ಗ್ಯಾರಂಟಿ ಜಾರಿಗೆ ಸಮಯ ಬೇಕು; ಕೊಟ್ಟ ಮಾತು ಈಡೇರಿಸುತ್ತೇವೆ : ಡಿ ಕೆ ಶಿವಕುಮಾರ್

Date:

  • ಅಧಿಕಾರಿಗಳ ಸಭೆ ಬಳಿಕ ಗ್ಯಾರಂಟಿ ಯೋಜನೆಗಳ ಜಾರಿ
  • ಗ್ಯಾರಂಟಿಗಳ ಬ್ಲೂಪ್ರಿಂಟ್ ಸಿದ್ಧತೆ ಬಗ್ಗೆ ಚರ್ಚೆಯಾಗಲಿದೆ

ನಮ್ಮ ಸರ್ಕಾರ ಘೋಷಿತ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಿದೆ. ನಾವು ಕೊಟ್ಟ ಮಾತು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಕ್ರಮವಾಗಿ ಲೋಪವಿಲ್ಲದೆ ಜಾರಿ ಮಾಡಬೇಕಾಗಿದೆ. ಹೀಗಾಗಿ ಯೋಜನೆ ಜಾರಿಗೆ ಸಮಯ ಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಖಾತರಿ ಯೋಜನೆ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇಂದಿನ ಸಭೆಯಲ್ಲಿ ಯೋಜನೆಗಳ ಬ್ಲೂಪ್ರಿಂಟ್ ಸಿದ್ಧತೆ ಬಗ್ಗೆ ಚರ್ಚೆಯಾಗಲಿದೆ ಎಂದವರು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಜನರಿಗೆ ಮೊದಲು 15 ಲಕ್ಷ ಕೊ‌ಡಲಿ, ನಂತರ ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡಲಿ: ಡಿ ಕೆ ಶಿವಕುಮಾರ್

ಸಂಪುಟ ಸಭೆಯಲ್ಲಿ ಯೋಜನೆ ಜಾರಿ ಬಗ್ಗೆ ನಿರ್ಧಾರವಾಗಲಿದೆ. ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಅಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಅದಕ್ಕೂ ಮೊದಲು ಸಭೆಗೆ ಅಗತ್ಯವಾದ ಮಾಹಿತಿಗಳನ್ನ ಒಗ್ಗೂಡಿಸಿಕೊಳ್ಳಲು ಈ ಸಭೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಯೋಜನೆಗಳ ಜಾರಿ ವಿಚಾರದಲ್ಲಿ ಯಾರೂ ಅನುಮಾನ ಪಡುವಂತಿಲ್ಲ ಕೊಟ್ಟ ಮಾತಿನಂತೆಯೇ ನಾವು ನಡೆದುಕೊಳ್ಳುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.‌

ಇದಕ್ಕೂ ಮುನ್ನ ಡಿ ಕೆ ಶಿವಕುಮಾರ್ ಅವರು ತಾವು ವ್ಯಾಸಂಗ ಮಾಡಿದ ಬೆಂಗಳೂರಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ (ಎನ್ ಪಿ ಎಸ್) ಸ್ಥಾಪಕ ಅಧ್ಯಕ್ಷ ಡಾ. ಕೆ ಪಿ ಗೋಪಾಲಕೃಷ್ಣ ಅವರನ್ನು ಇಂದು ಬೆಳಗ್ಗೆ ಭೇಟಿ ಮಾಡಿ ಆಶೀರ್ವಾದ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...