ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ: ವಿಪಕ್ಷ ನಾಯಕ ಆರ್‌ ಅಶೋಕ್‌ ಟೀಕೆ

Date:

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದ ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಹುದ್ದೆ ಖಾಲಿ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 25,000 ಗಡಿ ದಾಟಿದ ಡೆಂಘೀ ಪ್ರಕರಣ ಪತ್ತೆಯಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

- Advertisement -

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಇದೆ ಎಂಬ ವರದಿ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, “ಬಿಲ್ ಪಾವತಿ ಮಾಡಲಾಗದೆ 14 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ, ಎಂಆರ್‌ಐ ಸ್ಕ್ಯಾನಿಂಗ್ ಸ್ಥಗಿತಗೊಂಡಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧಿಗಳ ಅನುದಾನ 40% ಕಟ್ ಆಗಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“3,500 ಆಂಬುಲೆನ್ಸ್ ಚಾಲಕರಿಗೆ 3 ತಿಂಗಳಿಂದ ಸಂಬಳ ಇಲ್ಲ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದೇ ದಿನ ಮೂವರು ಗರ್ಭಿಣಿ ಮಹಿಳೆಯರ ಸಾವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕು ಹೆಚ್ಚು ಔಷಧಿಗಳು ‘No Stock’ ಎಂದು ಬೋರ್ಡ್‌ ಹಾಕಲಾಗಿದೆ” ಎಂದು ಕುಟುಕಿದ್ದಾರೆ.

“ಇಷ್ಟೆಲ್ಲಾ ಎಡವಟ್ಟುಗಳ ಮೇಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ ದರ 20% ಹೆಚ್ಚಳವಾಗಿದೆ. ಒಂದು ವೇಳೆ ಸಂಪುಟ ಪುನಾರಚನೆ ಆದರೆ ಬಹುಶಃ ಮೊದಲು ತಲೆದಂಡ ಆಗಬೇಕಾಗಿರುವುದು ಆರೋಗ್ಯ ಸಚಿವರದೇ!” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...