕ್ಷಣ ಇಲಾಖೆ.

ತಾತ್ವಿಕವಾಗಿ, ಸೈದ್ಧಾಂತಿಕವಾಗಿ ಮಕ್ಕಳನ್ನು ಈ ರೀತಿ ಪರೀಕ್ಷೆಗಳಿಗೆ ಗುರಿಪಡಿಸುವುದು ಮಕ್ಕಳ ಹಕ್ಕುಗಳ ವಿರುದ್ಧ ಎನಿಸಿಕೊಳ್ಳುತ್ತದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಮೂಲಭೂತ ಸೌಕರ್ಯಗಳಿಲ್ಲ, ಸಮರ್ಪಕವಾಗಿ ಪಠ್ಯ ಪುಸ್ತಕಗಳ ವಿತರಣೆಯಾಗಿಲ್ಲ. ಈ ಕೊರತೆಗಳ ಕಾರಣದಿಂದ ಅಲ್ಲಿ ಓದುತ್ತಿರುವ ಗ್ರಾಮೀಣ ಭಾಗದ, ವಂಚಿತ ಸಮುದಾಯದ ಮಕ್ಕಳು ರಾಜ್ಯ ಮಟ್ಟದ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸಲು ತರಬೇತಿ ಪಡೆದಿರುವುದಿಲ್ಲ. ಪ್ರತಿಭೆ ಇದ್ದರೂ ಇಂತಹ ಅನಾಹುತಕಾರಿ ನಿರ್ಧಾರಗಳ ಕಾರಣದಿಂದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಸರ್ಕಾರವು ಮೊದಲು ಸರ್ಕಾರಿ ಶಾಲೆಗಳನ್ನು ಬಲಪಡಿಸಲಿ, ನಂತರ ಮುಂದಿನ ವಿಚಾರ.

ಎರಡನೆಯದಾಗಿ 5, 8, 9 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಶಿಕ್ಷಣ ಹಕ್ಕುಗಳ ಕಾಯ್ದೆ (ಆರ್‍‌ಟಿಇ) 2009ರ ಸೆಕ್ಷನ್ 16ರ ಉಲ್ಲಂಘನೆಯಾಗುತ್ತದೆ. ಅದರ ಪ್ರಕಾರ ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೂ ಮಕ್ಕಳನ್ನು ಫೇಲು ಮಾಡುವಂತಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ 2019ರಲ್ಲಿ ಭಾರತೀಯ ಜನತಾ ಪಕ್ಷವು ತನ್ನ ಅನೀತಿಗೆ ಅನುಗುಣವಾಗುವಂತೆ ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೆಕ್ಷನ್ 16ನ್ನು ತಿದ್ದುಪಡಿ ಮಾಡಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸದೆ ಸತತವಾಗಿ ಪರೀಕ್ಷೆಗಳ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಮೌಲ್ಯಮಾಪನ ಮಾಡುವುದು ಅಮಾನವೀಯವಲ್ಲವೇ? ಇದು ವಂಚಿತ ಸಮುದಾಯದ ಮಕ್ಕಳನ್ನು ಶಿಕ್ಷಣದಿಂದ ಹೊರದೂಡುತ್ತದೆ.

2023ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಈ ತಿದ್ದುಪಡಿಯನ್ನು ರದ್ದುಗೊಳಿಸಿ ಮೂಲದಲ್ಲಿದ್ದ ಸೆಕ್ಷನ್ 16ನ್ನು ಮರಳಿ ತರಬೇಕಿತ್ತು. ಆದರೆ ಇದನ್ನು ಮಾಡದೆ ಹಿಂದಿನ ಸರ್ಕಾರದ ಪಬ್ಲಿಕ್ ಪರೀಕ್ಷೆ ಎನ್ನುವ ಅನೀತಿಯನ್ನು ಮುಂದುವರಿಸಿದೆ.

ಇದನ್ನು ಓದಿದ್ದೀರಾ?: ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಪಡಿಸಿದ ಹೈಕೋರ್ಟ್

ಮೂರನೆಯದಾಗಿ 5, 8, 9 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ವಿಧಾನಮಂಡಲದಲ್ಲಿ ಚರ್ಚೆ ನಡೆಸಲಿಲ್ಲ. ಶಿಕ್ಷಣದ ಭಾಗೀದಾರರೊಂದಿಗೆ ಸಮಾಲೋಚನೆ ಮಾಡಲಿಲ್ಲ. ಏಕಪಕ್ಷೀಯವಾಗಿ ಕೇವಲ ಅಧಿಸೂಚನೆ ಮೂಲಕ ತಿದ್ದುಪಡಿ ಮಾಡುವುದು ಸಂವಿಧಾನ ವಿರೋಧಿ ನೀತಿಯಲ್ಲವೇ?

ಮುಖ್ಯವಾಗಿ ಎನ್ಇಪಿ 2020ಯನ್ನು ವಿರೋಧಿಸಿದ ಕಾಂಗ್ರೆಸ್ ‘ಕೇಂದ್ರ ಬಿಜೆಪಿ ಸರ್ಕಾರವು ಸಂಸತ್ತಿನಲ್ಲಿ ಚರ್ಚೆ ಮಾಡಲಿಲ್ಲ, ರಾಜ್ಯ ಬಿಜೆಪಿ ಸರ್ಕಾರವು ವಿಧಾನ ಮಂಡಲದಲ್ಲಿ ಚರ್ಚೆ ಮಾಡಲಿಲ್ಲ’ ಎಂದು ಸಕಾರಣವಾಗಿ ಪ್ರತಿಭಟಿಸಿದ್ದರು. ಈಗ ಅಧಿಕಾರಕ್ಕೆ ಬಂದ ನಂತರ ಸ್ವತಃ ತಾವೇ ಆ ರೀತಿ ನಡೆದುಕೊಳ್ಳುವುದು ಸರಿಯೇ?

ಮತ್ತು ಎನ್ಇಪಿಯನ್ನು ವಿರೋಧಿಸುವ ಕಾಂಗ್ರೆಸ್ ಸರ್ಕಾರ ಪಬ್ಲಿಕ್ ಪರೀಕ್ಷೆ ನಡೆಸಬೇಕೆಂದು ಹೇಳಿದ ಅದರ ಶಿಫಾರಸ್ಸನ್ನು ಜಾರಿಗೊಳಿಸುತ್ತಿರುವುದು ಎಂತಹ ವ್ಯಂಗ್ಯ ಮತ್ತು ವೈರುಧ್ಯ?

ಬಿ ಶ್ರೀಪಾದ್ ಭಟ್
+ posts

ಲೇಖಕರು, ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು

ಪೋಸ್ಟ್ ಹಂಚಿಕೊಳ್ಳಿ:

ಬಿ ಶ್ರೀಪಾದ್ ಭಟ್
ಬಿ ಶ್ರೀಪಾದ್ ಭಟ್
ಲೇಖಕರು, ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಜೈಲಿನಲ್ಲಿ ದೆಹಲಿ ಸಿಎಂ; ಎಎಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಪತ್ನಿಗೆ ಪ್ರಮುಖ ಪಾತ್ರ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ...

ತೆಲಂಗಾಣ | 4,568 ಕೋಟಿ ರೂ. ಒಡೆಯ ಕೆ.ವಿಶ್ವೇಶ್ವರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಬಿಜೆಪಿ ಅಭ್ಯರ್ಥಿ

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...