- ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ
- ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ
ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಮುರುಘಾ ಶ್ರೀ ವಿರುದ್ದ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಡೆಸುತ್ತಿರುವ ಸಾಕ್ಷಿಗಳ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣದ ಆರೋಪಿ ಮುರುಘಾ ಶ್ರೀ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜು.1ರ ವರೆಗೆ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.
2022ರ ಆ.26ರಂದು ಮುರುಘಾ ಮಠದ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಸುದ್ದಿ ಓದಿದ್ದೀರಾ?: ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗೆ ಎಸ್ಐಟಿ ರಚನೆ; ವಾರದ ಬಳಿಕ ನಿರ್ಧಾರ
ಪೊಲೀಸರು ಮುರುಘಾ ಶ್ರೀ ಅವರನ್ನು 2022ರ ಸೆ.1ರಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಶರಣರು, ತಮ್ಮ ವಿರುದ್ಧ ಸೆಷನ್ಸ್ ನ್ಯಾಯಾಲಯ ಆದೇಶಿಸಿರುವ ಸಾಕ್ಷಿ ವಿಚಾರಣೆ ಕ್ರಮ ಪ್ರಶ್ನೆಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.